ಬೆಳ್ತಂಗಡಿ, ನ. 30 : ಶ್ರೀ ಕ್ಷೇತ್ರ ಧರ್ಮಸ್ಥಳದ ಲಕ್ಷದೀಪೋತ್ಸವ ಪ್ರಯುಕ್ತ ಅಮೃತವರ್ಷಣಿ ಸಭಾಂಗಣದಲ್ಲಿ ಸರ್ವಧರ್ಮ ಸಮ್ಮೇಳನದ 92ನೇ ಅಧಿವೇಶನ ನ.29ರಂದು ಜರಗಿತು.
ಸರ್ವಧರ್ಮ ಸಮ್ಮೇಳನದ 92ನೇ ಅಧಿವೇಶನವನ್ನು ಉದ್ಘಾಟಿಸಿ ಮಾತಾನಾಡಿದ ಗೃಹಸಚಿವ ಡಾ| ಜಿ.ಪರಮೇಶ್ವರ ಅವರು,ಪ್ರತಿಯೊಬ್ಬ ಭಾರತದ ಸಂವಿಧಾನದ 4ನೇ ಅಧ್ಯಾಯದಲ್ಲಿ ಸರ್ವಧರ್ಮ ಸಮಾನತೆಯನ್ನೇ ಉಲ್ಲೇಖಿಸಿದೆ. ದೇಶದಲ್ಲಿ ಪ್ರತಿಯೊಬ್ಬ ಪ್ರಜೆಯೂ ಶಾಂತಿಯಿಂದ ಬಾಳುವಂತಾಗಬೇಕಿದೆ. ಪ್ರಪಂಚದ ಇತಿಹಾಸದಲ್ಲೇ ಇಷ್ಟೊಂದು ಧರ್ಮಗಳನ್ನು ಹೊಂದಿದ ಬೇರೆ ದೇಶವಿಲ್ಲ. ಭಾರತ ಸರ್ವಧರ್ಮ ಶಾಂತಿಯ ತೋಟವಾ ಗುವಲ್ಲಿ ಇಂಥ ಸಮ್ಮೇಳನಗಳು ಮಹತ್ವದ್ದು. ಧರ್ಮಸ್ಥಳದ ಧರ್ಮಾಧಿಕಾರಿಯಾದ ಡಾ| ಡಿ. ವೀರೇಂದ್ರ ಹೆಗ್ಗಡೆಯವರು ಸರ್ವ ಧರ್ಮ ಸಮ್ಮೇಳನ ಕಾರ್ಯಕ್ರಮ ಆಯೋಜಿಸುವ ಮೂಲಕ ನಾಡಿಗೆ ಉತ್ತಮ ಸಂದೇಶ ನೀಡಿದ್ದಾರೆ ಎಂದು ಅವರು ಹೇಳಿದರು.
ಸರ್ವಧರ್ಮ ಸಮ್ಮೇಳನದಲ್ಲಿ ಅಧ್ಯಕ್ಷತೆ ವಹಿಸಿದ್ದ ಬೆಂಗಳೂರು ಶ್ರೀ ಕೈಲಾಸ ಆಶ್ರಮ ಮಹಾಸಂಸ್ಟಾನದ ಶ್ರೀ ಜಯೇಂದ್ರ ಪುರಿ ಮಹಾಸ್ವಾಮೀಜಿ ಆಶೀರ್ವಚನ ನೀಡಿದರು.ಗೃಹ ಸಚಿವರು ಹಾಗೂ ಶ್ರೀ ಜಯೇಂದ್ರ ಪುರಿ ಮಹಾಸ್ವಾಮೀಜಿಯನ್ನು ಸಮ್ಮಾನಿಸಿ ಗೌರವಿಸಲಾಯಿತು. ಸ್ವಾಮೀಜಿಗಳು ಡಾ| ಹೆಗ್ಗಡೆ, ಗೃಹಸಚಿವರನ್ನು ಪ್ರಸಾದ ನೀಡಿ ಗೌರವಿಸಿದರು.
ಕಾರ್ಯಕ್ರಮದಲ್ಲಿ ಹೇಮಾವತಿ ವೀ ಹೆಗ್ಗಡೆ, ಡಿ. ಸುರೇಂದ್ರ ಕುಮಾರ್, ಡಿ. ಹರ್ಷೇಂದ್ರ ಕುಮಾರ್, ಡಿ.ಸುಪ್ರಿಯಾ ಹರ್ಷೇಂದ್ರ ಕುಮಾರ್, ಡಿ.ಅನಿತಾ ಸುರೇಂದ್ರ ಕುಮಾರ್, ಶ್ರದ್ಧಾ ಅಮಿತ್, ಶ್ರೇಯಸ್ ಡಿ.ಕುಮಾರ್, ಪುತ್ತೂರು ಶಾಸಕ ಅಶೋಕ್ ಕುಮಾರ್, ಮಾಜಿ ಸಚಿವ ಅಭಯಚಂದ್ರ ಜೈನ್, ವಿ.ಪ ಮಾಜಿ ಸದಸ್ಯ ಹರೀಶ್ ಕುಮಾರ್, ರಕ್ಷಿತ್ ಶಿವರಾಮ್ ಉಜಿರೆ, ರುಡ್ ಸೆಟ್ ನಿರ್ದೇಶಕ ಅಜಯ್ ಮೊದಲಾದವರು ಉಪಸ್ಥಿತರಿದ್ದರು.