ಮಂಗಳೂರು,ಸೆ.21: ಮಂಗಳೂರು ತಾಲೂಕು ಬಿಲ್ಲವ ಸಂಘದ ವತಿಯಿಂದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಮುಕ್ತ ದಸರಾ ಕ್ರೀಡೋತ್ಸವ ಅ.6ರಂದು ನಗರದ ಮಂಗಳಾ ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಜಿತೇಂದ್ರ ಜೆ. ಸುವರ್ಣ ಬುಧವಾರ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಅಂದು ಬೆಳಿಗ್ಗೆ 9 ಗಂಟೆಗೆ ವಿಧಾನ ಸಭಾಧ್ಯಕ್ಷರಾದ ಯು.ಟಿ.ಖಾದರ್ ಅವರು ಕ್ರೀಡೋತ್ಸವಕ್ಕೆ ಚಾಲನೆ ನೀಡಲಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಸಂಸದರಾದ ಕ್ಯಾ.ಬ್ರಿಜೇಶ್ ಚೌಟ, ಶಾಸಕ ಡಿ.ವೇದವ್ಯಾಸ ಕಾಮತ್ ವೇದಿಕೆಯಲ್ಲಿ ಉಪಸ್ಥಿತರಿರುವರು ಎಂದು ಅವರು ಹೇಳಿದರು.
ಬೆಳಗ್ಗೆ 8.30ಕ್ಕೆ ಕ್ರೀಡಾಕೂಟದ ಪಥಸಂಚಲನ ನಡೆಯಲಿದ್ದು, ಶಿಸ್ತು ಬದ್ಧ ಮತ್ತು ಉತ್ತಮ ಸಮವಸ್ತ್ರ ತಂಡಕ್ಕೆ ವಿಶೇಷ ಬಹುಮಾನ ನೀಡಲಾಗುತ್ತದೆ. ಹೈಸ್ಕೂಲ್ ವಿಭಾಗ ಹಾಗೂ ಮಹಿಳೆ ಮತ್ತು ಪುರುಷರ ವಿಭಾಗಗಳಿದ್ದು, ಹೈಸ್ಕೂಲ್‌ನಲ್ಲಿ ಅಥ್ಲೆಟಿಕ್ಸ್ ಹಾಗೂ ಕಬಡ್ಡಿ ಸೇರಿದಂತೆ ಮುಕ್ತ ವಿಭಾಗದಲ್ಲೂ ಅಥ್ಲೆಟಿಕ್ಸ್ ಹಾಗೂ ಹಗ್ಗಜಗ್ಗಾಟ ನಡೆಯಲಿದೆ. ವಿಜೇತರಿಗೆ ನಗದು, ಪಾರಿತೋಷಕ, ಪ್ರಶಸ್ತಿ ಪತ್ರ ನೀಡಲಾಗುತ್ತದೆ ಎಂದು ಅವರು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಸಂಘದ ಪದಾಧಿಕಾರಿಗಳಾದ ಲೋಕನಾಥ ಪೂಜಾರಿ, ಪುರುಷೋತ್ತಮ ಪೂಜಾರಿ, ಸುರೇಶ್ ಪೂಜಾರಿ ಕುಳಾಯಿ, ಸುರೇಶ್ ಚಂದ ಕೋಟ್ಯಾನ್ ಹಾಗೂ ತುಕರಾಮ ಪೂಜಾರಿ ಉಪಸ್ಥಿತರಿದ್ದರು.