ಉಳ್ಳಾಲ,ಆ.29 : ಉಳ್ಳಾಲ ನಗರಸಭೆಯ ಅಧ್ಯಕ್ಷೆಯಾಗಿ ಕಾಂಗ್ರೆಸ್ಸಿನ ಶಶಿಕಲಾ, ಉಪಾಧ್ಯಕ್ಷರಾಗಿ ಸಪ್ನ ಹರೀಶ್ ಅವರು ಆಯ್ಕೆಯಾಗಿದ್ದಾರೆ.
ಉಳ್ಳಾಲ ನಗರ ಸಭೆಯ 2ನೇ ಆಡಳಿತಾವಧಿಯ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಕ್ಕೆ ಗುರುವಾರ ನಗರಸಭೆಯ ಸಭಾಂಗಣದಲ್ಲಿ ಚುನಾವಣೆ ಪ್ರಕ್ರಿಯೆ ನಡೆಯಿತು.ಚುನಾವಣೆಯಲ್ಲಿಅಧ್ಯಕ್ಷರಾಗಿ ಕಾಂಗ್ರೆಸ್ ನ ಶಶಿಕಲಾ, ಉಪಾಧ್ಯಕ್ಷರಾಗಿ ಸಪ್ನಾ ಹರೀಶ್ ಆಯ್ಕೆಯಾದರು. ಅಧ್ಯಕ್ಷ ಸ್ಥಾನ ಪರಿಶಿಷ್ಟ ಜಾತಿ ಹಾಗೂ ಉಪಾಧ್ಯಕ್ಷ ಸ್ಥಾನ ಹಿಂದುಳಿದ ವರ್ಗ(ಎ)ದ ಮಹಿಳೆಗೆ ಮೀಸಲಿರಿಸಲಾಗಿತ್ತು. ಸಹಾಯಕ ಆಯುಕ್ತ ಹರ್ಷವರ್ಧನ್ ಚುನಾವಣೆ ಅಧಿಕಾರಿಯಾಗಿ ಕಾರ್ಯ ನಿರ್ವಹಿಸಿದರು.