Close Menu
Navaloka Media News Mangalore| Kannada Online News PortalNavaloka Media News Mangalore| Kannada Online News Portal
    Our Picks

    ಆಳ್ವಾಸ್ ನುಡಿಸಿರಿ-ವಿರಾಸತ್‌ಗೆ ಜನವರಿ 6ರಿಂದ ಚಾಲನೆ – ಡಾ.ಮೋಹನ್ ಆಳ್ವ

    October 10, 2026

    ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲದ ವತಿಯಿಂದ ಕುದ್ರೋಳಿ ಶ್ರೀ ಭಗವತಿ ದೇವಸ್ಥಾನದ ಸಭಾಭವನದಲ್ಲಿ”ರಾಷ್ಟ್ರದೊಂದಿಗೆ ರಂಗೋಲಿ” ಕಾರ್ಯಕ್ರಮ

    October 9, 2026

    ಅ.10 :ಗೌಡ ಸಾರಸ್ವತ ಬ್ರಾಹ್ಮಣ ಸೇವಾ ಸಂಘದ 88ನೇ ಸಂಸ್ಥಾಪನಾ ದಿನಾಚರಣೆ

    October 8, 2026

    Subscribe to Updates

    Get the latest creative news from FooBar about art, design and business.

    What's Hot

    ಆಳ್ವಾಸ್ ನುಡಿಸಿರಿ-ವಿರಾಸತ್‌ಗೆ ಜನವರಿ 6ರಿಂದ ಚಾಲನೆ – ಡಾ.ಮೋಹನ್ ಆಳ್ವ

    October 10, 2026

    ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲದ ವತಿಯಿಂದ ಕುದ್ರೋಳಿ ಶ್ರೀ ಭಗವತಿ ದೇವಸ್ಥಾನದ ಸಭಾಭವನದಲ್ಲಿ”ರಾಷ್ಟ್ರದೊಂದಿಗೆ ರಂಗೋಲಿ” ಕಾರ್ಯಕ್ರಮ

    October 9, 2026

    ಅ.10 :ಗೌಡ ಸಾರಸ್ವತ ಬ್ರಾಹ್ಮಣ ಸೇವಾ ಸಂಘದ 88ನೇ ಸಂಸ್ಥಾಪನಾ ದಿನಾಚರಣೆ

    October 8, 2026
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    • Home
    • Local News
    • State News
    • National/International news
    • Film News
    • Contact Us
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    Home»Film News»ಭಾರತ್ ಮಾಲ್ ನಲ್ಲಿ ಕಲ್ಜಿಗ ಸಿನಿಮಾದ ಉದ್ಘಾಟನಾ ಕಾರ್ಯಕ್ರಮ
    Film News

    ಭಾರತ್ ಮಾಲ್ ನಲ್ಲಿ ಕಲ್ಜಿಗ ಸಿನಿಮಾದ ಉದ್ಘಾಟನಾ ಕಾರ್ಯಕ್ರಮ

    adminBy adminSeptember 13, 2024
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter LinkedIn Pinterest Email
    Navaloka media news
    Navaloka media news

    ಮಂಗಳೂರು,ಸೆ.13: ಹಿಮಾನಿ ಫಿಲಂಸ್ ಬ್ಯಾನರ್ ನಡಿಯಲ್ಲಿ ಸುಮನ್ ಸುವರ್ಣ ನಿರ್ದೇಶನದಲ್ಲಿ ಶರತ್ ಕುಮಾರ್ ಎ.ಕೆ. ನಿರ್ಮಾಣದಲ್ಲಿ ತಯಾರಾದ “ಕಲ್ಜಿಗ” ಸಿನಿಮಾ ಶುಕ್ರವಾರ ಭಾರತ್ ಮಾಲ್ ನ ಭಾರತ್ ಸಿನಿಮಾಸ್ ನಲ್ಲಿ ಬಿಡುಗಡೆಗೊಂಡಿತು.

    ಮಂಗಳೂರು ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ಅವರು ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ನಂತರ ಮಾತಾಡಿ, ಕಲ್ಜಿಗ ಸಿನಿಮಾ ತುಳುನಾಡಿನ ಸಂಸ್ಕೃತಿಯನ್ನು ಬಿಂಬಿಸುವ ಚಿತ್ರವಾಗಿದೆ. ಇಂತಹ ಇನ್ನೂ ಚಿತ್ರಗಳು ನಿರ್ಮಾಣವಾಗಲಿ ಎಂದರು.

    ಹಿರಿಯ ರಂಗಭೂಮಿ ಕಲಾವಿದ ವಿಜಯ್ ಕುಮಾರ್ ಕೊಡಿಯಾಲ್ ಬೈಲ್ ಅವರು ಕಾರ್ಯಕ್ರಮದಲ್ಲಿ ಕಲ್ಜಿಗ ಸಿನಿಮಾಕ್ಕೆ ಶುಭ ಹಾರೈಸಿದರು.

    ಕಾರ್ಯಕ್ರಮದಲ್ಲಿ ನಿರ್ಮಾಪಕ ಶರತ್ ಕುಮಾರ್ ಎ.ಕೆ.,ಬಿಜೆಪಿ ಜಿಲ್ಲಾ ಯುವಮೋರ್ಚಾ ಅಧ್ಯಕ್ಷ ನಂದನ್ ಮಲ್ಯ, ತಮ್ಮ ಲಕ್ಷ್ಮಣ, ಪ್ರಕಾಶ್ ಧರ್ಮನಗರ, ಉದ್ಯಮಿ ಗಿರೀಶ್ ಶೆಟ್ಟಿ ಕಟೀಲು, ನಟ ಅರ್ಜುನ್ ಕಾಪಿಕಾಡ್, ನಿರ್ದೇಶಕ ಸುಮನ್ ಸುವರ್ಣ ಮತ್ತಿತರರು ಉಪಸ್ಥಿತರಿದ್ದರು.

    ಶರತ್ ಕುಮಾರ್ ಎ.ಕೆ. ಕಲ್ಜಿಗ ಚಿತ್ರದ ನಿರ್ಮಾಪಕರಾಗಿದ್ದಾರೆ. ಸುಮನ್ ಸುವರ್ಣ ಅವರು ಕಲ್ಜಿಗದ ಸಿನಿಮಾದ ನಿರ್ದೇಶಕರು, ಕಥೆ ,ಚಿತ್ರಕಥೆ, ಸಂಭಾಷಣೆಯನ್ನು ಬರೆದಿದ್ದಾರೆ. ಸಚಿನ್ ಶೆಟ್ಟಿ ಛಾಯಾಗ್ರಹಣ, ಯಶ್ವಿನ್ ಕೆ. ಶೆಟ್ಟಿಗಾರ್ ಸಂಕಲನ ಈ ಚಿತ್ರಕ್ಕಿದೆ. ಹಂಸಲೇಖ ಈ ಸಿನೆಮಾಕ್ಕೆ ಸಂಗೀತ ನಿರ್ದೇಶನ ಮಾಡಿದ್ದಾರೆ. ನಟ ಅರ್ಜುನ್ ಕಾಪಿಕಾಡ್ ಚಿತ್ರದ ನಾಯಕನಾಗಿ ನಟಿಸಿದ್ದಾರೆ. ಸುಶ್ಮಿತಾ ಭಟ್ ನಾಯಕಿಯಾಗಿದ್ದಾರೆ. ನಟರಾದ ಗೋಪಿನಾಥ್ ಭಟ್, ಜ್ಯೋತಿಷ್ ಶೆಟ್ಟಿ, ಮಾನಸಿ ಸುಧೀರ್, ವಿಜಯ್ ಶೋಭರಾಜ್ ಪಾವೂರ್, ಶ್ಲಾಘಾ ಸಾಲಿಗ್ರಾಮ ಮುಖ್ಯ ಭೂಮಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ. ಪ್ರಸಾದ್ ಕೆ. ಶೆಟ್ಟಿಯವರ ಹಿನ್ನೆಲೆ ಸಂಗೀತ ನೀಡಿದ್ದಾರೆ.

    ರಾಜ್ಯಾದ್ಯಂತ ಸುಮಾರು ಐವತ್ತು ಟಾಕೀಸ್ ಗಳಲ್ಲಿ ಕಲ್ಜಿಗ ಸಿನಿಮಾ ತೆರೆಕಾಣಲಿದೆ. ದಕ್ಷಿಣ ಕನ್ನಡ , ಉಡುಪಿ , ಬೆಂಗಳೂರು , ಮೈಸೂರು , ಶಿವಮೊಗ್ಗ , ಚಿಕ್ಕಮಗಳೂರು , ಹಾಸನ , ಮಡಿಕೇರಿ , ಹುಬ್ಬಳ್ಳಿ , ಧಾರವಾಡ , ದಾವಣಗೆ ಮುಂಬೈ ಹಾಗೂ ಗಲ್ಫ್ ದೇಶಗಳಲ್ಲಿ ಬಿಡುಗಡೆಯಾಗಲಿದೆ ಎಂದು ಚಿತ್ರ ತಂಡ ಹೇಳಿದೆ.

    Navaloka media news
    Navaloka media news
    Share. Facebook Twitter Pinterest LinkedIn WhatsApp Reddit Tumblr Email
    admin
    • Website

    Related Posts

    Local News October 10, 2026

    ಆಳ್ವಾಸ್ ನುಡಿಸಿರಿ-ವಿರಾಸತ್‌ಗೆ ಜನವರಿ 6ರಿಂದ ಚಾಲನೆ – ಡಾ.ಮೋಹನ್ ಆಳ್ವ

    Local News October 9, 2026

    ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲದ ವತಿಯಿಂದ ಕುದ್ರೋಳಿ ಶ್ರೀ ಭಗವತಿ ದೇವಸ್ಥಾನದ ಸಭಾಭವನದಲ್ಲಿ”ರಾಷ್ಟ್ರದೊಂದಿಗೆ ರಂಗೋಲಿ” ಕಾರ್ಯಕ್ರಮ

    Local News October 8, 2026

    ಅ.10 :ಗೌಡ ಸಾರಸ್ವತ ಬ್ರಾಹ್ಮಣ ಸೇವಾ ಸಂಘದ 88ನೇ ಸಂಸ್ಥಾಪನಾ ದಿನಾಚರಣೆ

    Local News October 7, 2026

    ಅ.11-22 : ಮಂಗಳೂರು ದಸರಾ ಮಹೋತ್ಸವ ; 12 ರಂದು ದಸರಾ ಮಹೋತ್ಸವಕ್ಕೆ ಮುಖ್ಯಮಂತ್ರಿಗಳಿಂದ ಚಾಲನೆ

    Local News October 6, 2026

    ಕಾರ್ಕಳ : ಬೈಪಾಸ್ ಬಳಿ ಬೈಕ್ ಮತ್ತು ಲಾರಿ ನಡುವೆ ಅಪಘಾತ – ಬೈಕ್ ಸವಾರ ಸಾವು

    Local News October 5, 2026

    ಬಜಾಲ್ ವಾರ್ಡಿನ ಜಲ್ಲಿಗುಡ್ಡೆ ಸೋನಾಲಿಕೆ ಅಡ್ಡರಸ್ತೆಯಲ್ಲಿ ಅಭಿವೃದ್ಧಿ ಕಾಮಗಾರಿಯ ಗುದ್ದಲಿ ಪೂಜೆ

    Comments are closed.

    Demo
    Don't Miss
    Local News October 10, 2026

    ಆಳ್ವಾಸ್ ನುಡಿಸಿರಿ-ವಿರಾಸತ್‌ಗೆ ಜನವರಿ 6ರಿಂದ ಚಾಲನೆ – ಡಾ.ಮೋಹನ್ ಆಳ್ವ

    ಮಂಗಳೂರು: ಅ.10 :: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ  ಆಳ್ವಾಸ್ ವಿರಾಸತ್ ಹಾಗೂ ಆಳ್ವಾಸ್ ನುಡಿಸಿರಿ ಕಾರ್ಯಕ್ರಮವು ಜ.6ರಿಂದ 10ರವರೆಗೆ…

    ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲದ ವತಿಯಿಂದ ಕುದ್ರೋಳಿ ಶ್ರೀ ಭಗವತಿ ದೇವಸ್ಥಾನದ ಸಭಾಭವನದಲ್ಲಿ”ರಾಷ್ಟ್ರದೊಂದಿಗೆ ರಂಗೋಲಿ” ಕಾರ್ಯಕ್ರಮ

    October 9, 2026

    ಅ.10 :ಗೌಡ ಸಾರಸ್ವತ ಬ್ರಾಹ್ಮಣ ಸೇವಾ ಸಂಘದ 88ನೇ ಸಂಸ್ಥಾಪನಾ ದಿನಾಚರಣೆ

    October 8, 2026

    ಅ.11-22 : ಮಂಗಳೂರು ದಸರಾ ಮಹೋತ್ಸವ ; 12 ರಂದು ದಸರಾ ಮಹೋತ್ಸವಕ್ಕೆ ಮುಖ್ಯಮಂತ್ರಿಗಳಿಂದ ಚಾಲನೆ

    October 7, 2026
    Stay In Touch
    • Facebook
    • Twitter
    • Pinterest
    • Instagram
    Facebook X (Twitter) Instagram Pinterest
    • Home
    • Local News
    • State News
    • National/International news
    • Film News
    • Contact Us
    © 2026 All Right Reserved. Designed by Blueline Computers.

    Type above and press Enter to search. Press Esc to cancel.