ಬೋಳೂರು, ಡಿ. 15 : ಸದ್ಗುರು ಶ್ರೀ ಮಾತಾ ಅಮೃತಾನಂದಮಯಿ ದೇವಿ ಅವರ ಹಿರಿಯ ಶಿಷ್ಯ ಸ್ವಾಮಿ ಪೂರ್ಣಾಮೃತಾನಂದ ಪುರಿ ಅವರು ಶನಿವಾರ ಮಂಗಳೂರಿನ ಬೋಳೂರಿನಲ್ಲಿರುವ ಮಾತಾ ಅಮೃತಾ ನಂದಮಯಿ ಮಠಕ್ಕೆ ಆಗಮಿಸಿ, ಪ್ರತಿ ತಿಂಗಳ ಎರಡನೇ ಶನಿವಾರ ಶ್ರೀ ಬ್ರಹ್ಮಸ್ಥಾನ ಕ್ಷೇತ್ರದಲ್ಲಿ ಜರಗಲಿರುವ ಸಾಮೂಹಿಕ ಶನಿ ದೋಷ ನಿವಾರಣಾ ಪೂಜೆಗೆ ಅವರು ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಅಮೃತಾನಂದಮಯಿ ಮಠದ ಸ್ವಾಮಿನಿ ಮಂಗಳಾಮೃತ ಪ್ರಾಣ, ಬೋಳೂರು ಮಾತಾ ಅಮೃತಾ ನಂದಮಯಿ ಸೇವಾ ಸಮಿತಿಯ ಅಧ್ಯಕ್ಷ ಸುರೇಶ್ ಅಮೀನ್, ಶ್ರೀ ಬ್ರಹ್ಮಸ್ಥಾನಂ ಕ್ಷೇತ್ರಾಭಿವೃದ್ಧಿ ಸಮಿತಿ ಸಲಹೆಗಾರ ಡಾ| ವಸಂತ ಕುಮಾ ಪೆರ್ಲ, ಕಾರ್ಯದರ್ಶಿ ಡಾ| ದೇವದಾಸ ಪುತ್ರನ್, ವೈದ್ಯಕೀಯ ಉಪ ಸಮಿತಿ ಸಂಚಾಲಕ ಡಾ| ದೇವಿಪ್ರಸಾದ್ ಎಸ್. ಹೆಜಮಾಡಿ, ಪ್ರಮುಖರಾದ ಯತೀಶ್ ಬೈಕಂಪಾಡಿ ಉಪಸ್ಥಿತರಿದ್ದರು. ನಂತರ ಅವರು ವಿದ್ಯಾಲಯಂನಲ್ಲಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು.
ಸಂಜೆ ನಡೆದ ‘ಅಮೃತ ವೈಭವ’ ಆಧ್ಯಾತ್ಮಿಕ ಕಾರ್ಯಕ್ರಮವನ್ನು ಸ್ವಾಮಿ ಪೂರ್ಣಾಮೃತಾನಂದ ಪುರಿ ಅವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಅಧ್ಯಕ್ಷ ಸಿಎ ಶಾಂತಾರಾಮ ಶೆಟ್ಟಿ, ಎಸ್.ಎಲ್ ಶೇಟ್ ಜ್ಯುವೆಲ್ಲರ್ಸ್ ಪಾಲುದಾರ ಪ್ರಶಾಂತ್ ಶೇಟ್ ಮಾತನಾಡಿದರು.ನಂತರ ಸ್ವಾಮೀಜಿಯವರು ಆಶೀರ್ವಚನ ನೀಡಿದರು.
ಕಾರ್ಯಕ್ರಮದಲ್ಲಿ ಅಮೃತಾನಂದಮಯಿ ಮಠದ ಸ್ವಾಮಿನಿ ಮಂಗಳಾಮೃತ ಪ್ರಾಣ, ಬೋಳೂರು, ಮಾತಾ ಅಮೃತಾ ನಂದಮಯಿ ಸೇವಾ ಸಮಿತಿಯ ಅಧ್ಯಕ್ಷ ಸುರೇಶ್ ಅಮೀನ್ ಮೊದಲಾದವರು ಉಪಸ್ಥಿತರಿದ್ದರು. ನಂತರ ಸ್ವಾಮೀಜಿಯವರ ಸಾರಥ್ಯದಲ್ಲಿ ಧ್ಯಾನ ಸತ್ಸಂಗ ಭಜನೆ ಮತ್ತು ಪ್ರಸಾದ ವಿತರಣೆ ಕಾರ್ಯಕ್ರಮಗಳು ನಡೆದವು. ಸ್ವಾಮೀಜಿಯವರು ಕೊಳಲು ನುಡಿಸುವ ಮೂಲಕ ಎಲ್ಲರ ಗಮನ ಸೆಳೆದರು.