ಮಂಗಳೂರು, ಡಿ. 06: ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ 5ನೇ ಜಿಲ್ಲಾ ಸಮ್ಮೇಳನ ನಡೆಯಿತು.
ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದ ಮೂಡಬಿದಿರೆ ಅಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ. ಮೋಹನ ಆಳ್ವ ಅವರು, ಸಮಾಜವನ್ನು ಕಟ್ಟುವುದರಲ್ಲಿ ಪತ್ರಕರ್ತರ ಪಾತ್ರ ಬಲು ದೊಡ್ದದು. ಸಮಾಜ ಸುಧಾರಣೆಗೆ ದೊಡ್ಡ ಕೊಡುಗೆ ನೀಡಿದ ಕೀರ್ತಿ ಮಾಧ್ಯಮ ಕ್ಷೇತ್ರಕ್ಕಿದೆ. ಮಾಧ್ಯಮದ ಮೂಲಕ ಜನಸಾಮನ್ಯರಿಗೆ ಸಾಮಾಜಿಕ ನ್ಯಾಯ ದೊರಕಿಸುವ ಪ್ರಯತ್ನ ನಿರಂತರ ನಡೆಯಬೇಕು ಎಂದರು.
ಸಮ್ಮೇಳನದ ಸರ್ವಾಧ್ಯಕ್ಷರಾಗಿದ್ದ ಹಿರಿಯ ಪತ್ರಕರ್ತ ಶಿವಸುಬ್ರಮಣ್ಯ ಕೆ ಮಾತನಾಡಿದರು. ಮುಖ್ಯ ಅತಿಥಿಯಾಗಿದ್ದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಮಾತನಾಡಿದರು.ಶಾಸಕ ಡಿ. ವೇದವ್ಯಾಸ ಕಾಮತ್, ಪುಸ್ತಕ ಪ್ರದರ್ಶನ ಛಾಯಾಚಿತ್ರ ಪ್ರದರ್ಶನ ಉದ್ಘಾಟನೆಯನ್ನು ನೆರವೇರಿಸಿದರು. ಅದಾನಿ ಗ್ರೂಪ್ನ ಅಧ್ಯಕ್ಷ ಕಿಶೋರ್ ಕುಮಾರ್ ಆಳ್ವ ಸ್ಮರಣ ಸಂಚಿಕೆ ಬಿಡುಗಡೆ ಮಾಡಿದರು. ದ.ಕ ಜಿಲ್ಲಾಧಿಕಾರಿ ಮುಲೈ ಮುಗಿಲನ್ ಎಂ.ಪಿ,, ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷ ಕೆ.ಪಿ. ಸುಚರಿತ ಶೆಟ್ಟಿ, ಮಹಾನಗರ ಪಾಲಿಕೆಯ ಉಪ ಆಯುಕ್ತ ಚಂದ್ರಶೇಖರ ಅತಿಥಿಗಳಾಗಿದ್ದರು. ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಆಶಯ ಭಾಷಣ ಮಾಡಿದರು
ಕಾರ್ಯಕ್ರಮದಲ್ಲಿ ಪತ್ರಿಕಾಭವನ ಟ್ರಸ್ಟ್ ಅಧ್ಯಕ್ಷ ರಾಮಕೃಷ್ಣ ಆರ್. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯಕಾರಿ ಸಮಿತಿ ಸದಸ್ಯರಾದ ಜಗನ್ನಾಥ ಶೆಟ್ಟಿ ಬಾಳ, ಇಬ್ರಾಹಿಂ ಅಡ್ಕಸ್ಥಳ, ದ.ಕ.ಜಿಲ್ಲಾ ಸಂಘದ ಉಪಾಧ್ಯಕ್ಷ ಭಾಸ್ಕರ ರೈ ಕಟ್ಟ, ಕೋಶಾಧಿಕಾರಿ ಬಿ.ಎನ್.ಪುಷ್ಪರಾಜ್, ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ, ದಿನೇಶ್ ಇರಾ ಮೊದಲಾದವರು ಉಪಸ್ಥಿತರಿದ್ದರು