ಮೂಡುಬಿದಿರೆ, ನ. 13:ಮೂಡಬಿದರೆ ವಿದ್ಯಾನಗರಿಯ ಆಳ್ವಾಸ್ ಕಾಲೇಜಿನ ನುಡಿಸಿರಿ ಸಭಾಂಗಣದಲ್ಲಿ ‘ಗದ್ದಿಗೆ’ ಕರಾವಳಿ ಮರಾಟ ಸಮಾವೇಶ-2024 ಕಾರ್ಯಕ್ರಮ ರವಿವಾರ ನಡೆಯಿತು.
‘ಗದ್ದಿಗೆ’ ಕರಾವಳಿ ಮರಾಟ ಸಮಾವೇಶ-2024 ಉದ್ಘಾಟಿಸಿ ಮಾತನಾಡಿದ ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ| ಎಚ್.ಸಿ. ಮಹಾದೇವಪ್ಪ ಅವರು, ರಾಜ ಕಾರಣವನ್ನು ಬದಿಗಿರಿಸಿ ಸಂವಿಧಾನದ ತತ್ತ್ವಗಳನ್ನು ಜಾರಿ ಮಾಡುವ ಮೂಲಕ ಉತ್ತಮ ಸಮಾಜದ ನಿರ್ಮಾಣ ಸಾಧ್ಯ. ಸಂವಿಧಾನದ ನಿರ್ದೇಶನ ಹಾಗೂ ತತ್ವಗಳ ಅಡಿಯಲ್ಲಿ ಸುಸೂತ್ರವಾಗಿ ಕಾರ್ಯಗಳು ನಡೆದರೆ, 2ನೇ ದರ್ಜೆಯ ಪ್ರಜೆಗಳೆನಿಸಿರುವ ಆದಿವಾಸಿ ಗಳು ಮುಂದಿನ ಹತ್ತು ವರ್ಷಗಳಲ್ಲಿ ಸಮಾಜದ ಮುಖ್ಯವಾಹಿನಿಗೆ ಬರುವಂತಾಗುತ್ತದೆ ಎಂದು ಅವರು ಹೇಳಿದರು.
‘ಗದ್ದಿಗೆ ಸ್ಮರಣಸಂಚಿಕೆಯನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ| ಎಂ. ಮೋಹನ ಆಳ್ವ ಅವರು ಬಿಡುಗಡೆಗೊಳಿಸಿದರು. ನಂತರ ಮಾತನಾಡಿದ ಅವರು, ನಮ್ಮ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಸದಾ ಸಮಾಜದ ಪರಿಕಲ್ಪನೆಯಲ್ಲಿ ಕಾರ್ಯ ನಿರ್ವಹಿಸುತ್ತಾ ಬಂದಿದೆ. ಕರಾವಳಿ ಮರಾಟಿ ಸಮಾವೇಶ ನಮ್ಮ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆವರಣದಲ್ಲಿ ಜರಗುತ್ತಿರುವುದು ಸಂತಸದ ವಿಷಯ ಎಂದರು.
ಸಮಾವೇಶದಲ್ಲಿ ಶಾಸಕ ಉಮಾನಾಥ ಎ. ಕೋಟ್ಯಾನ್ ಮಾತನಾಡಿದರು. ಜಮ್ಮು ಕಾಶ್ಮೀರ ಸರಕಾರದ ಪ್ರಧಾನ ಕಾರ್ಯದರ್ಶಿ ರಾಜೇಶ್ ಪ್ರಸಾದ್ ಅಧ್ಯಕ್ಷತೆ ವಹಿಸಿದ್ದರು.ಸಮಾವೇಶದಲ್ಲಿ ಮೂರು ಗೋಷ್ಠಿಗಳು ನಡೆದವು.
ಪದ್ಮಶ್ರೀ ಪುರಸ್ಕೃತ ಅಮೈ ಮಹಾಲಿಂಗ ನಾಯ್ಕರನ್ನು ಸಮ್ಮಾನಿಸಲಾತು. ಮಾಜಿ ಸಚಿವ ಅಭಯಚಂದ್ರ, ಉದ್ಯಮಿ ಬರೋಡ ಶಶಿಧರ ಶೆಟ್ಟಿ ಬಿ.ಜಿ.ನಾಯ್ಕ,ಗಣ್ಯರಾದ ಡಾ।ಶೋಭಾವತಿ ಎಂ.ಟಿ., ಎನ್.ವಿಶ್ವನಾಥ ನಾಯ್ಕ ,ಅಶೋಕ್ ನಾಯ್ಕ,
ಕೆದಿಲ ಡಾ| ಬಾಲಕೃಷ್ಣ ಸಿ.ಎಚ್., ರಾಮಚಂದ್ರ ನಾಯ್ಕ ಕೆ. ಚಂದ್ರಶೇಖರ ನಾಯ್ಕ, ಎಸ್. ಎಸ್. ಪರಮೇಶ್ವರ, ರಾಮಚಂದ್ರ ಕೆಂಬಾರೆ, ಪ್ರಕಾಶ್ ನಾಯ್ಕ ಮೊದಲಾದವರು ಉಪಸ್ಥಿತರಿದ್ದರು. ಗೌರವಾಧ್ಯಕ್ಷ ಡಾ| ಕೆ. ಸುಂದರ ನಾಯ್ಕ ಸ್ವಾಗತಿಸಿದರು. ಪ್ರಧಾನ ಕಾವ್ಯದರ್ಶಿ ಶಂಕರ ನಾಯ್ಕ ವಂದಿಸಿದರು. ಪ್ರಕಾಶ ನಾಯ್ಕ ನಿರೂಪಿಸಿದರು.