ಹಾವೇರಿ, ಜು. 08 : ಮಾಜಿ ಸಚಿವ ಬಿ.ಸಿ ಪಾಟೀಲ್ ಅಳಿಯ ಕೆ.ಜಿ ಪ್ರತಾಪ್ ಕುಮಾರ್ (41) ಅವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಅರಕೆರೆ ಗ್ರಾಮದ ಬಳಿ ಅರಣ್ಯ ಪ್ರದೇಶದಲ್ಲಿ ಸೋಮವಾರ ನಡೆದಿದೆ.
ಹಿರೇಕೆರೂರ್ ನಿಂದ ಶಿವಮೊಗ್ಗಕ್ಕೆ ತೆರಳುತ್ತಿ ದ್ದ ಅವರು ಹೊನ್ನಾಳಿ ಸಮೀಪದ ಅರಕೆರೆ ಗ್ರಾಮದ ಬಳಿ ರಸ್ತೆ ಬದಿ ಕಾರು ನಿಲ್ಲಿಸಿ ವಿಷ ಸೇವಿಸಿದ್ದಾರೆ. ವಿಷ ಸೇವಿಸಿದ ಅಸ್ವಸ್ಥರಾಗಿದ್ದ ಅವರನ್ನು ಕಂಡಂತಹವರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಅವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.