ನವದೆಹಲಿ,ನ.11: ರವಿವಾರ ದೇಶದ ಉನ್ನತ ಕಾನೂನು ಹುದ್ದೆಯಿಂದ ನಿವೃತ್ತರಾದ ಮಾಜಿ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರ ಉತ್ತರಾಧಿಕಾರಿಯಾಗಿ ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರು ಇಂದು ಸೋಮವಾರ ಭಾರತದ 51 ನೇ ಮುಖ್ಯ ನ್ಯಾಯಮೂರ್ತಿಯಾಗಿ ಅಧಿಕಾರ ವಹಿಸಿಕೊಂಡರು.
ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು 64 ವರ್ಷದ ನ್ಯಾಯಾಧೀಶರಿಗೆ ಪ್ರಮಾಣ ವಚನ ಬೋಧಿಸಿದರು. ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರು ಭಾರತದ ಮುಖ್ಯ ನ್ಯಾಯಮೂರ್ತಿಯಾಗಿ ಆರು ತಿಂಗಳ ಅವಧಿಗೆ ಸೇವೆ ಸಲ್ಲಿಸಲಿದ್ದಾರೆ. ಅವರು ಮುಂದಿನ ವರ್ಷ ಮೇ 13 ರಂದು ನಿವೃತ್ತರಾಗಲಿದ್ದಾರೆ.
ಉಪರಾಷ್ಟ್ರಪತಿ ಜಗದೀಪ್ ಧಂಖರ್, ಪ್ರಧಾನಿ ನರೇಂದ್ರ ಮೋದಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಮಾಜಿ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಮತ್ತು ಇತರ ಸಚಿವರು ಸಮಾರಂಭದಲ್ಲಿ ಉಪಸ್ಥಿತರಿದ್ದರು.