ಬೈಂದೂರು, ಜು 11: ತೆಂಗಿನಕಾಯಿ ಹೆಕ್ಕಲು ಹೋದ ವ್ಯಕ್ತಿಯೊಬ್ಬರು ಅಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದು ಸಾವನ್ನಪ್ಪಿದ ಘಟನೆ ಜು.10ರಂದು ನಡೆದಿದೆ.
ಬಡಾಕೆರೆ ನಿವಾಸಿ ಮಂಜುನಾಥ (85) ಮೃತ ವ್ಯಕ್ತಿ
ತೋಟದ ಬಾವಿಯ ಬದಿಯಲ್ಲಿ ಬಿದ್ದಿರುವ ತೆಂಗಿನಕಾಯಿಯನ್ನು ಹೆಕ್ಕುವಾಗ ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದು ಮಂಜುನಾಥ ಅವರು ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ.
ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.