ಮೂಡುಬಿದಿರೆ,ಸೆ.18 : ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆಯ ಎನರ್ಜಿ ಆ್ಯಂಡ್ ವೆಟ್ಲ್ಯಾಂಡ್ಸ್ ರಿಸರ್ಚ್ ಗ್ರೂಪ್ ಮತ್ತು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಮೂಡುಬಿದಿರೆ ಇವುಗಳ ಜಂಟಿ ಆಶ್ರಯದಲ್ಲಿ 4 ದಿನಗಳ ಕಾಲ ನಡೆಯ ಲಿರುವ 14ನೇ ಅಂತರ್ ರಾಷ್ಟ್ರೀಯ ಲೇಕ್ ಸಮ್ಮೇಳನಕ್ಕೆ ಮೂಡುಬಿದಿರೆಯ ವಿದ್ಯಾಗಿರಿ ಆವರಣದಲ್ಲಿ ಗುರುವಾರ ಚಾಲನೆ ದೊರೆಯಿತು.
ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಸಮ್ಮೇಳನವನ್ನು ಉದ್ಘಾಟಿಸಿ ಶುಭ ಹಾರೈಸಿದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಡಳಿತ ಟ್ರಸ್ಟಿ ವಿವೇಕ್ ಆಳ್ವಅಧ್ಯಕ್ಷತೆ ವಹಿಸಿ ಕಾರ್ಯಕ್ರಮದಲ್ಲಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಮಂಗಳೂರು ಎಸಿಎಫ್ ಆಂಟನಿ ಎಸ್. ಮರಿಯಪ್ಪ ಕೆನಡಾದ ಪರಿಸರ ಚಿಂತಕ ಡಾ.ಸಿ. ರಾಜಶೇಖರ ಮೂರ್ತಿ, ಪರಿಸರವಾದಿ ಡಾ.ಎಂ.ಡಿ. ಸುಭಾಸ್ ಚಂದ್ರನ್ ಮಾತನಾಡಿದರು.
ಕಾರ್ಯಕ್ರಮದಲ್ಲಿ ಬಿಎಂ. ಕೃಷ್ಣ ಮೂರ್ತಿ, ಡಾ.ಹರೀಶ ಕೃಷ್ಣ ಮೂರ್ತಿ , ಸಂಘಟನಾ ಕಾರ್ಯದರ್ಶಿ ಡಾ.ಎಸ್. ವಿನಯ್ ಉಪಸ್ಥಿತರಿದ್ದರು.