ನವದೆಹಲಿ, ಸೆ.21: ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ಆಮ್ ಆದ್ಮಿ ಪಕ್ಷದ ಅತಿಶಿ ಸಿಂಗ್ ಮರ್ಲೆನಾ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ.
ಅತಿಶಿ ಅವರು ಲೆಫ್ಟಿನೆಂಟ್ ಗವರ್ನರ್ ನಿವಾಸವಾದ ರಾಜಭವನದಲ್ಲಿ ನೂತನ ಸಿಎಂ ಆಗಿ ಪ್ರಮಾಣವಚನವನ್ನು ಸ್ವೀಕಾರ ಮಾಡಿದ್ದಾರೆ. ಅತಿಶಿಯವರೊಂದಿಗೆ ಆಮ್ ಆದ್ಮಿ ಪಕ್ಷದ ಐವರು ಶಾಸಕರು ಕೂಡ ಪ್ರಮಾಣವಚನ ಸ್ವೀಕರಿಸಿದ್ದಾರೆ.
ಅಬಕಾರಿ ನೀತಿ ಹಗರಣದಲ್ಲಿ ಬಂಧಿಸಲ್ಪಟ್ಟಿದ್ದ ಅರವಿಂದ್ ಕೇಜ್ರಿವಾಲ್ ಅವರು ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು. ಅವರು ಜೈಲಿನಿಂದ ಬಿಡುಗಡೆಯಾದ ಬಳಿಕ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ನಂತರ ಅತಿಶಿ ಅವರನ್ನು ದೆಹಲಿಯ ಮುಂದಿನ ಮುಖ್ಯಮಂತ್ರಿ ಎಂದು ಘೋಷಿಸಲಾಗಿತ್ತು. ಇದೀಗ ಅತಿಶಿ ಅವರು ದೆಹಲಿಯ ಮೂರನೆಯ ಮಹಿಳಾ ಸಿ ಎಂ ಯಾಗಿ ಆಗಿ ಅಧಿಕಾರ ಸ್ವೀಕರಿಸಿದ್ದಾರೆ.