ಬೆಂಗಳೂರು, ಆ.14 : ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಎಲ್ಲಾ ಆರೋಪಿಗಳಿಗೆ ಆಗಸ್ಟ್ 28ರ ವರೆಗೆ ನ್ಯಾಯಾಂಗ ಬಂಧನ ವಿಸ್ತರಿಸಿ 24ನೇ ಎಸಿಎಂಎಂ ಕೋರ್ಟ್ ಗುರುವಾರ ಆದೇಶ ನೀಡಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ಇಂದು ಮುಕ್ತಾಯವಾದ ಹಿನ್ನೆಲೆ ಇಂದು ಮಧ್ಯಾಹ್ನ ವಿಡಿಯೋ ಕಾನ್ಫರೆನ್ಸ್ ಮೂಲಕ ಆರೋಪಿ ನಟ ದರ್ಶನ್ ಮತ್ತು ಪ್ರಕರಣದ ಇತರೆ ಆರೋಪಿಗಳನ್ನು ಕೋರ್ಟ್ ಮುಂದೆ ಹಾಜರು ಪಡಿಸಲಾಗಿತ್ತು. ಈ ಸಂದರ್ಭ ಪೊಲೀಸರ ರಿಮ್ಯಾಂಡ್ ಅರ್ಜಿಯನ್ನು ಪುರಸ್ಕರಿಸಿದ ನ್ಯಾಯಾಧೀಶರು, ಪ್ರಕರಣದ ಎಲ್ಲಾ ಆರೋಪಿಗಳಿಗೂ ನ್ಯಾಯಾಂಗ ಬಂಧನ ವಿಸ್ತರಿಸಿ ತೀರ್ಪು ನೀಡಿದ್ದಾರೆ.
ಬೆಂಗಳೂರು ಜೈಲಿನಲ್ಲಿರುವ ಆರೋಪಿಗಳು ಹಾಗೂ ತುಮಕೂರು ಜೈಲಿನಲ್ಲಿರುವ ಆರೋಪಿಗಳನ್ನು ಪೊಲೀಸರು ವಿಡಿಯೋ ಕಾನ್ಫೆರೆನ್ಸ್ ಮೂಲಕ ಕೋರ್ಟ್ ಮುಂದೆ ಹಾಜರು ಪಡಿಸಿದ್ದರು. ಈ ವೇಳೆ ಪೊಲೀಸರು, ಎಲ್ಲಾ ಆರೋಪಿಗಳಿಗೂ ನ್ಯಾಯಾಂಗ ಬಂಧನ ವಿಸ್ತರಿಸುವಂತೆ ಮನವಿ ಮಾಡಿಕೊಂಡಿದ್ದಾರೆ. ಮನವಿ ಪುರಸ್ಕರಿಸಿದ ನ್ಯಾಯಾಧೀಶರು ಪ್ರಕರಣದ ಎಲ್ಲಾ ಆರೋಪಿಗಳಿಗೂ ನ್ಯಾಯಾಂಗ ಬಂಧನ ವಿಸ್ತರಣೆ ಮಾಡಿದರು. ಕೋರ್ಟ್ ಎಲ್ಲಾ ಆರೋಪಿಗಳ ನ್ಯಾಯಾಂಗ ಬಂಧನವನ್ನು ಆಗಸ್ಟ್ 28ರವರೆಗೆ ವಿಸ್ತರಿಸಿ ಆದೇಶ ನೀಡಿದೆ.