ಬೆಂಗಳೂರು, ಆ. 31 : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಹಾಗೂ ಗ್ಯಾಂಗ್‌ಗೆ ನ್ಯಾಯಾಂಗ ಬಂಧನ ಮತ್ತೆ ವಿಸ್ತರಣೆ ಆಗಿದೆ.
ನಟ ದರ್ಶನ್ ಹಾಗೂ ಗ್ಯಾಂಗ್ ನ ನ್ಯಾಯಾಂಗ ಅವಧಿ ಆಗಸ್ಟ್ 28ಕ್ಕೆ ಅಂತ್ಯಗೊಂಡಿದೆ. ಹೀಗಾಗಿ 24ನೇ ಎಸಿಎಂಎಂ ನ್ಯಾಯಾಲಯದ ಮುಂದೆ ಆರೋಪಿಗಳನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರುಪಡಿಸಲಾಗಿದೆ. ಆರೋಪಿಗಳ ನ್ಯಾಯಾಂಗ ಬಂಧನ ಅವಧಿಯನ್ನು ಸೆಪ್ಟೆಂಬರ್ 9ರವರೆಗೆ ವಿಸ್ತರಿಸಿ ಕೋರ್ಟ್ ಆದೇಶ ನೀಡಿದೆ.
ನ್ಯಾಯಾಧೀಶರು ಆರಂಭದಲ್ಲಿ ಎಲ್ಲರ ಹಾಜರಾತಿ ಪಡೆದರು. ಆ ಬಳಿಕ ಎಲ್ಲಾ ಆರೋಪಿಗಳಿಗೂ ನ್ಯಾಯಾಂಗ ಬಂಧನದ ಅವಧಿಯನ್ನು ವಿಸ್ತರಣೆ ಮಾಡಲಾಗಿದೆ.