ಉಪ್ಪಿನಂಗಡಿ, ಅ.13: ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಉರುಳಿ ಬಿದ್ದ ಪರಿಣಾಮ ಬಸ್ ಚಾಲಕ ಮೃತಪಟ್ಟ ಘಟನೆ ಉಪ್ಪಿನಂಗಡಿಯ ಉದನೆ ಸಮೀಪದ ಎಂಜಿರ ಎಂಬಲ್ಲಿ ಶನಿವಾರ ನಡೆದಿದೆ. ಮೃತರನ್ನು ಭರತ್ ಎಂದು ಗುರುತಿಸಲಾಗಿದೆ.
ಘಟನೆಯಲ್ಲಿ ಬಸ್ ನಿರ್ವಾಹಕ ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಹೇಳಲಾಗಿದೆ. ಅಪಘಾತದ ವೇಳೆ ಬಸ್ಸಿನಲ್ಲಿ ಚಾಲಕ ಮತ್ತು ನಿರ್ವಾಹಕ ಮಾತ್ರ ಇದ್ದರೆನ್ನಲಾಗಿದೆ.