ಮಂಗಳೂರು,ನ.20: ಆದಿಚುಂಚನಗಿರಿ ಮಹಾಸಂಸ್ಥಾನ ಮಂಗಳೂರು ಶಾಖಾ ಮಠದ ರಜತ ಮಹೋತ್ಸವ, ಜಗದ್ಗುರು ಶ್ರೀ ಡಾ| ಬಾಲಗಂಗಾಧರನಾಥ ಮಹಾಸ್ವಾಮೀಜಿ ಅವರ ಪಟ್ಟಾಭಿಷೇಕದ ಸುವರ್ಣ ಮಹೋತ್ಸವದ ಅಂಗವಾಗಿ ನ.26 ಹಾಗೂ ಜ. 1 ಮತ್ತು 2ರಂದು ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮ ಏರ್ಪಡಿಸಲಾಗಿದೆ. ಡಾ| ಬಾಲಗಂಗಾಧರನಾಥ ಮಹಾಸ್ವಾಮೀಜಿ ಅವರು ಪೀಠಾರೋಹಣ ಮಾಡಿದ ಸುಸಂದರ್ಭಕ್ಕೆ 50 ವರ್ಷ ತುಂಬಿದ ಹಿನ್ನೆಲೆಯಲ್ಲಿ ಸುವರ್ಣ ಮಹೋತ್ಸವ ಆಚರಿಸುವ ಜತೆಗೆ ಈಗಿನ ಪೀಠಾಧಿಪತಿ ಶ್ರೀ ಡಾ। ನಿರ್ಮಲಾನಂದನಾಥ ಮಹಾಸ್ವಾಮೀಜಿಗೆ ಗುರುವಂದನೆ ಹಾಗೂ ರಜತ ತುಲಾಭಾರ ನಡೆಸಲಾಗುವುದು ಎಂದು ಮಂಗಳೂರು ಶಾಖಾ ಮಠದ ಶ್ರೀ ಡಾ| ಧರ್ಮಪಾಲನಾಥ ಸ್ವಾಮೀಜಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.
ರಜತ ಮಹೋತ್ಸವ ಸಮಿತಿ ಅಧ್ಯಕ್ಷ ಶಾಸಕ ಡಾ| ವೈ. ಭರತ್ ಶೆಟ್ಟಿ ಮಾತನಾಡಿ, ರಜತ ಮಹೋತ್ಸವ ಅಂಗವಾಗಿ ನ.26ರಂದು ನಡೆಯಲಿರುವ ಸಮಾರಂಭದಲ್ಲಿ ದ.ಕ. ಜಿಲ್ಲೆಯ ವಿವಿಧ ಕ್ಷೇತ್ರಗಳ ಸಾಧಕರಾದ ಡಾ| ಕೆ. ಚಿನ್ನಪ್ಪಗೌಡ, ಗುರುವಪ್ಪಎನ್.ಟಿ.ಬಾಳೇಪುಣಿ, ಪ್ರೊ. ಕೆ.ವಿ. ರಾವ್, ಡಾ|ರಮೇಶ್ ಡಿ.ಪಿ., ಡಾ| ಸತೀಶ್ ಕಲ್ಲಿಮಾರ್, ಮಾಧವ ಸುವರ್ಣ, ಭಕ್ತಿ ಭೂಷಣ್ ದಾಸ್, ಪುಷ್ಪಾವತಿ ಬುಡೇಗುತ್ತು, ವೀಣಾ ಕುಲಾಲ್, ನರಸಿಂಹ ರಾವ್ ದೇವಸ್ಯ, ಡಾ| ಕೆ.ಎಸ್.ಗೋಪಾಲಕೃಷ್ಣ ಕಾಂಚೋಡು, ಸುರೇಶ್ ಬಲ್ಲಾಡು, ಪ್ರಕಾಶ್ ಅಂಚನ್ ಬಂಟ್ವಾಳ, ಗೋಪಾಲಕೃಷ್ಣ ಭಟ್, ಜಗದೀಶ್ ಆಚಾರ್ಯ, ಮಂಜುಳಾ ಸುಬ್ರಹ್ಮಣ್ಯ, ಶಿವರಾಮ ಪಣಂಬೂರು, ಸುಜಾತಾ ಮಾರ್ಲ, ಸಚಿನ್ ಸುಂದರ ಗೌಡ, ರಾಧಾಕೃಷ್ಣ, ಕೇಶವ ಅಮೈ, ಕುಸುಮಾಧರ, ಅಭಿಷೇಕ ಶೆಟ್ಟಿ, ಮಾಧವ ಉಳ್ಳಾಲ್, ವಿಕ್ರಂ ಬಿ. ಶೆಟ್ಟಿ ಅವರಿಗೆ ಬಿಜಿಎಸ್ ಕರಾವಳಿ ರತ್ನ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ತಿಳಿಸಿದರು.
ಆದಿಚುಂಚನಗಿರಿ ಪೀಠಾಧ್ಯಕ್ಷರಾದ ಶ್ರೀ ಡಾ| ನಿರ್ಮಲಾನಂದನಾಥ ಮಹಾಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸಲಿದ್ದು, ಒಡಿಯೂರಿನ ಶ್ರೀ ಗುರುದೇವಾನಂದ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ. ಶ್ರೀ ಡಾ| ಧರ್ಮಪಾಲನಾಥ ಸ್ವಾಮೀಜಿ ದಿವ್ಯ ಉಪಸ್ಥಿತಿ ವಹಿಸಲಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ರಜತ ಮಹೋತ್ಸವ ಸಮಿತಿ ಉಪಾಧ್ಯಕ್ಷರಾದ ಹುನಾಥ್, ಕಿರಣ್ ಬುಡ್ಡೆಗುತ್ತು, ಯೋಗೀಶ್ ಶೆಟ್ಟಿ ಜಪ್ಪ ರಣದೀಪ್ ಕಾಂಚನ್, ಸುರೇಶ್ ಬೈಲು, ರಕ್ಷಿತ್ ಪುತ್ತಿಲ, ಕೋಶಾಧಿಕಾರಿ ನರಸಿಂಹ ಕುಲಕರ್ಣಿ, ಸುಬ್ಬ ಕಾರಡ್ಕ ಉಪಸ್ಥಿತರಿದ್ದರು.