ಬೆಳ್ತಂಗಡಿ, ಜೂ.28: ಖಾಸಗಿ ಬಸ್ ಹಾಗೂ ಬೈಕ್ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರ, ನಡ ಗ್ರಾಮ ಕರಣಿಕರ ಕಚೇರಿ ಸಿಬ್ಬಂದಿ ಮೃತಪಟ್ಟ ಘಟನೆ ಲಾಯಿಲದಲ್ಲಿ ಜೂ.28 ರಂದು ನಡೆದಿದೆ.
ಬಳಂಜ ನಿವಾಸಿ, ನಡ ಗ್ರಾಮ ಕರಣಿಕರ ಕಚೇರಿ ಸಹಾಯಕ ಜಯರಾಜ್(50) ಮೃತಪಟ್ಟವರು.
ಕಿಲ್ಲೂರಿನಿಂದ ಬೆಳ್ತಂಗಡಿಗೆ ಬರುತ್ತಿದ್ದ ಖಾಸಗಿ ಬಸ್ ಹಾಗೂ ಬೆಳ್ತಂಗಡಿ ಕಡೆಯಿಂದ ನಡಕ್ಕೆ ತೆರಳುತ್ತಿದ್ದ ಬೈಕ್ ಮಧ್ಯೆ ಪುತ್ರಬೈಲು ಎಂಬಲ್ಲಿ ಈ ಅಪಘಾತ ಸಂಭವಿಸಿದ್ದು , ಅವರನ್ನು ಆಸ್ಪತ್ರೆಗೆ ಸಾಗಿಸುವ ದಾರಿಮಧ್ಯೆ ಕೊನೆಯುಸಿರೆಳೆದಿದ್ದಾರೆ ಎಂದು ಹೇಳಲಾಗಿದೆ.
ಬೆಳ್ತಂಗಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.