ಮಂಗಳೂರು : ಕರ್ನಾಟಕ ಸರಕಾರ, ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಆಯುಷ್ ಇಲಾಖೆ ದ.ಕ ವತಿಯಿಂದ ನಗರದ ವೆನ್ಲಾಕ್ ಆಸ್ಪತ್ರೆ ಆವರಣದ ಆಯುಷ್ ಸಂಯುಕ್ತ ಆಸ್ಪತ್ರೆಯಲ್ಲಿ ನಡೆದ 9ನೇ ರಾಷ್ಟ್ರೀಯ ಆಯುರ್ವೇದ ದಿನಾಚರಣೆ – 2024 ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದಲ್ಲಿ ಮಾತನಾಡಿದ ಮೇಯರ್ ಮನೋಜ್ ಕುಮಾರ್ ಅವರು, ಪಾಕೃತಿಕವಾಗಿ ಸಿಗುವಂತಹುದ್ದನ್ನು ಬಳಸಿ ನೀಡಲಾಗುವ ಔಷದವೇ ಆಯುರ್ವೇದ ಚಿಕಿತ್ಸಾ ಪದ್ಧತಿ ಯಾಗಿದೆ. ಆಯುರ್ವೇದದಿಂದ ನಿಧಾನವಾಗಿ ರೋಗ ವಾಸಿಯಾಗುತ್ತೆ ಎಂದು ಹೇಳುತ್ತಾರೆ. ಆದರೆ ಶೇ.100 ರಷ್ಟು ರೋಗ ವಾಸಿ ಮಾಡುವ ಶಕ್ತಿ ಆಯುರ್ವೇದಕ್ಕೆ ಇದೆ ಎಂದರು.
ಕರ್ನಾಟಕ ಗೇರು ಅಭಿವೃದ್ದಿ ನಿಗಮದ ಅಧ್ಯಕ್ಷೆ ಮಮತಾ ಡಿ. ಎಸ್. ಗಟ್ಟಿ ಮಾತನಾಡಿ, ನಿತ್ಯದ ಜೀವನ ಸುಂದರವಾಗಿ ರೂಪಿಸಬೇಕಾದರೆ ಆರೋಗ್ಯ ಬಹಳ ಮುಖ್ಯವಾಗಿದೆ. ಆರೋಗ್ಯ ಹದಗೆಡುವುದ್ದಕ್ಕಿಂತ ಮೊದಲು ಮುಂಜಾಗ್ರತ ಕ್ರಮಗಳನ್ನು ಕೈಗೊಂಡರೆ ಉತ್ತಮ ಆರೋಗ್ಯ ಸಾಧ್ಯ. ಆಯುರ್ವೇದ ಚಿಕಿತ್ಸಾ ಪದ್ಧತಿ ಆರೋಗ್ಯವನ್ನು ಇನಷ್ಟು ಸುಧಾರಿಸುತ್ತದೆ ಎಂದರು.
ಈ ಸಂದರ್ಭ ಡಾ. ಮಮತಾ ಕೆ.ಪಿ. ಅವರನ್ನು ಆಸ್ಪತ್ರೆಯ ವತಿಯಿಂದ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಆಯುಷ್ ಫೆಡರೇಶನ್ ಆಫ್ ಇಂಡಿಯಾ ಇದರ ಅಧ್ಯಕ್ಷ ಡಾ. ಕೃಷ್ಣ ಗೋಖಲೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಬಿ.ಎ. ಖಾದರ್ ಶಾ, ಯೋಗಗುರು ಗೋಪಾಲಕೃಷ್ಣ ದೇಲಂಪಾಡಿ, ವೈದ್ಯಾಧಿಕಾರಿ ಡಾ. ಝಾಹೀದ್ ಉಪಸ್ಥಿತರಿದ್ದರು.