ವಿಟ್ಲ, ಜು.6: ಚಲಿಸುತ್ತಿದ್ದ ಕಾರಿನ ಮೇಲೆ ಮರ ಉರುಳಿಬಿದ್ದ ಪರಿಣಾಮ ಕಾರು ಜಖಂಗೊಂಡ ಘಟನೆ ಕೊಡಾಜೆ-ಅನಂತಾಡಿ ರಸ್ತೆಯ ಗೋಳಿಕಟ್ಟೆ ಎಂಬಲ್ಲಿ ಇಂದು ನಡೆದಿದೆ.
ಶಬರಿ ರತ್ನಾಕರ ಎಂಬವರು ಕಾರು ಚಲಾಯಿಸಿಕೊಂಡು ಹೋಗುತ್ತಿದ್ದಾಗ ಕೊಡಾಜೆ-ಅನಂತಾಡಿ ರಸ್ತೆಯ ಗೋಳಿಕಟ್ಟೆ ಎಂಬಲ್ಲಿ ಮರವೊಂದು ಉರುಳಿ ಅವರ ಕಾರಿನ ಮೇಲೆ ಬಿದ್ದಿದೆ. ತಕ್ಷಣವೇ ಸ್ಥಳೀಯರು ಮರವನ್ನು ತೆರವುಗೊಳಿಸಿದರು ಎನ್ನಲಾಗಿದೆ.