ಉಡುಪಿ, ಆ.12 : ಮಹಾಲಕ್ಷ್ಮಿ ಕೋ ಆಪರೇಟಿವ್ ಬ್ಯಾಂಕಿನ ಡಿಜಿಟಲ್ ಬ್ಯಾಂಕಿಂಗ್ ವ್ಯವಸ್ಥೆಗೆ ರಾಷ್ಟ್ರೀಯ ಸಹಕಾರಿ ನೀತಿ ಆಯೋಗದ ಅಧ್ಯಕ್ಷ ಸುರೇಶ್ ಪಿ. ಪ್ರಭು ಉಡುಪಿಯ ಶ್ಯಾಮಿಲಿ ಸಭಾಂಗಣದಲ್ಲಿ ಅವರು ಶನಿವಾರ ವಿದ್ಯುಕ್ತ ಚಾಲನೆ ನೀಡಿದರು.
ನಂತರ ಮಾತನಾಡಿ ಸುರೇಶ್ ಪಿ. ಪ್ರಭು ಅವರು ಸಹಕಾರಿ ವ್ಯವಸ್ಥೆಯಿಂದ ಭಾರತದ ಆರ್ಥಿಕತೆಯ ಉತ್ತೇಜನ ಸಾಧ್ಯ. ಇಂದಿನ ದಿನಮಾನದಲ್ಲಿ ಡಿಜಿಟಲ್ ಆರ್ಥಿಕತೆ ದೇಶದ ಆರ್ಥಿಕ ಅಭಿವೃದ್ಧಿಗೆ ಪೂರಕ. ಈ ನಿಟ್ಟಿನಲ್ಲಿ ಸಣ್ಣ ಸಹಕಾರಿ ಸಂಘಗಳೂ ಹೊರಗುತ್ತಿಗೆ ಆಧಾರದಲ್ಲಿ ಬಳಸಲು ಸಾಧ್ಯವಾಗುವಂಥ ಸಾಮಾನ್ಯ ತಂತ್ರಜ್ಞಾನವೊಂದನ್ನು ಕೇಂದ್ರ ಸರಕಾರ ಜಾರಿಗೊಳಿಸಬೇಕಾದ ಆವಶ್ಯಕತೆ ಇದೆ ಎಂದು ಹೇಳಿದರು.
ನೂತನ ಮಹಾಲಕ್ಷ್ಮಿ ಪವರ್ ಲೋನ್ ಮಂಜೂರಾತಿ ಪತ್ರಗಳನ್ನು ವಿತರಿಸಿದ ಮೀನುಗಾರಿಕಾ ಸಚಿವ ಮಾಂಕಳ ಎಸ್ ವೈದ್ಯ ಮಾತನಾಡಿ, ಮಹಾಲಕ್ಷ್ಮಿ ಕೋ ಆಪರೇಟಿವ್ ಬ್ಯಾಂಕ್ ಉಡುಪಿ ಜಿಲ್ಲೆಯ ಮೀನುಗಾರರು ಬದುಕು ಕಟ್ಟಿಕೊಳ್ಳಲು ಅರ್ಥಿಕ
ಸಹಾಯ ಮಾಡುತ್ತಿರುವ ಕಾರ್ಯಕ್ಕೆ ಶ್ಲಾಘನೀಯ ಎಂದು ಹೇಳಿದರು. ಡಿಜಿಟಲ್ ಬ್ಯಾಂಕಿಂಗ್ ವಿಡಿಯೋ ಅನಾವರಣವನ್ನು ಸಂಸದ ಕೋಟ ಶ್ರೀನಿವಾಸ ಪೂಜಾರಿ ನೆರವೇರಿಸಿ, ಶುಭ ಹಾರೈಸಿದರು.
ನೂತನ ರಾಷ್ಟ್ರೀಯ ಸಹಕಾರಿ ನೀತಿ ಆಯೋಗದ ಅಧ್ಯಕ್ಷ ಸುರೇಶ್ ಪಿ.ಪ್ರಭು ಹಾಗೂ ಪತ್ನಿ ಉಮಾ ಸುರೇಶ್ ಪ್ರಭು, ಸಂಸದ ಕೋಟ ಶ್ರೀನಿವಾಸ ಪೂಜಾರಿ, ಮೀನುಗಾರ ಸಚಿವ ಮಾಂಕಳ ವೈದ್ಯ ಮತ್ತು ಸಾಧಕ ಮೀನುಗಾರ ಮಲ್ಪೆ ರಾಮಚಂದ್ರ ಕುಂದರ್ ಅವರನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು.
ವೇದಿಕೆಯಲ್ಲಿ ಸಹಕಾರಿ ನೀತಿ ಆಯೋಗದ ಅಧ್ಯಕ್ಷರ ಪತ್ನಿ ಉಮಾ ಸುರೇಶ್ ಪ್ರಭು, ಉದ್ಯಮಿಗಳಾದ ಡಾ.ಜಿ.ಶಂಕರ್, ರೋಹನ್ ಮೊಂತೆರೋ, ಆನಂದ ಪಿ.ಸುವರ್ಣ, ಪುರುಷೋತ್ತಮ ಶೆಟ್ಟಿ, ಆನಂದ ಪಿ.ಸುವರ್ಣ ಮತ್ತು ಮೋಹನ ಬೆಂಗ್ರೆ, ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ, ದ.ಕ.ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ “ಸಿ.ಕೋಟ್ಯಾನ್, ಮಲ್ಪೆ ಮೀನುಗಾರ ಸಂಘದ ಅಧ್ಯಕ್ಷ ದಯಾನಂದ ಕೆ.ಸುವರ್ಣ, ಉರ್ವ ಮಾರಿಯಮ್ಮ ದೇವಸ್ಥಾನದ ಟ್ರಸ್ಟಿ ಲಕ್ಷ್ಮಣ ಆಮಿನ್, ಮಹಾಲಕ್ಷ್ಮಿ ಬ್ಯಾಂಕಿನ ಉಪಾಧ್ಯಕ್ಷ ವಾಸುದೇವ ಸಾಲ್ಯಾನ್, ಬ್ಯಾಂಕಿನ ವ್ಯವಸ್ಥಾಪಕ ನಿರ್ದೇಶಕ ಶರತ್ ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು., ಮಹಾಲಕ್ಷ್ಮಿ ಕೋ ಆಪರೇಟಿವ್ ಬ್ಯಾಂಕಿನ ಅಧ್ಯಕ್ಷ , ಉಡುಪಿ ಶಾಸಕರಾದ ಯಶಪಾಲ್ ಸುವರ್ಣ ಸ್ವಾಗತಿಸಿದರು.