ನೆಲ್ಯಾಡಿ, ನ. 18 : ಮಣ್ಣಗುಂಡಿಯಲ್ಲಿ ಕಾರೊಂದು ಡಿವೈಡರ್ ಗೆ ಢಿಕ್ಕಿ ಹೊಡೆದು ಕಾರಿನಲ್ಲಿದ್ದ ಪ್ರಯಾಣಿಕರೋರ್ವರು ಮೃತಪಟ್ಟ ಘಟನೆ ನ.17ರಂದು ನಡೆದಿದೆ.
ಮೃತರನ್ನು ಅರಿಯಡ್ಕ ನಿವಾಸಿ,ರಾಮಣ್ಣ ಪೂಜಾರಿ ಎಂಬವರ ಪುತ್ರ ಜಗದೀಶ್ (26) ಎಂದು ಗುರುತಿಸಲಾಗಿದೆ.
ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಮಣ್ಣಗುಂಡಿಯಲ್ಲಿ ಕಾರೊಂದು ಡಿವೈಡರ್ ಗೆ ಡಿಕ್ಕಿಯಾಗಿಕಾರಿನಲ್ಲಿದ್ದ ಪ್ರಯಾಣಿಕರೋರ್ವರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
ನೆಲ್ಯಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.