ಉಡುಪಿ, ಸೆ.23 : ದೊಡ್ಡನಗುಡ್ಡೆ ಬಬ್ಬುಸ್ವಾಮಿ ದೇವಸ್ಥಾನದ ಬಳಿ ಇರುವ ಖಾಸಗಿ ಆಯುರ್ವೇದ ಆಸ್ಪತ್ರೆಯಲ್ಲಿ ಸೋಮವಾರ ಸೆ.23ರಂದು ಬೆಂಕಿ ಕಾಣಿಸಿಕೊಂಡಿದ್ದು, ಅಗ್ನಿಶಾಮಕ ದಳದವರು ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದ್ದಾರೆ. , ಆಯುರ್ವೇದ ಆಸ್ಪತ್ರೆಯು ನವೀಕರಣ ಹಂತದಲ್ಲಿರುವುದರಿಂದ ಅಲ್ಲಿ ಯಾವುದೇ ರೋಗಿಗಳು ಇರಲಿಲ್ಲ.
ದಿನನಿತ್ಯದ ಕೆಲಸಕ್ಕಾಗಿ ಪ್ರತಿದಿನ ಬೆಳಗ್ಗೆ ಬರುವ ಕುಸುಮಾ ಬೆಂಕಿಯನ್ನು ಪತ್ತೆ ಹಚ್ಚಿದರು. ತಕ್ಷಣ ವೈದ್ಯರಿಗೆ ಮಾಹಿತಿ ನೀಡಿದ್ದು, ಬಳಿಕ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದ್ದಾರೆ .ಬೆಂಕಿಗೆ ಕಾರಣ ಇನ್ನೂ ತಿಳಿದುಬಂದಿಲ್ಲ, ಅಧಿಕಾರಿಗಳು ಘಟನೆಯ ಬಗ್ಗೆ ತನಿಖೆ ನಡೆಸುತ್ತಿದ್ದಾರೆ