Close Menu
Navaloka Media News Mangalore| Kannada Online News PortalNavaloka Media News Mangalore| Kannada Online News Portal
    Our Picks

    ಸೆ.4 : ಕಲ್ಕೂರ ಪ್ರತಿಷ್ಠಾನ ಹಾಗೂ ಕದ್ರಿ ಶ್ರೀ ಮಂಜುನಾಥ ದೇವಸ್ಥಾನದ ಸಹಯೋಗದಲ್ಲಿ ಕದ್ರಿಯಲ್ಲಿ ರಾಷ್ಟ್ರೀಯ ಮಕ್ಕಳ ಉತ್ಸವ, ಶ್ರೀಕೃಷ್ಣ ವೇಷ ಸ್ಪರ್ಧೆ

    August 28, 2026

    ಮಣಿಪಾಲ ಆರೋಗ್ಯ ಕಾರ್ಡ್ -2026 ನೋಂದಣಿಗೆ ಆಗಸ್ಟ್ 31 ಕೊನೆಯ ದಿನ

    August 27, 2026

    ಬಂಟ್ಸ್ ಹಾಸ್ಟೇಲ್ : ಜಾಗತಿಕ ಬಂಟರ ಸಂಘಗಳ ಒಕ್ಕೂಟದಿಂದ ಆಡಳಿತ ಮಂಡಳಿ ಸಭೆ

    August 27, 2026

    Subscribe to Updates

    Get the latest creative news from FooBar about art, design and business.

    What's Hot

    ಸೆ.4 : ಕಲ್ಕೂರ ಪ್ರತಿಷ್ಠಾನ ಹಾಗೂ ಕದ್ರಿ ಶ್ರೀ ಮಂಜುನಾಥ ದೇವಸ್ಥಾನದ ಸಹಯೋಗದಲ್ಲಿ ಕದ್ರಿಯಲ್ಲಿ ರಾಷ್ಟ್ರೀಯ ಮಕ್ಕಳ ಉತ್ಸವ, ಶ್ರೀಕೃಷ್ಣ ವೇಷ ಸ್ಪರ್ಧೆ

    August 28, 2026

    ಮಣಿಪಾಲ ಆರೋಗ್ಯ ಕಾರ್ಡ್ -2026 ನೋಂದಣಿಗೆ ಆಗಸ್ಟ್ 31 ಕೊನೆಯ ದಿನ

    August 27, 2026

    ಬಂಟ್ಸ್ ಹಾಸ್ಟೇಲ್ : ಜಾಗತಿಕ ಬಂಟರ ಸಂಘಗಳ ಒಕ್ಕೂಟದಿಂದ ಆಡಳಿತ ಮಂಡಳಿ ಸಭೆ

    August 27, 2026
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    • Home
    • Local News
    • State News
    • National/International news
    • Film News
    • Contact Us
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    Home»Uncategorized»ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸ್ವ ಸಹಾಯ ಸಂಘಗಳ ಸದಸ್ಯರಿಗೆ 605 ಕೋಟಿ ರೂ ಲಾಭಾಂಶ ವಿತರಣೆ
    Uncategorized

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸ್ವ ಸಹಾಯ ಸಂಘಗಳ ಸದಸ್ಯರಿಗೆ 605 ಕೋಟಿ ರೂ ಲಾಭಾಂಶ ವಿತರಣೆ

    adminBy adminNovember 15, 2024
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter LinkedIn Pinterest Email
    Navaloka media news
    Navaloka media news

    ಧರ್ಮಸ್ಥಳ,ನ.15 : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸ್ವ ಸಹಾಯ ಸಂಘಗಳ ಸದಸ್ಯರಿಗೆ 605 ಕೋಟಿ ರೂ ಲಾಭಾಂಶ ವಿತರಣಾ ಕಾರ್ಯಕ್ರಮ ಧರ್ಮಸ್ಥಳದ ಅಮೃತವರ್ಷಿಣಿ ಸಭಾಭವನದಲ್ಲಿ ಗುರುವಾರ ನಡೆಯಿತು.

    ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್  ಅವರು, ಹಿಂದೆ ಗ್ರಾಮೀಣಾಭಿವೃದ್ಧಿ ಎಂಬುದು ಕಲ್ಯಾಣ ಕಾರ್ಯಕ್ರಮಕ್ಕೆ ಸೀಮಿತ ಆಗಿತ್ತು. ಸರ್ಕಾರ ಸ್ವಸಹಾಯ ಗುಂಪುಗಳಿಗೆ ಹಣಕಾಸಿನ ನೆರವು ನೀಡುತ್ತಿತ್ತು. ಅವರು ಅದನ್ನು ಸಣ್ಣ ಪುಟ್ಟ ಉದ್ದೇಶಗಳಿಗೆ ಬಳಸುತ್ತಿದ್ದರು. ಆದರೆ, ಈಗ ಗ್ರಾಮೀಣಾಭಿವೃದ್ಧಿಯ ಪರಿಕಲ್ಪನೆ ಬದಲಾಗಿದೆ. ಈಗ ಕಲ್ಯಾಣ ಕಾರ್ಯಕ್ರಮದ ಮೂಲಕ ಮಹಿಳೆಯರೂ ಸ್ವಾವಲಂಬಿಗಳಾಗುತ್ತಿದ್ದಾರೆ. ಇದರಲ್ಲಿ ಕೇಂದ್ರ ಸರ್ಕಾರ ಹಾಗೂ ಸ್ವಸಹಾಯ ಸಂಘಗಳೆರಡರ ಪಾತ್ರವೂ ಇದೆ. ದೇಶದ ಜನರ ಸಬಲೀಕರಣವೇ ಬಡತನ ನಿರ್ಮೂಲನೆಯ ಸಾಧನ. ಈ ಸಬಲೀಕರಣವು ಜನರಿಗೆ ಹಣ ಗಳಿಸುವುದಕ್ಕೆ, ಸ್ವಂತ ನಿರ್ಧಾರ ತಳೆಯುವುದಕ್ಕೆ, ಅವಕಾಶಗಳನ್ನು ಕಲ್ಪಿಸುತ್ತಿದೆ. ಅವರೂ ಡಿಜಿಟಲ್ ಮಾರುಕಟ್ಟೆಯನ್ನು ಬಳಸಿಕೊಳ್ಳಲು ಮತ್ತು ವಹಿವಾಟಿನ ಹಣವನ್ನು ಡಿಜಿಟಲ್ ರೂಪದಲ್ಲೇ ಪಡೆಯಲು ಅವಕಾಶ ಕಲ್ಪಿಸಲಾಗುತ್ತಿದೆ ಎಂದು ಹೇಳಿದರು.

    ದೇಶದಲ್ಲಿ ನಬಾರ್ಡ್, ಎಸ್ ಕೆಡಿಆರ್ ಡಿಪಿ ಕಾರ್ಯಕ್ರಮಗಳು ಗ್ರಾಮೀಣಾಭಿವೃದ್ಧಿಗೆ ಪೂರಕವಾಗಿ ಕಾರ್ಯನಿರ್ವಹಿಸುತ್ತಿದೆ. ಇದರಿಂದ ಗ್ರಾಮೀಣ ಅಭಿವೃದ್ಧಿಯಲ್ಲಿ ಮಹಿಳಾ ಭಾಗವಹಿಸುವಿಕೆ ಹೆಚ್ಚಿದೆ.ಹಳ್ಳಿಯ ಹೆಣ್ಣುಮಕ್ಕಳೂ 15 ಲಕ್ಷದವರೆಗೂ ಸಾಲ ಪಡೆಯುತ್ತಿದ್ದಾರೆ. ಹಳ್ಳಿಯ ಹೆಣ್ಣು ಮಕ್ಕಳು ಕಂಪ್ಯೂಟರ್ ಕಲಿತಿದ್ದಾರೆ. ಮೊಬೈಲ್ ನಲ್ಲಿ ವಿವರ ಅಪ್ಲೋಡ್ ಮಾಡುತ್ತಾರೆ. ಅಕ್ಷರ ಕಲಿಯದವರೂ ನೋಟುಗಳನ್ನು ಸರಿಯಾಗಿ ಎಣಿಸುತ್ತಾರೆ ಎಂದರು.

    ಕಾರ್ಯಕ್ರಮದಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು, ಬೆಳ್ತಂಗಡಿಯ ಧನ್ಯಶ್ರೀ ಸಂಘ, ಕುಂದಾಪುರದ ಶ್ರೀನಿಧಿ ಸಂಘ, ಹೊಸಪೇಟೆಯ ಶ್ರೀಶಂಕರ ಸಂಘ, ಆನೇಕಲ್ ನ ಅಪೂರ್ವ ಸಂಘ, ಖಾನಾಪುರದ ಅಹದ್ ಸಂಘ, ಹಾಸನದ ರೋಶನ್ ಸಂಘಗಳ ಸದಸ್ಯರಿಗೆ ಲಾಭಾಂಶದ ಚೆಕ್ ವಿತರಿಸಿದರು.

    ಕಾರ್ಯಕ್ರಮದಲ್ಲಿ ಸಂಸದ ಕ್ಯಾ.ಬ್ರಿಜೇಶ್ ಚೌಟ, ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್, ಗ್ರಾಮಾಭಿವೃದ್ಧಿ ಯೋಜನೆಯ ಜ್ಞಾನವಿಕಾಸ ಕಾರ್ಯಕ್ರಮದ ಅಧ್ಯಕ್ಷೆ ಹೇಮಾವತಿ ವಿ.ಹೆಗ್ಗಡೆ ಉಪಸ್ಥಿತರಿದ್ದರು.
    ಯೋಜನೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅನಿಲ್ ಕುಮಾರ್ ಎಸ್.ಎಸ್ ಸ್ವಾಗತಿಸಿದರು. ಯೋಜನೆಯ ಸಮುದಾಯ ಅಭಿವೃದ್ಧಿ ವಿಭಾಗದ ಪ್ರಾದೇಶಿಕ ನಿರ್ದೇಶಕ ಆನಂದ್ ಸುವರ್ಣ ಧನ್ಯವಾದ ಸಮರ್ಪಿಸಿದರು.

    Navaloka media news
    Navaloka media news
    Share. Facebook Twitter Pinterest LinkedIn WhatsApp Reddit Tumblr Email
    admin
    • Website

    Related Posts

    Uncategorized August 20, 2026

    ಆಗಸ್ಟ್ 20 – 23 : ಮಂಗಳೂರಿನಲ್ಲಿ ನಾಲ್ಕನೇ ಅಂತರರಾಷ್ಟ್ರೀಯ ಇಎನ್‌ಟಿ ತಜ್ಞರ ಸಮ್ಮೇಳನ

    Uncategorized August 9, 2026

    ಆ.11ರಂದು ಮಂಗಳೂರು ತುಳುನಾಟಕ ಕಲಾವಿದರ ಒಕ್ಕೂಟದ ವಾರ್ಷಿಕ ಸಂಭ್ರಮ

    Local News August 7, 2026

    ಆ 7- 9: ಮಂಗಳೂರಿನಲ್ಲಿ 37ನೇ ವಾರ್ಷಿಕ ‘SZUSICON 2026’ ಸಮ್ಮೇಳನ

    National or International news July 17, 2026

    ಕೋಲ್ಕತ್ತಾ : ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ – ಇಬ್ಬರು ವಿದ್ಯಾರ್ಥಿ ಸೇರಿ ಮೂವರು ಮೃತ್ಯು

    Uncategorized May 18, 2026

    ಬೆಳ್ತಂಗಡಿಯಲ್ಲಿ ರಸ್ತೆ ಅಪಘಾತ : ಮಹಿಳೆ ಸಾವು

    Uncategorized April 30, 2026

    ಬಂಟರ ಯಾನೆ ನಾಡವರ ಮಾತೃ ಸಂಘದಅಧ್ಯಕ್ಷರಾಗಿ ಕೆ ಅಜಿತ್ ಕುಮಾರ್ ರೈ ಮಾಲಾಡಿ ಪುನರಾಯ್ಕೆ

    Comments are closed.

    Demo
    Don't Miss
    Local News August 28, 2026

    ಸೆ.4 : ಕಲ್ಕೂರ ಪ್ರತಿಷ್ಠಾನ ಹಾಗೂ ಕದ್ರಿ ಶ್ರೀ ಮಂಜುನಾಥ ದೇವಸ್ಥಾನದ ಸಹಯೋಗದಲ್ಲಿ ಕದ್ರಿಯಲ್ಲಿ ರಾಷ್ಟ್ರೀಯ ಮಕ್ಕಳ ಉತ್ಸವ, ಶ್ರೀಕೃಷ್ಣ ವೇಷ ಸ್ಪರ್ಧೆ

    ಮಂಗಳೂರು,ಆ.28: ಮಕ್ಕಳಲ್ಲಿ ಧಾರ್ಮಿಕ ಪ್ರಜ್ಞೆಯನ್ನು ಬೆಳೆಸುವ ಪ್ರಯತ್ನವಾಗಿ ಮತ್ತು ಅವರಲ್ಲಿನ ಪ್ರತಿಭೆಯನ್ನು ಬೆಳೆಸುವ ಉದ್ದೇಶದಿಂದ ಕಲ್ಕೂರ ಪ್ರತಿಷ್ಠಾನ ಹಾಗೂ ಕದ್ರಿ…

    ಮಣಿಪಾಲ ಆರೋಗ್ಯ ಕಾರ್ಡ್ -2026 ನೋಂದಣಿಗೆ ಆಗಸ್ಟ್ 31 ಕೊನೆಯ ದಿನ

    August 27, 2026

    ಬಂಟ್ಸ್ ಹಾಸ್ಟೇಲ್ : ಜಾಗತಿಕ ಬಂಟರ ಸಂಘಗಳ ಒಕ್ಕೂಟದಿಂದ ಆಡಳಿತ ಮಂಡಳಿ ಸಭೆ

    August 27, 2026

    ಮಂಗಳೂರು : ಎಂಪಿಸಿ ರೋಟರಿ ಕೋಸ್ಟಲ್ ಎಂಎಸ್ ಎಂಇ ಮತ್ತು ಸ್ಟಾರ್ಟಪ್ ಕಾನ್ ಕ್ಲೇವ್- 2026 ಸಮಾವೇಶ

    August 25, 2026
    Stay In Touch
    • Facebook
    • Twitter
    • Pinterest
    • Instagram
    Facebook X (Twitter) Instagram Pinterest
    • Home
    • Local News
    • State News
    • National/International news
    • Film News
    • Contact Us
    © 2026 All Right Reserved. Designed by Blueline Computers.

    Type above and press Enter to search. Press Esc to cancel.