ಮಂಗಳೂರು, ಜು. 12: ಮಂಗಳೂರಿನ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರ ಕಚೇರಿ ಜುಲೈ 12 ರಂದು ಶುಕ್ರವಾರ ಉದ್ಘಾಟನೆಗೊಂಡಿತು.
ಜಿಲ್ಲಾಧಿಕಾರಿ ಕಚೇರಿ ಕಟ್ಟಡದ ಸಂಕೀರ್ಣದಲ್ಲಿ ಆರಂಭಿಸಲಾಗಿರುವ ಈ ಕಾರ್ಯಾಲಯವನ್ನು ಆರೆಸ್ಸೆಸ್ ಮುಖಂಡ ಡಾ. ಕಲ್ಲಡ್ಕ ಪ್ರಭಾಕರ ಭಟ್ ಅವರು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಆರ್‌ಎಸ್‌ಎಸ್ನ ಪ್ರಮುಖರಾದ ಕಲ್ಲಡ್ಕ ಪ್ರಭಾಕರ ಭಟ್ ಗಡಿಯಲ್ಲಿ ಸೈನಿಕರು ಹೇಗೆ ಕೆಲಸ ಮಾಡುತ್ತಾರೆಯೋ ಅದೇ ರೀತಿ ಜನರ ಹಕ್ಕುಗಳಿಗಾಗಿ ಚೌಟ ಕೆಲಸ ಮಾಡುತ್ತಾರೆ . ಸಂಸದರ ಸ್ಥಾನವು ಕೇವಲ ಕುಳಿತುಕೊಳ್ಳುವುದು ಮಾತ್ರವಲ್ಲ, ಅವರು ಪ್ರಾಮಾಣಿಕ ಸಂಸದರಾಗಿ ಕೆಲಸ ಮಾಡುತ್ತಾರೆ ಮತ್ತು ಶ್ರಮಿಸುತ್ತಾರೆ ಎಂದು ನಾನು ನಂಬುತ್ತೇನೆ ಎಂದರು.
ಈ ಸಂದರ್ಭದಲ್ಲಿ ಮಾತನಾಡಿದ ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ನಾನು ಜನರ ಹಕ್ಕುಗಳಿಗಾಗಿ ಕೆಲಸ ಮಾಡಲು ಬಯಸುತ್ತೇನೆ. ನರೇಂದ್ರ ಮೋದಿಯವರ ‘ವಿಕಸಿತ ಭಾರತ್’ ನ ಅದೇ ಕನಸಿನೊಂದಿಗೆ ನಾವು ‘ವಿಕಸಿತ ದಕ್ಷಿಣ ಕನ್ನಡ’ ಮಾಡುವುದನ್ನು ಖಚಿತಪಡಿಸಿಕೊಳ್ಳುತ್ತೇನೆ. ಜನರ ಸಮಸ್ಯೆಗಳನ್ನು ಆಲಿಸಲು ಮತ್ತು ಪರಿಹರಿಸಲು ಇಲ್ಲಿ ಕಚೇರಿಯಲ್ಲಿ ಕೆಲಸ ಮಾಡಲಿದ್ದೇನೆ ಎಂದರು.
ಇದೇ ಸಂದರ್ಭದಲ್ಲಿ ಮಾತನಾಡಿದ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ವೇದವ್ಯಾಸ್ ಕಾಮತ್ ಮಾತಾಡಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಜನರ ಸಮಸ್ಯೆಗಳನ್ನು ಪರಿಹರಿಸಲಿದ್ದಾರೆ, ಈ ಸಂದರ್ಭದಲ್ಲಿ ಅವರನ್ನು ಅಭಿನಂದಿಸುತ್ತೇನೆ ಎಂದರು.
ಈ ಸಂದರ್ಭದಲ್ಲಿ ಸತೀಶ್ ಕುಂಪಲ, ವೇದವ್ಯಾಸ್ ಕಾಮತ್, ಡಾ.ಭರತ್ ಶೆಟ್ಟಿ, , ಪ್ರತಾಪ್ ಸಿಂಹ ನಾಯ್ಕ್, ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ಸುದೀ ರ್ ಶೆಟ್ಟಿ ಕಣ್ಣೂರು ಸೇರಿದಂತೆ ಬಿಜೆಪಿ ಪಕ್ಷದ ಸದಸ್ಯರು ಉಪಸ್ಥಿತರಿದ್ದರು.