ಮಂಗಳೂರು,ಸೆ.30 : ಕುದ್ರೋಳಿಯ ಶ್ರೀ ಗೋಕರ್ಣನಾಥ ಕ್ಷೇತ್ರದ ವತಿಯಿಂದ ನಡೆಯುವ ಮಂಗಳೂರು ದಸರಾ ಅಕ್ಟೋಬರ್ 3 ರಿಂದ 14 ರವರೆಗೆ ನಡೆಯಲಿದೆ ಎಂದು ದೇವಸ್ಥಾನ ಆಡಳಿತ ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಮಂಗಳೂರು ದಸರಾ ಪ್ರಯುಕ್ತ ಅಕ್ಟೋಬರ್ 6 ರಂದು ಹಾಫ್ ಮ್ಯಾರಥಾನ್ ನಡೆಯಲಿದೆ. 21 ಕಿಮೀ ಹಾಫ್ ಮ್ಯಾರಥಾನ್ ನಡೆಯಲಿದ್ದು, 2000ಕ್ಕೂ ಹೆಚ್ಚು ಮಂದಿ ಭಾಗವಹಿಸುವ ನಿರೀಕ್ಷೆ ಇದೆ ಎಂದರು.
ಅಕ್ಟೋಬರ್ 13 ರಂದು ಭವ್ಯ ಮೆರವಣಿಗೆ ನಡೆಯಲಿದ್ದು, ದಸರಾ ಸಂಭ್ರಮದಲ್ಲಿ ಮಂಗಳೂರು ನಗರವು ವಿದ್ಯುತ್ ದೀಪಾಗಳಿಂದ ಕಂಗೊಳಿಸಲಿದೆ. ಮಂಗಳೂರು ದಸರಾದಲ್ಲಿ ಹಲವು ಗಣ್ಯರು ಆಗಮಿಸುವ ನಿರೀಕ್ಷೆ ಇದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಪಾಲ್ಗೊಳ್ಳುವ ಸಾಧ್ಯತೆ ಇದೆ ಎಂದು ಅವರು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾಜಿ ಸಚಿವ ಜನಾರ್ದನ ಪೂಜಾರಿ, ದೇವಸ್ಥಾನದ ಕಾರ್ಯದರ್ಶಿ ಮಾಧವ ಸುವರ್ಣ, ಟ್ರಸ್ಟಿಗಳಾದ ರವಿಶಂಕರ್ ಮಿಜಾರು, ಎಂ. ಶೇಖರ್ ಪೂಜಾರಿ, ಜಗದೀಪ್ ಡಿ. ಸುವರ್ಣ, ಉಪಾಧ್ಯಕ್ಷರಾದ ಬಿ.ಜಿ. ಸುವರ್ಣ, ದೇವಳ ಅಭಿವೃದ್ಧಿ ಸಮಿತಿ ಅಧ್ಯಕ್ಷ ದೇವೇಂದ್ರ ಪೂಜಾರಿ, ಸಹ-ಉಪಾಧ್ಯಕ್ಷೆ ಡಾ. ಅನಸೂಯ ಬಿ.ಟಿ. ಸಾಲ್ಯಾನ್, ದೇವಳ ಅಭಿವೃದ್ಧಿ ಸಮಿತಿ ಸದಸ್ಯರಾದ ಕಿಶೋರ್ ದಂಡೆಕೇರಿ, ವಾಸುದೇವ ಕೋಟ್ಯಾನ್, ಲೀಲಾಕ್ಷ ಕರ್ಕೇರಾ, ಎಚ್.ಎಸ್. ಜೈರಾಜ್, ಲತೀಶ್ ಎಂ. ಸುವರ್ಣ,ರಾಧಾಕೃಷ್ಣ , ಚಂದನ್ದಾಸ್, ಗೌರವಿ ರಾಜಶೇಖರ್, ಕೃತಿನ್ ದೀರಾಜ್ ಅಮೀನ್ ಉಪಸ್ಥಿತರಿದ್ದರು.