ಮಂಗಳೂರು, ಸೆ.27: ಲಕ್ಷ್ಮಿ ಮೆಮೋರಿಯಲ್ ಕಾಲೇಜ್ ಆಫ್ ಪಿಸಿಯೋಥೆರಪಿ ಇದರ ವತಿಯಿಂದ ನಗರದ ಎ.ಜೆ. ಆಸ್ಪತ್ರೆ ಯಲ್ಲಿ ಎರಡು ದಿನಗಳ ರಾಷ್ಟ್ರೀಯ ಪಿಸಿಯೋಥೆರಪಿ ಕಾನ್ಫರೆನ್ಸ್ ಕಾನ್ಫ್ಲುಯೆನ್ಸ್-2024ನ್ನು ಶುಕ್ರವಾರ ಉದ್ಘಾಟಿಸಿ ಅವರು ಮಾತನಾಡಿದ ತೆಲಂಗಾಣ ಕೈಗಾರಿಕಾ ಹಾಗೂ ವಾಣಿಜ್ಯ ಸಚಿವ ಡಿ.ಶ್ರೀಧರ್ ಬಾಬು ಅವರು,ಪಿಸಿಯೋಥೆರಪಿ ಚಿಕಿತ್ಸೆಗೆ ತಂತ್ರಜ್ಞಾನದ ಗಮನಾರ್ಹ ಕೊಡುಗೆ ನೀಡಿದೆ. ಎ.ಜೆ. ಶೆಟ್ಟಿ ಸ್ಥಾಪಿಸಿದ ಈ ಪಿಸಿಯೋಥೆರಪಿ ಕೇಂದ್ರವು 30 ವರ್ಷಗಳ ಸಾರ್ಥಕ ಸೇವೆಯನ್ನು ಸಮಾಜಕ್ಕೆ ನೀಡುತ್ತಾ ಬಂದಿವೆ. ಆರೋಗ್ಯ ಕ್ಷೇತ್ರದಲ್ಲಿ ಎಜೆ ಆಸ್ಪತ್ರೆಯು ಮಹತ್ತರವಾದ ಸಾಧನೆಯನ್ನು ಮಾಡಲಿ ಎಂದು ಅವರು ಹೇಳಿದರು.
ಆಧುನಿಕ ತಂತ್ರಜ್ಞಾನವು ವೈದ್ಯಕೀಯ ಕ್ಷೇತ್ರದಲ್ಲಿ ಪ್ರಾಮುಖ್ಯತೆ ಪಡೆದಿದೆ. ಈಗ ರೋಬೋಟಿಕ್ ಡಿವೈಸ್‌ಗಳಿವೆ. ತಂತ್ರಜ್ಞಾನ ಬಹಳಷ್ಟು ಮುಂದುವರಿದಿದೆ. ಹೊಸ ತಂತ್ರಜ್ಞಾನದ ಬಳಕೆಯಿಂದ ಪಿಸಿಯೋಥೆರಪಿ ಕ್ಷೇತ್ರದಲ್ಲಿ ಮಹತ್ವದ ಬದಲಾವಣೆ ಸಾಧ್ಯ ಎಂದು ಸಚಿವ ಡಿ.ಶ್ರೀಧರ್ ಬಾಬು ಹೇಳಿದರು.
ಕಮಿಷನ್ ಫಾರ್ ಅಲೈಡ್ ಆ್ಯಂಡ್ ಹೆಲ್ತ್ ಕೇರ್ ಕರ್ನಾಟಕ ಇದರ ಅಧ್ಯಕ್ಷ ಡಾ. ಯು.ಟಿ. ಇಪ್ಲಿಕಾ ಫರೀದ್ ಮಾತನಾಡಿ, ಪಿಸಿಯೋಥೆರಪಿ ರಾಷ್ಟ್ರೀಯ ಕಾರ್ಯಾಗಾರದಲ್ಲಿ ಪಾಲ್ಗೊಳ್ಳುತ್ತಿರುವ ಎಲ್ಲ ವಿದ್ಯಾರ್ಥಿಗಳಿಗೂ ಅಭಿನಂದನೆಗಳು ಎಂದರು.
ಲಕ್ಷ್ಮಿಮೆಮೋರಿಯಲ್ ಎಜುಕೇಷನ್ ಟ್ರಸ್ಟ್ ಅಧ್ಯಕ್ಷ ಡಾ.ಎ.ಜೆ. ಶೆಟ್ಟಿ ಮಾತನಾಡಿ, ಪಿಸಿಯೋಥೆರಪಿ ಕ್ಷೇತ್ರಕ್ಕೆ ಇಂದು ದೇಶ ವಿದೇಶಗಳಲ್ಲಿ ಹೆಚ್ಚಿನ ಉದ್ಯೋಗವಕಾಶಗಳು ಸೃಷ್ಟಿಯಾಗಿವೆ. ಪಿಸಿಯೋಥೆರಪಿ ಕಲಿತ ವಿದ್ಯಾರ್ಥಿಗಳು ತಮ್ಮಕ್ಷೇತ್ರ ದಲ್ಲಿ ಹೆಚ್ಚಿನ ಸಾಧನೆ ಮಾಡುತ್ತಿದ್ದಾರೆ ಎಂದರು.
ಕಾರ್ಯಕ್ರಮದಲ್ಲಿ ಟ್ರಸ್ಟ್ ಉಪಾಧ್ಯಕ್ಷ ಎ.ಪ್ರಶಾಂತ್ ಶೆಟ್ಟಿ, ಡಾ.ವಿಶಾಲ್ ರಾವ್, ಹರೀಶ್, ಅಶ್ರಿತಾ ಪಿ.ಶೆಟ್ಟಿ, ಚರಣ್ ಶೆಟ್ಟಿ, ಡಾ.ವೈಶಾಲಿ, ಡಾ. ಅಜಯ್ ಮತ್ತಿತರರು ಉಪಸ್ಥಿತರಿದ್ದರು. ಕಾರ್ಯಕ್ರಮದ ಸಂಘಟಕ ಡಾ.ಅಭಿಲಾಷ್ ಪಿ.ವಿ. ಸ್ವಾಗತಿಸಿದರು. ಲಕ್ಷ್ಮಿಮೆಮೋರಿಯಲ್ ಎಜುಕೇಷನ್ ಟ್ರಸ್ಟ್ ಕಾಲೇಜಿನ ಪ್ರಾಂಶುಪಾಲ ಸಂಜಯ್ ಸ್ಯಾನ್ಯೂವೆಲ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಹರೀಶ್ ಎಸ್. ಕೃಷ್ಣ ವಂದಿಸಿದರು.