ಕಾರ್ಕಳ, ಅ.26 : ಗೂಡ್ಸ್ ವಾಹನ ಡಿಕ್ಕಿ ಹೊಡೆದ ಪರಿಣಾಮ ರಸ್ತೆ ಬದಿಯಲ್ಲಿ ನಿಂತಿದ್ದ ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಅಜೆಕಾರು ಸಮೀಪದ ಗುಡ್ಡೆಯಂಗಡಿ ಬಳಿಯ ಓಟೆಹಳ್ಳ ಸೇತುವೆಯ ಬಳಿ ಶನಿವಾರ ನಡೆದಿದೆ.ಮೃತ ವ್ಯಕ್ತಿಯನ್ನು ಆಸೈ ತಂಬಿ(21) ಎಂದು ಗುರುತಿಸಲಾಗಿದೆ.
ಕಾರ್ಕಳ ಕಡೆಯಿಂದ ಹೆಬ್ರಿ ಕಡೆಗೆ ವೇಗವಾಗಿ ಹೋಗುತ್ತಿದ್ದ ಗೂಡ್ಸ್ ವಾಹನ ರಸ್ತೆ ಬಲಭಾಗಕ್ಕೆ ಬಂದು ವ್ಯಕ್ತಿಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ವಾಹನದ ಚಾಲಕನಿಗೆ ಮುಂಜಾನೆ ನಿದ್ದೆಗಣ್ಣಿನಲ್ಲಿ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಿದರೂ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ.
ಈ ಬಗ್ಗೆ ಅಜೆಕಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.