ಮಂಗಳೂರು, ನ.1: ನಗರದ ನೆಹರೂ ಮೈದಾನದಲ್ಲಿ ದ.ಕ. ಜಿಲ್ಲಾಡಳಿತದಿಂದ ಜಿಲ್ಲಾ ಮಟ್ಟದ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮ ನ.1 ರಂದು ನಡೆಯಿತು.
ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಾತಾಡಿದ ದ.ಕ. ಜಿಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು, ರಾಜ್ಯವನ್ನು ಸಮೃದ್ಧ ಕರ್ನಾಟಕ ಮಾಡುವುದೇ ಸರಕಾರದ ಗುರಿಯಾಗಿದ್ದು, ಅನೇಕ ಜನಪರ, ಜನಕಲ್ಯಾಣ ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದು ಹೇಳಿದರು.
ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ 59 ಸಾಧಕರು, 24 ಸಂಸ್ಥೆಗಳಿಗೆ ದ.ಕ. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯನ್ನು ಪ್ರದಾನ ಮಾಡಿಲಾಯಿತು.
ಕಾರ್ಯಕ್ರಮದಲ್ಲಿ ಸಂಸದ ಕ್ಯಾಬ್ರಿಜೇಶ್ ಚೌಟ, ಶಾಸಕರಾದ ವೇದವ್ಯಾಸ ಕಾಮತ್, ಐವನ್ ಡಿಸೋಜ, ಮೇಯ ಮನೋಜ್ ಕೋಡಿಕ್ಕಲ್, ದ.ಕ. ಜಿಲ್ಲಾಧಿಕಾರಿ ಮುತ್ತೈ ಮುಗಿಲನ್, ಅಪರ ಜಿಲ್ಲಾಧಿಕಾರಿ ಡಾ. ಸಂತೋಷ್ ಕುಮಾರ್, ಎ.ಸಿ. ವಿನಯರಾಜ್, ನವೀನ್ ಡಿಸೋಜ, ಪ್ರವೀಣ್ ಕುಮಾರ್ ಆಳ್ವ, ಶಾಹುಲ್ ಹಮೀದ್, ಕಸಾದ ದ.ಕ. ಜಿಲ್ಲಾಧ್ಯಕ್ಷ ಎಂ.ಪಿ.ಶ್ರೀನಾಥ್, ಸದಾಶಿವ ಉಳ್ಳಾಲ್, ಕಸಾಪ ನಿಕಟಪೂರ್ವ ಅಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ, ಕರ್ನಾಟಕ ಬ್ಯಾರಿ ಅಕಾಡೆಮಿಯ ಅಧ್ಯಕ್ಷ ಉಮರ್ ಯು.ಎಚ್., ಸ್ಟಾನಿ ಅಲ್ವಾರಿಸ್ ಮತ್ತಿತರರು ಉಪಸ್ಥಿತರಿದ್ದರು.