ಮಹಾನಗರ, ಜು, 17: ಶ್ರೀ ಮಾತಾ ಅಮೃತಾನಂದಮಯಿ ಮಠ ಮಂಗಳೂರು ವತಿಯಿಂದ ಗುರು ಪೂರ್ಣಿಮಾ ದಿನವಾದ 21ರಂದು ಬೆಳಗ್ಗೆ 9 ಗಂಟೆಗೆ ಉರ್ವದ ಶ್ರೀ ಮಾರಿಯಮ್ಮ ದೇವಸ್ಥಾನದ ಸಭಾಂಗಣದಲ್ಲಿ ಶ್ರೀ ಗುರು ಪಾದುಕಾ ಪೂಜೆ, ದೇವೀ ಪೂಜೆ, ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ ಎಂದು ಮಾತಾ ಅಮೃತಾನಂದಮಯಿ ಸೇವಾ ಸಮಿತಿ ಅಧ್ಯಕ್ಷ ಡಾ| ವಸಂತ ಕುಮಾರ್ ಪೆರ್ಲ ಅವರು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜು. 21ರಂದು ಶ್ರೀ ಮಾತಾ ಅಮೃತಾನಂದಮಯಿ ಮಠ ಮಂಗಳೂರು ಇದರ ಮಠಾಧಿಪತಿ ಸಂಪೂಜ್ಯ ಸ್ವಾಮಿನಿ ‘ ಮಂಗಳಾಮೃತ ಪ್ರಾಣ ಅವರ ಉಪಸ್ಥಿತಿಯಲ್ಲಿ ಶ್ರೀ ಗುರು ಪಾದುಕಾ ಪೂಜೆ, ದೇವೀ ಪೂಜೆ, ಅರ್ಚನೆ, ಗುರು ಪೂರ್ಣಿಮಾ ದಿನದ ಮಹತ್ವದ ಕುರಿತು ಸಂದೇಶ, ಭಜನೆ, ಆರತಿ, ಭಕ್ತರಿಂದ ಕ್ಷೀರಾಭಿಷೇಕ, ಮಹಾ ಪ್ರಸಾದ ವಿತರಣೆ ನಡೆಯಲಿದೆ. ಅಂದು ಬೆಳಗ್ಗೆ ಶ್ರೀ ಬ್ರಹ್ಮಸ್ಥಾನ ಕ್ಷೇತ್ರದಲ್ಲಿ ಗುರು ಹೋಮ, ಮಹಾ ಮೃತ್ಯುಂಜಯ ಹೋಮ ನಡೆಯಲಿದೆ ಎಂದು ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಅಮೃತಾನಂದಮಯಿ ಸೇವಾ ಸಮಿತಿ ಅಧ್ಯಕ್ಷ ಡಾ| ವಸಂತ ಕುಮಾರ್ ಪೆರ್ಲ ,ಸೇವಾ ಸಮಿತಿ ಉಪಾಧ್ಯಕ್ಷ ಸುರೇಶ್ ಅಮೀನ್, ಕಾವ್ಯದರ್ಶಿ ಡಾ| ಅಶೋಕ್ ಶೆಣೈ ಉಪಸ್ಥಿತರಿದ್ದರು.