ಉಜಿರೆ, ಜೂ .29 : ಇಂದು ಬೆಳ್ಳಂಬೆಳಗ್ಗೆ ನಡೆದ ಅಪಘಾತದಲ್ಲಿ ಬೆಳ್ತಂಗಡಿ ಪ್ರಜ್ವಲ್ ಕಾಂಪ್ಲೆಕ್ಸ್ ಮಾಲೀಕರ ಪುತ್ರ ಪ್ರಜ್ವಲ್ ನಾಯಕ್ (35) ಸಾವನ್ನಪ್ಪಿದ್ದಾರೆ.
ಪ್ರಜ್ವಲ್ ನಾಯಕ್ ಅವರ ಕಾರು ವೇಗವಾಗಿ ಬಂದು ಡಿವೈಡರ್ ಮೇಲಿನ ಬೀದಿದೀಪಕ್ಕೆ ಡಿಕ್ಕಿಯಾಗಿ ಪಲ್ಟಿಯಾಗಿದೆ. ಇದರಿಂದಾಗಿ ಪ್ರಜ್ವಲ್ ಗಂಭೀರವಾಗಿ ಗಾಯಗೊಂಡಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ.