Close Menu
Navaloka Media News Mangalore| Kannada Online News PortalNavaloka Media News Mangalore| Kannada Online News Portal
    Our Picks

    ಸುರತ್ಕಲ್ : ಬಂಟರ ಭವನದಲ್ಲಿ ಸಸ್ಯೋತ್ಸವ, ಆಹಾರ ಮೇಳ ಕಾರ್ಯಕ್ರಮ

    September 25, 2026

    ಬಂಟ್ವಾಳ : ಕೃಷಿ ಕೆಲಸ ಮಾಡುತ್ತಿದ್ದ ವೇಳೆ ಹೆಜ್ಜೇನು ದಾಳಿ – ಅಸ್ವಸ್ಥಗೊಂಡಿದ್ದ ಮಹಿಳೆ ಸಾವು

    September 24, 2026

    ಧರ್ಮಸ್ಥಳ ಸೌಜನ್ಯ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಆದೇಶ

    September 23, 2026

    Subscribe to Updates

    Get the latest creative news from FooBar about art, design and business.

    What's Hot

    ಸುರತ್ಕಲ್ : ಬಂಟರ ಭವನದಲ್ಲಿ ಸಸ್ಯೋತ್ಸವ, ಆಹಾರ ಮೇಳ ಕಾರ್ಯಕ್ರಮ

    September 25, 2026

    ಬಂಟ್ವಾಳ : ಕೃಷಿ ಕೆಲಸ ಮಾಡುತ್ತಿದ್ದ ವೇಳೆ ಹೆಜ್ಜೇನು ದಾಳಿ – ಅಸ್ವಸ್ಥಗೊಂಡಿದ್ದ ಮಹಿಳೆ ಸಾವು

    September 24, 2026

    ಧರ್ಮಸ್ಥಳ ಸೌಜನ್ಯ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಆದೇಶ

    September 23, 2026
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    • Home
    • Local News
    • State News
    • National/International news
    • Film News
    • Contact Us
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    Home»Local News»ಕೋಟೆಕಾರು ವ್ಯವಸಾಯ ಸೇವಾ ಸಹಕಾರ ಸಂಘದ “ಕೆ. ಸುಬ್ಬಣ್ಣಯ್ಯ” ಸ್ಮಾರಕ ಕೋಟೆಕಾರು ಸಹಕಾರ ಸೌಧ ಲೋಕಾರ್ಪಣೆ
    Local News

    ಕೋಟೆಕಾರು ವ್ಯವಸಾಯ ಸೇವಾ ಸಹಕಾರ ಸಂಘದ “ಕೆ. ಸುಬ್ಬಣ್ಣಯ್ಯ” ಸ್ಮಾರಕ ಕೋಟೆಕಾರು ಸಹಕಾರ ಸೌಧ ಲೋಕಾರ್ಪಣೆ

    adminBy adminSeptember 16, 2024
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter LinkedIn Pinterest Email
    Navaloka media news
    Navaloka media news

    ಉಳ್ಳಾಲ,ಸೆ.16 : ಕೋಟೆಕಾರು ವ್ಯವಸಾಯ ಸೇವಾ ಸಹಕಾರ ಸಂಘದ ವತಿಯಿಂದ ಕೋಟೆಕಾರು ಗ್ರಾಮದ ಬೀರಿ ಜಂಕ್ಷನ್ ನಲ್ಲಿ ನಿರ್ಮಾಣಗೋಂಡ ಕೆ. ಸುಬ್ಬಣ್ಣಯ್ಯ ಸ್ಮಾರಕ ಕೋಟೆಕಾರು ಸಹಕಾರ ಸೌಧದ ಉದ್ಘಾಟನಾ ಕಾರ್ಯಕ್ರಮ ಭಾನುವಾರ ನಡೆಯಿತು.

    ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಸಂಘವು ಕೃಷಿಕರಿಗೆ, ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡಿ ಸಮಾಜಮುಖಿ ಕೆಲಸತ್ತಿದೆ. ಸಂಘವು ಪ್ರಸಕ್ತ ಏಳು ಶಾಖೆಗಳನ್ನು ಹೊಂದಿದ್ದು 173 ಕೋಟಿ ರೂ. ಸಾಲ ನೀಡಿ 2.45 ಕೋಟಿ ರೂಪಾಯಿಗಳ ಪಾಲು ಬಂಡವಾಳ ಹೊಂದಿ ಷೇರುದಾರರಿಗೆ 25ಶೇ. ಡಿವಿಡೆಂಟ್ ನೀಡುವ ಮೂಲಕ ಸಹಕಾರ ಸಂಘ ಯಶಸ್ಸುಕಾರ್ಯನಿರ್ವಹಣೆ ಮಾಡುತ್ತಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ ಅಧ್ಯಕ್ಷ ಡಾ.ಎಂ. ಎನ್. ರಾಜೇಂದ್ರ ಕುಮಾರ್ ಅವರು ಕೆ. ಸುಬ್ಬಣ್ಣಯ್ಯ ಸ್ಮಾರಕ ಕೋಟೆಕಾರು ಸಹಕಾರ ಸೌಧವನ್ನು ಉದ್ಘಾಟಿಸಿ ಮಾತನಾಡಿದರು.

    ಕಾರ್ಯಕ್ರಮದಲ್ಲಿ ಸಂಸದ ಬೃಜೇಶ್ ಚೌಟ ಅವರು ಮಾತನಾಡಿ, ಉತ್ತಮ ಕೆಲಸ ಮಾಡುವ ಮೂಲಕ ದೇಶಕ್ಕೆ ಮಾದರಿ ಎಂದು ತೋರಿಸಿ ಕೊಟ್ಟಂತಹ ಸಂಘಗಳಲ್ಲಿ ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಸಂಘ ಕೂಡಾ ಒಂದಾಗಿದೆ. ಗ್ರಾಹಕರಿಗೆ ವಿಶ್ವಾಸ ಭರಿತವಾದ ಸೇವೆಯನ್ನು ಈ ಸಂಘ ನೀಡುತ್ತಿದೆ. ಎಲ್ಲರಿಗೂ ಪ್ರೇರಣೆ ಆಗುವ ರೀತಿಯಲ್ಲಿ ಈ ಸಹಕಾರಿ ಸಂಘವು ಸಾಧನೆ ಮಾಡಿದೆ ಎಂದು ಹೇಳಿದರು.

    ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಕೆಳಗಿನ ಕೋಟೆಕಾರು ಗುತ್ತು ಕೃಷ್ಣ ಶೆಟ್ಟಿ ಅವರು ಮಾತನಾಡಿ, ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಸಂಘ 14 ಗ್ರಾಮಗಳಲ್ಲಿ ಏಳು ಶಾಖೆಗಳನ್ನು ಹೊಂದಿದೆ. ಈ ಸಹಕಾರಿ ಸಂಘವು ಹಲವಾರು ಸಮಾಜಮುಖಿ ಕಾರ್ಯಕ್ರಮಗಳನ್ನು ಮಾಡುತ್ತಾ ಬಂದಿದೆ. ಅಡಕೆ ಬೆಳೆಗಾರರಿಗೆ, ಭತ್ತದ ಕೃಷಿಗೆ ನೆರವು ನೀಡಿದೆ. ಈ ಸಂಘ ಕ್ಕೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಕೂಡ ಸಿಕ್ಕಿದೆ ಎಂದು ಅವರು ಹೇಳಿದರು.

    ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಡಿ. ಎಸ್. ಗಟ್ಟಿ ದೀಪ ಪ್ರಜ್ವಲನೆ ಮಾಡಿದರು. ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸದಾಶಿವ ಉಳ್ಳಾಲ್ ನಾಮಫಲಕ ಅನಾವರಣ ಮಾಡಿದರು.ಸಹಕಾರಿ ಸಂಘದ ಅಧ್ಯಕ್ಷ ಕೆಳಗಿನ ಕೋಟೆಕಾರು ಗುತ್ತು ಕೃಷ್ಣ ಶೆಟ್ಟಿ ಅವರು ಸ್ವಾಗತಿಸಿದರು.ಕಾರ್ಯನಿರ್ವಹಣಾಧಿಕಾರಿ ಹರ್ಷವರ್ಧನ್ ಉಳ್ಳಾಲ್ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು.

    ಈ ಸಂದರ್ಭ ಡಾ.ಎಂ.ಎನ್. ರಾಜೇಂದ್ರ ಕುಮಾರ್, ಅಧ್ಯಕ್ಷ ಕೃಷ್ಣ ಶೆಟ್ಟಿ ಕೆಳಗಿನ ಕೋಟೆಕಾರುಗುತ್ತು, ಸಂಸದ ಬೃಜೇಶ್ ಚೌಟ, ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಹರ್ಷವರ್ಧನ್ ಉಳ್ಳಾಲ್, ಇಂಜಿನಿಯರ್ ಸಂತೋಷ್ ಕುಮಾರ್ ಶೆಟ್ಟಿ, ಗುತ್ತಿಗೆದಾರ ಪುರುಷೋತ್ತಮ ಶೆಟ್ಟಿ, ಕೆ. ಸುಬ್ಬಣ್ಣಯ್ಯ ಅವರ ಕುಟುಂಬದ ಸದಸ್ಯ ಗಣೇಶ್ ಹಾಗೂ ಉಪಾಧ್ಯಕ್ಷ ಅಬೂಸಾಲಿ ಕಿನ್ಯ ಅವರನ್ನು ಸನ್ಮಾನಿಸಲಾಯಿತು.

    ಕಾರ್ಯಕ್ರಮದಲ್ಲಿ ಮಂಗಳೂರು ತಾಲೂಕು ವ್ಯವಸಾಯ ಉತ್ಪನ್ನ ಸಹಕಾರ ಮಾರಾಟ ಸಂಘದ ಅಧ್ಯಕ್ಷ ಮೋನಪ್ಪ ಶೆಟ್ಟಿ ಎಕ್ಕಾರು, ದ.ಕ. ಜಿಲ್ಲಾ ಸಹಕಾರ ಸಂಘಗಳ ಉಪ ನಿಬಂಧಕ ಎಚ್. ಎನ್. ರಮೇಶ್, ಜೆ. ವಿಧಾನ ಪರಿಷತ್ ಸದಸ್ಯ ಐವನ್ ಡಿ ಸೋಜ, ಮೈಸೂರು ಇಲೆಕ್ಟ್ರಿಕಲ್ ಇಂಡಸ್ಟ್ರೀಸ್ ಲಿ. ನಿಕಟಪೂರ್ವ ಅಧ್ಯಕ್ಷ ಸಂತೋಷ್ ಕುಮಾರ್ ರೈ ಬೋಳಿಯಾರು, ಸಹಕಾರ ಸಂಘಗಳ ಸಹಾಯಕ ನಿಬಂಧಕ ಸುಧೀರ್ ಕುಮಾರ್ ಜಿ., ಕೋಟೆಕಾರು ಪಟ್ಟಣ ಪಂಚಾಯಿತಿ ಅಧ್ಯಕ್ಷೆ ದಿವ್ಯ ಸತೀಶ್ ಶೆಟ್ಟಿ ನಡಾರ್ ಗುತ್ತು, ಸದಸ್ಯ ಉದಯ ಕುಮಾರ್ ಶೆಟ್ಟಿ, ಸಂಘದ ಉಪಾಧ್ಯಕ್ಷ ಅಬುಸಾಲಿ ಕೆ.ಬಿ., ಪೆರ್ಮನ್ನೂರು ಚರ್ಚ್ ಧರ್ಮಗುರು ಸಿಪ್ರಿಯನ್ ಪಿಂಟೋ, ನಿರ್ದೇಶಕರುಗಳಾದ ಗಂಗಾಧರ. ಯು, ಕೆ. ಕೃಷ್ಣಪ್ಪ ಸಾಲಿಯಾನ್, ಉದಯ ಕುಮಾರ್ ಶೆಟ್ಟಿ, ಅರುಣ್ ಕುಮಾರ್ ಯು, ರಾಘವ ಆರ್. ಉಚ್ಚಿಲ್, ರಾಘವ ಸಿ. ಉಚ್ಚಿಲ್, ಪದ್ಮಾವತಿ ಎಸ್. ಶೆಟ್ಟಿ, ಸುರೇಖ ಚಂದ್ರಹಾಸ, ಬಾಬು ನಾಯ್ಕ , ಕಿರಣ್ ಕುಮಾರ್ ಶೆಟ್ಟಿ, ಮುಖ್ಯಕಾರ್ಯನಿರ್ವಹಣಾಧಿಕಾರಿ ಹರ್ಷವರ್ಧನ ಉಳ್ಳಾಲ್, ಸಂಘದ ಮಾಜಿ ಅಧ್ಯಕ್ಷ ಹರ್ಷರಾಜ್ ಮುದ್ಯ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು. ನಂತರ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

    Navaloka media news
    Navaloka media news
    Share. Facebook Twitter Pinterest LinkedIn WhatsApp Reddit Tumblr Email
    admin
    • Website

    Related Posts

    Local News September 25, 2026

    ಸುರತ್ಕಲ್ : ಬಂಟರ ಭವನದಲ್ಲಿ ಸಸ್ಯೋತ್ಸವ, ಆಹಾರ ಮೇಳ ಕಾರ್ಯಕ್ರಮ

    Local News September 24, 2026

    ಬಂಟ್ವಾಳ : ಕೃಷಿ ಕೆಲಸ ಮಾಡುತ್ತಿದ್ದ ವೇಳೆ ಹೆಜ್ಜೇನು ದಾಳಿ – ಅಸ್ವಸ್ಥಗೊಂಡಿದ್ದ ಮಹಿಳೆ ಸಾವು

    Local News September 22, 2026

    ಸೆ.25-27: ಸುರತ್ಕಲ್ ಬಂಟರ ಭವನದಲ್ಲಿ ಸಸ್ಯೋತ್ಸವ

    Local News September 21, 2026

    ಮಂಗಳೂರಿನಲ್ಲಿ  ಕರ್ನಾಟಕ ರಾಜ್ಯ ದೇವಾಡಿಗರ ಸಂಘದ ಶತಮಾನೋತ್ಸವ ಕಾರ್ಯಕ್ರಮ

    Local News September 20, 2026

    ಉಡುಪಿ: ತೆಂಗಿನಕಾಯಿ ಸಂಸ್ಕರಣಾ ಘಟಕದಲ್ಲಿ ಅಗ್ನಿ ಅವಘಡ

    Local News September 20, 2026

    ಬಂಟ್ಸ್ ಹಾಸ್ಟೇಲ್ : ಗಣೇಶೋತ್ಸವದಲ್ಲಿ ಧಾರ್ಮಿಕ ಸಭೆ, ಶೋಭಾಯಾತ್ರೆ

    Comments are closed.

    Demo
    Don't Miss
    Local News September 25, 2026

    ಸುರತ್ಕಲ್ : ಬಂಟರ ಭವನದಲ್ಲಿ ಸಸ್ಯೋತ್ಸವ, ಆಹಾರ ಮೇಳ ಕಾರ್ಯಕ್ರಮ

    ಸುರತ್ಕಲ್: ರೈತ ಕುಡ್ಲ ಪ್ರತಿಷ್ಠಾನ ನೇತೃತ್ವದಲ್ಲಿ, ಬಂಟರ ಸಂಘ ಸುರತ್ಕಲ್ ಮತ್ತು ಲಯನ್ಸ್ ಕ್ಲಬ್ ಸುರತ್ಕಲ್ ಇವುಗಳ ಸಹಯೋಗದೊಂದಿಗೆ ಪ್ರಪ್ರಥಮ…

    ಬಂಟ್ವಾಳ : ಕೃಷಿ ಕೆಲಸ ಮಾಡುತ್ತಿದ್ದ ವೇಳೆ ಹೆಜ್ಜೇನು ದಾಳಿ – ಅಸ್ವಸ್ಥಗೊಂಡಿದ್ದ ಮಹಿಳೆ ಸಾವು

    September 24, 2026

    ಧರ್ಮಸ್ಥಳ ಸೌಜನ್ಯ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಆದೇಶ

    September 23, 2026

    ಸೆ.25-27: ಸುರತ್ಕಲ್ ಬಂಟರ ಭವನದಲ್ಲಿ ಸಸ್ಯೋತ್ಸವ

    September 22, 2026
    Stay In Touch
    • Facebook
    • Twitter
    • Pinterest
    • Instagram
    Facebook X (Twitter) Instagram Pinterest
    • Home
    • Local News
    • State News
    • National/International news
    • Film News
    • Contact Us
    © 2026 All Right Reserved. Designed by Blueline Computers.

    Type above and press Enter to search. Press Esc to cancel.