ಮಂಗಳೂರು, ಜು.30 : ನಗರದ ನಂತೂರು ಪದವು ಎಂಬಲ್ಲಿ ಟ್ಯಾಂಕರ್ ಢಿಕ್ಕಿ ಹೊಡೆದ ಪರಿಣಾಮ ಸ್ಕೂಟ್ ಸವಾರ ಸಾವನ್ನಪ್ಪಿದ ಘಟನೆ ಮಂಗಳವಾರ ನಡೆದಿದೆ.
ಶಿವಾನಂದ ಮೃತಪಟ್ಟ ಸ್ಕೂಟರ್ ಸವಾರ. ಶಿವಾನಂದ ಅವರು ಕೆಪಿಟಿಯಿಂದ ನಂತೂರು ಪದವು ರಸ್ತೆಯಾಗಿ ಸ್ಕೂಟರ್ ನಲ್ಲಿ ತೆರಳುತ್ತಿದ್ದ ವೇಳೆ ವಿರುದ್ಧ ದಿಕ್ಕಿನಲ್ಲಿ ಬಂದ ಟ್ಯಾಂಕರ್ ಢಿಕ್ಕಿ ಹೊಡೆದಿದೆ. ಇದರಿಂದ ಸ್ಕೂಟರ್ ಸವಾರಿ ಮಾಡುತ್ತಿದ್ದ ಶಿವಾನಂದರ ತಲೆಯ ಮೇಲೆ ಟ್ಯಾಂಕರ್ ಹರಿದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.