ಬೆಂಗಳೂರು : ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿಯಾಗಿ ಡಾ.ಶಾಲಿನಿ ರಜನೀಶ್ ಅವರನ್ನು ನೇಮಕ ಮಾಡಲಾಗಿದೆ. ಮುಖ್ಯ ಕಾರ್ಯದರ್ಶಿಯಾಗಿರುವ ಡಾ.ರಜನೀಶ್ ಗೋಯಲ್ ಅವರು ಜು.31ಕ್ಕೆಸೇವಾ ನಿವೃತ್ತಿ ಹೊಂದಲಿದ್ದಾರೆ.
ಮುಂದಿನ ಮುಖ್ಯ ಕಾರ್ಯದರ್ಶಿಯಾಗಿ ನೇಮಕ ಮಾಡಲು ಶುಕ್ರವಾರ (ಜು.26) ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ. ಡಾ.ಶಾಲಿನಿ ರಜನೀಶ್ ಅವರ ಡಾ.ರಜನೀಶ್ ಗೋಯಲ್ ಪತ್ನಿ. 1989ನೇ ಬ್ಯಾಚ್ನ ಐಎಎಸ್ ಅಧಿಕಾರಿಯಾಗಿರುವ ಶಾಲಿನಿ ರಜನೀಶ್ ಅವರು 2027ರ ಜೂನ್ ಅಂತ್ಯಕ್ಕೆ ನಿವೃತ್ತರಾಗಲಿದ್ದಾರೆ.ಆಗಸ್ಟ್ 1 ರಿಂದ ಶಾಲಿನಿ ರಜನೀಶ್ ಅವರು ಮುಖ್ಯಕಾರ್ಯದರ್ಶಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ.