ಮಂಗಳೂರು, ನ. 15: ಅಖಿಲ ಭಾರತ 71ನೇ ಸಹಕಾರ ಸಪ್ತಾಹದ ಹಿನ್ನೆಲೆಯಲ್ಲಿ ನವೆಂಬರ್ 16ರಂದು ಬೆಳಗ್ಗೆ 10ಕ್ಕೆ ‘ಉದ್ಯಮಶೀಲತೆ, ಉದ್ಯೋಗ ಮತ್ತು ಕೌಶಲಾಭಿವೃದ್ಧಿಯನ್ನು ಉತ್ತೇಜಿಸುವಲ್ಲಿ ಸಹಕಾರ ಸಂಸ್ಥೆಗಳ ಪಾತ್ರ’ ಎಂಬ ವಿಷಯದೊಂದಿಗೆ ನಗರದ ಕರಾವಳಿ ಉತ್ಸವ ಮೈದಾನದಲ್ಲಿ ರಾಜ್ಯಮಟ್ಟದ ಕಾರ್ಯಕ್ರಮ ಆಯೋ ಜಿಸಲಾಗಿದೆ ಎಂದು ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಡಾ| ಎಂ.ಎನ್.ರಾಜೇಂದ್ರ ಕುಮಾರ್ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,ರಾಜ್ಯ ಮಟ್ಟದ ಸಹಕಾರ ಸಪ್ತಾಹದ ವಸ್ತುಪ್ರದರ್ಶನ ಮಳಿಗೆಗಳನ್ನು ವಿಧಾನ ಸಭಾಧ್ಯಕ್ಷರು ಯು.ಟಿ. ಖಾದರ್ ಉದ್ಘಾಟಿಸಲಿದ್ದಾರೆ. ಸಹಕಾರ ಸಪ್ತಾಹವನ್ನು ಸಹಕಾರ ಸಚಿವ ಕೆ.ಎನ್. ರಾಜಣ್ಣ ಉದ್ಘಾಟಿಸಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಪ್ರಶಸ್ತಿ ಪ್ರದಾನ ಮಾಡುವರು. ಮಾಜಿ ಡಿಸಿಎಂ ಲಕ್ಷ್ಮಣ ಸವದಿ, ರಾಜ್ಯ ಸಹ ಕಾರಮಹಾಮಂಡಲದಅಧ್ಯಕ್ಷ ಜಿ.ಟಿ. ದೇವೇಗೌಡ, ದಕ್ಷಿಣ ಕನ್ನಡ ಸಂಸದ ಕ್ಯಾ| ಬ್ರಿಜೇಶ್ ಚೌಟ, ಶಾಸಕ ವೇದವ್ಯಾಸ್ ಡಿ.ಕಾಮತ್ ಸಹಿತ ಹಲವು ಗಣ್ಯರು ಭಾಗವಹಿಸಲಿದ್ದಾರೆ ಎಂದರು.
ಸಪ್ತಾಹದ ಅಂಗವಾಗಿ ಸಹಕಾರ ಜಾಥಾ ಆಯೋಜಿಸಲಾಗಿದ್ದು, ಬೆಳಗ್ಗೆ 9 ಗಂಟೆಗೆ ಎಸ್ಸಿಡಿಸಿಸಿ ಬ್ಯಾಂಕಿನ ಆವರಣದಿಂದ ಕರಾವಳಿ ಉತ್ಸವ ಮೈದಾನದವರೆಗೆ ಸಾಂಸ್ಕೃತಿಕ ಕಲಾ ಪ್ರಕಾರಗಳು ಹಾಗೂ ಸಹಕಾರ ಕ್ಷೇತ್ರಕ್ಕೆ ಸಂಬಂಧಿಸಿದ 30 ವಿವಿಧ ಟ್ಯಾಬ್ಲೊಗಳೊಂದಿಗೆ ನಡೆಯಲಿದೆ.ಸಹಕಾರಿ ರಥ, ಹೈನುಗಾರಿಕೆ, ತುಳುನಾಡ ವೈಭವ, ಕಂಬಳ, ಹಳ್ಳಿ ಮನೆ, ಕೃಷಿ ಚಟುವಟಿಕೆ ಸಹಿತ 30 ಸ್ತಬ್ಧಚಿತ್ರಗಳು ಇರಲಿವೆ.ವಿವಿಧ ಸಹಕಾರ ಸಂಘಗಳ ಸೇರುವಿಕೆಯೊಂದಿಗೆ ಕಾರ್ಯಕ್ರಮ ನಡೆಯಲಿದೆ. 15 ಸಾವಿರಕ್ಕೂ ಅಧಿಕ ಮಂದಿ ಪಾಲ್ಗೊಳ್ಳುವ ನಿರೀಕ್ಷೆಯಿದೆ ಎಂದರು. .
ಪತ್ರಿಕಾಗೋಷ್ಠಿಯಲ್ಲಿ ಬ್ಯಾಂಕ್ ಉಪಾಧ್ಯಕ್ಷ ವಿನಯ ಕುಮಾರ್ ಸೂರಿಂಜೆ, ಉಭಯ ಜಿಲ್ಲೆಗಳ ಜಿಲ್ಲಾ ಸಹಕಾರಿ ಯೂನಿ ಯನ್ ಅಧ್ಯಕ್ಷರಾದ ಜಯಕರ ಶೆಟ್ಟಿ ಇಂದ್ರಾಳಿ, ಬೆಳ್ಳಿಪ್ಪಾಡಿ ಪ್ರಸಾದ್ ಕೌಶಲ್ ಶೆಟ್ಟಿ, ಕೆಎಂಎಫ್ ಮಂಗಳೂರು ಅಧ್ಯಕ್ಷ ಕೆ.ಪಿ. ಸುಚರಿತ ಶೆಟ್ಟಿ, ಬ್ಯಾಂಕಿನ ನಿರ್ದೇಶಕರಾದ ಬೆಳಪು ದೇವಿಪ್ರಸಾದ್ ಶೆಟ್ಟಿ, ಶಶಿಕುಮಾರ್ ರೈ ಬಿ., ಮೋನಪ್ಪ ಶೆಟ್ಟಿ ಎಕ್ಕಾರು, ಎಸ್.ಬಿ. ಜಯರಾಮ ರೈ, ಪಿ.ರಾಜೇಶ್ ರಾವ್, ಸದಾಶಿವ ಉಳ್ಳಾಲ್, ಎಸ್. ರಾಜು ಪೂಜಾರಿ, ಸ್ಕ್ವಾಡ್ಸ್ ಅಧ್ಯಕ್ಷ ರವೀಂದ್ರ ಕಂಬಳಿ, ಸಹಕಾರ ಸಂಘಗಳ ಉಪನಿಬಂಧಕ ರಮೇಶ್ ಹಾಗೂ ಬ್ಯಾಂಕಿನ ಸಿಇಒ ಕೆ. ಗೋಪಾಲಕೃಷ್ಣ ಭಟ್ ಉಪಸ್ಥಿತರಿದ್ದರು.