ಕಾಪು, ನ.04 : ಬೈಕ್ ಗೆ ಟ್ಯಾಂಕರ್ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಕೊಪ್ಪಲಂಗಡಿ ಬಸ್ ನಿಲ್ದಾಣದ ಸಮೀಪ ಶನಿವಾರ ರಾತ್ರಿ ನಡೆದಿದೆ.
ಮೃತರನ್ನು ಕಾಪು ಕೊಪ್ಪಲಂಗಡಿ ನಿವಾಸಿ, ಟೈಲರ್ ವೃತ್ತಿಯ ಹರೀಶ್ ಕುಮಾರ್ (45) ಎಂದು ಗುರುತಿಸಲಾಗಿದೆ.
ಮಂಗಳೂರಿನಿಂದ ಉಡುಪಿ ಕಡೆಗೆ ತೆರಳುತ್ತಿದ್ದ ಟ್ಯಾಂಕರ್ ಅದೇ ದಿಕ್ಕಿನಲ್ಲಿ ಹೋಗುತ್ತಿದ್ದ ಬೈಕ್ನ ಹಿಂಬದಿಗೆ ಢಿಕ್ಕಿ ಹೊಡೆದಿದ್ದು, ಬೈಕ್ ಸವಾರ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದರು. ಸ್ಥಳೀಯರು ಗಾಯಾಳುವನ್ನು ಕೂಡಲೇ ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಅದಾಗಲೇ ಗಾಯಾಳು ಆಸ್ಪತ್ರೆಗೆ ತಲುಪುವಷ್ಟರಲ್ಲಿ ಸಾವನ್ನಪ್ಪಿರುವುದಾಗಿ ವೈದ್ಯರು ತಿಳಿಸಿದ್ದಾರೆ ಎಂದು ವರದಿಯಾಗಿದೆ.
ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.