ಮಂಗಳೂರು, ಅ. 06 : ಜಪ್ಪು ಬಂಟರ ಸಂಘದ ಆಶ್ರಯದಲ್ಲಿ ಬಂಟರ ಯಾನೆ ನಾಡವರ ಮಾತೃಸಂಘ ಹಾಗೂ ಜಾಗತಿಕ ಬಂಟರ ಸಂಘ ಒಕ್ಕೂಟದ ಸಹಭಾಗಿತ್ವದಲ್ಲಿ ಎಮ್ಮೆಕೆರೆ ರಮಾಲಕ್ಷ್ಮೀ ನಾರಾಯಣ ಕನ್ವೆನ್ನನ್ ಹಾಲ್‌ನಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ ಜು 28 ಆದಿತ್ಯವಾರ ನಡೆಯಿತು.
ಈ ಆಟಿಡೊಂಜಿ ದಿನ ಕಾರ್ಯಕ್ರಮವನ್ನು ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷರಾದ ಅಜಿತ್ ಕುಮಾರ್ ರೈ ಮಾಲಾಡಿ ಉದ್ಘಾಟಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ವಸಂತ್ ಶೆಟ್ಟಿ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು, ಶ್ರೀ ರಾಮಕೃಷ್ಣ ಕೋ ಆಪರೇಟಿವ್ ಸೊಸೈಟಿ, ಮಂಗಳೂರು ಇದರ ಅಧ್ಯಕ್ಷ ಕೆ.ಜೈರಾಜ್ ಬಿ. ರೈ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಕೆ. ರವೀಂದ್ರ ಶೆಟ್ಟಿ ಉಳಿದೊಟ್ಟು, ಮನಪಾ ವಿಪಕ್ಷ ನಾಯಕ ಟಿ.ಪ್ರವೀಣ್ ಚಂದ್ರ ಅಳ್ವ, ಉದ್ಯಮಿ ನಿಟ್ಟೆಗುತ್ತು ರವಿರಾಜ್ ಶೆಟ್ಟಿ, , ಉದ್ಯಮಿ ಗಿರೀಶ್ ಶೆಟ್ಟಿ ಕಟೀಲು, ಕಂಕನಾಡಿ ವಲಯ ಬಂಟರ ಸಂಘದ ಅಧ್ಯಕ್ಷ ಕಮಲಾಕ್ಷ ಶೆಟ್ಟಿ, ರಾಜ್‌ಕುಮಾರ್ ಶೆಟ್ಟಿ, ಸುನೀಲ್ ಶೆಟ್ಟಿ ರಾಜ ಶೆಟ್ಟಿ, ಸಂಘದ ಪದಾಧಿಕಾರಿಗಳು, ಸದಸ್ಯರು ಸಮರಂಭದಲ್ಲಿ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು, ಪ್ರತಿಭಾ ಪುರಸ್ಕರ, ವಿದ್ಯಾರ್ಥಿವೇತನ, ಗೌರವ ಅಭಿನಂದನಾ ಕಾರ್ಯಕ್ರಮ, ಸಮ್ಮಾನ ಕಾರ್ಯಕ್ರಮ ನೆರವೇರಿತು.