ಮಂಗಳೂರು, ಆ. 16: ಥೈಲ್ಯಾಂಡಿನಲ್ಲಿ ನಡೆದ ಸ್ಪರ್ಧೆಯೊಂದರಲ್ಲಿ ಮಂಗಳೂರಿನ ವರುಣ್ ಎಂಬ ಬಾಲಕ ಮಿಸ್ಟರ್ ಟೀನ್ ಸೂಪರ್ ಗ್ಲೋಬ್ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ನಡೆಯುವ ಈ ಸ್ಪರ್ಧೆ ಫ್ಯಾಷನ್, ಮಾಡೆಲಿಂಗ್ ಹಾಗೂ ಪ್ರತಿಭಾ ಪ್ರದರ್ಶನವನ್ನು ಒಳಗೊಂಡಿರುತ್ತದೆ ಎಂದು ವಿಜೆ ಡಿಕ್ಸನ್ ಬುಧವಾರ ನಗರದ ಪ್ರೆಸ್ ಕ್ಲಬ್ ನಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ತಿಳಿಸಿದರು.
ಆಗಸ್ಟ್ 7ರಿಂದ 10ರವರೆಗೆ ಥೈಲ್ಯಾಂಡ್ ನಲ್ಲಿ ನಡೆದ , ಅಮೇರಿಕಾ, ಲೆಬನಾನ್, ಅರ್ಮೇನಿಯಾ, ಯುಎಇ, ಒಮಾನ್, ಥೈಲ್ಯಾಂಡ್, ಮಲೇಶಿಯಾ, ಶ್ರೀಲಂಕಾ, ಇಂಡೋನೇಷ್ಯಾ, ವಿಯೆಟ್ನಾಂ, ನೇಪಾಳ ಸೇರಿದಂತೆ ಹಲವಾರು ದೇಶಗಳಿಂದ ಸ್ಪರ್ಧಿಗಳು ಭಾಗವಹಿಸಿದ್ದರು. ಕ್ಯಾಲಿಕಟ್ ನಲ್ಲಿ ನಡೆದ ರಾಷ್ಟ್ರ ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಿ ಆಯ್ಕೆಯಾಗಿದ್ದ ವರುಣ್, ಅಂತಾರಾಷ್ಟ್ರೀಯ ವೇದಿಕೆಯಲ್ಲಿ ನಡೆದ ಸ್ಪರ್ಧೆಯಲ್ಲಿ ಜಯಗಳಿಸಿದ್ದಾರೆ ಎಂದರು.
ಸುದ್ದಿಗೋಷ್ಟಿಯಲ್ಲಿ ತಾಯಿ ಲಿಡ್ವಿನ್ ಡಿಕೋಸ್ಟಾ, ವಿನಾಲ್ ಡಿಕೋಸ್ಟಾ ಉಪಸ್ಥಿತರಿದ್ದರು.