Close Menu
Navaloka Media News Mangalore| Kannada Online News PortalNavaloka Media News Mangalore| Kannada Online News Portal
    Our Picks

    ಕಾಪು ಉಚ್ಚಿಲದಲ್ಲಿ ಎಕ್ಸ್‌ಪ್ರೆಸ್ ಬಸ್‌ನಿಂದ ಬಿದ್ದು ವ್ಯಕ್ತಿ ಮೃತ್ಯು

    November 23, 2025

    ಎಂ.ಸಿ.ಸಿ. ಬ್ಯಾಂಕಿನ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಅನಿಲ್ ಲೋಬೊ ಇವರಿಗೆ ತೌಳವ ಸಹಕಾರಿ ಮಾಣಿಕ್ಯ ಪ್ರಶಸ್ತಿ ಪ್ರಧಾನ

    November 22, 2025

    ನ. 23 : ದೈಗೋಳಿಯಲ್ಲಿ ನವಚೇತನ ಕೇರ್ ಸೆಂಟರ್ ಹೊಸ ಆರೈಕೆ ಘಟಕ ಉದ್ಘಾಟನೆ

    November 22, 2025

    Subscribe to Updates

    Get the latest creative news from FooBar about art, design and business.

    What's Hot

    ಕಾಪು ಉಚ್ಚಿಲದಲ್ಲಿ ಎಕ್ಸ್‌ಪ್ರೆಸ್ ಬಸ್‌ನಿಂದ ಬಿದ್ದು ವ್ಯಕ್ತಿ ಮೃತ್ಯು

    November 23, 2025

    ಎಂ.ಸಿ.ಸಿ. ಬ್ಯಾಂಕಿನ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಅನಿಲ್ ಲೋಬೊ ಇವರಿಗೆ ತೌಳವ ಸಹಕಾರಿ ಮಾಣಿಕ್ಯ ಪ್ರಶಸ್ತಿ ಪ್ರಧಾನ

    November 22, 2025

    ನ. 23 : ದೈಗೋಳಿಯಲ್ಲಿ ನವಚೇತನ ಕೇರ್ ಸೆಂಟರ್ ಹೊಸ ಆರೈಕೆ ಘಟಕ ಉದ್ಘಾಟನೆ

    November 22, 2025
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    • Home
    • Local News
    • State News
    • National/International news
    • Film News
    • Contact Us
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    Home»Local News»ಡಿ.25 : ಮಂಗಳೂರಿನಲ್ಲಿ ಆಶಾ ಪ್ರಕಾಶ್ ಶೆಟ್ಟಿಅವರ ಸಹಾಯ ಹಸ್ತ ಪ್ರದಾನ ಸಮಾರಂಭ “ನೆರವು”
    Local News

    ಡಿ.25 : ಮಂಗಳೂರಿನಲ್ಲಿ ಆಶಾ ಪ್ರಕಾಶ್ ಶೆಟ್ಟಿಅವರ ಸಹಾಯ ಹಸ್ತ ಪ್ರದಾನ ಸಮಾರಂಭ “ನೆರವು”

    adminBy adminDecember 24, 2024
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter LinkedIn Pinterest Email
    Navaloka media news
    Navaloka media news

    ಮಂಗಳೂರು: ಪ್ರತೀ ವರ್ಷ ಆಯೋಜಿಸಿಕೊಂಡು ಬಂದಿರುವ ಆಶಾ ಪ್ರಕಾಶ್ ಶೆಟ್ಟಿ ಸಹಾಯ ಹಸ್ತ ಯೋಜನೆಯ “ನೆರವು” ಸಹಾಯಹಸ್ತ ಪ್ರದಾನ ಕಾರ್ಯಕ್ರಮ ಡಿ. 25ರಂದು ಮಧ್ಯಾಹ್ನ ಗಂಟೆ 3.30ಕ್ಕೆ ಮಂಗಳೂರಿನ ಗೋಲ್ಡ್ ಫಿಂಚ್ ಸಿಟಿಯಲ್ಲಿ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಬೆಂಗಳೂರಿನ ಅದಮ್ಯ ಚೇತನ ಫೌಂಡೇಶನ್ನಿನ ಅಧ್ಯಕ್ಷರು ಹಾಗು ಸಹ- ಸಂಸ್ಥಾಪಕರೂ ಆಗಿರುವ ಡಾ. ತೇಜಸ್ವಿನಿ ಅನಂತಕುಮಾರ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಮೂಡಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷರಾದ ಡಾ.ಎಂ. ಮೋಹನ ಆಳ್ವ ಕಾಪು ವಿಧನಾಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ, ಎಂ.ಆರ್.ಜಿ.ಗ್ರೂಪ್ ನ ಆಡಳಿತ ನಿರ್ದೇಶಕರಾದ ಗೌರವ್ ಪಿ. ಶೆಟ್ಟಿ ಮತ್ತು ಉಪಸ್ಥಿತರಿರಲಿದ್ದಾರೆ ಎಂದು ಎಂ.ಆರ್.ಜಿ.ಗ್ರೂಪ್ ಚೇರ್ಮನ್ ಡಾ. ಕೆ.ಪ್ರಕಾಶ್ ಶೆಟ್ಟಿ ಅವರು ನಗರದಲ್ಲಿ ನಡೆದ ಪತ್ರಿಕಾಗೋಷ್ಟಿಯಲ್ಲಿ ತಿಳಿಸಿದರು.

    “ಈ ವರ್ಷ ಒಟ್ಟು 3,000 ಕುಟುಂಬಗಳಿಗೆ 6 ಕೋಟಿ ರೂಪಾಯಿಗೂ ಮಿಕ್ಕಿ ನೆರವನ್ನು ವಿತರಿಸಲಾಗುತ್ತಿದೆ. ಇದರಿಂದ ಸುಮಾರು ಹದಿನೈದು ಸಾವಿರ ಮಂದಿಗೆ ಪ್ರಯೋಜನವಾಗಲಿದೆ. ಫಲಾನುಭವಿಗಳ ಆಯ್ಕೆಯಲ್ಲಿ ಒಂದು ನಿಗದಿತ ಮಾನದಂಡವನ್ನು ಅನುಸರಿಸಲಾಗಿದೆ. ಅರ್ಜಿಗಳನ್ನು ಪರಿಶೀಲಿಸಿ, ಅವಶ್ಯ ಹಿಮ್ಮಾಹಿತಿಗಳನ್ನು ಪಡೆದು ಫಲಾನುಭವಿಗಳ ಆಯ್ಕೆ ಮಾಡಲಾಗಿದೆ. ಸಮಾಜದಲ್ಲಿ ಪರಿವರ್ತನೆ ತರಬಲ್ಲಂತಹ, ಸಾಮೂಹಿಕ ಹಿತದ ಕಾರ್ಯಕ್ರಮಗಳನ್ನು ಕೈಗೊಂಡ ಸಂಘ ಸಂಸ್ಥೆಗಳನ್ನು ಗುರುತಿಸಿ ಆಯ್ಕೆ ಮಾಡಲಾಗಿದೆ. ಪ್ರತೀ ವರ್ಷದ ಶಿಷ್ಟಾಚಾರದಂತೆ ಫಲಾನುಭವಿಗಳನ್ನು ಕರೆತರಲು ವಾಹನಗಳ ವ್ಯವಸ್ಥೆ ಮಾಡಲಾಗಿದೆ. ಇದಕ್ಕಾಗಿ ಸ್ವಯಂಸೇವಕರ ತಂಡಗಳಿವೆ. ನೆರವು ವಿತರಣೆ ನಡೆಯುವ ಸ್ಥಳದಲಿ 25 ಕೌಂಟರ್ ಗಳನ್ನು ತೆರೆಯಲಾಗುತ್ತದೆ. ಈಗಾಗಲೇ ವಿತರಣೆ ಮಾಡಿರುವ ಟೋಕನ್ ಗಳನ್ನು ತೋರಿಸಿ ಕೌಂಟರ್ ಗಳಲ್ಲಿ ನೆರವಿನ ಚೆಕ್ ಪಡೆಯಬಹುದು. ಎಲ್ಲಿಯೂ ಅವ್ಯವಸ್ಥೆಗಳಿಗೆ ಆಸ್ಪದ ಇಲ್ಲದಂತೆ ನೋಡಿಕೊಳ್ಳಲಾಗುತ್ತದೆ. ಮಾನಸಿಕ ವಿಕಲತೆ, ಹುಟ್ಟಿನಿಂದ ಬರುವ ದೀರ್ಘಕಾಲೀನ ಚಿಕಿತ್ಸೆ ಅವಶ್ಯವಿರುವ ಖಾಯಿಲೆ ಪೀಡಿತರಿಗೆ, ಅಂಗವೈಕಲ್ಯ, ಕ್ಯಾನ್ಸರ್ ಮುಂತಾದ ಖಾಯಿಲೆಗಳಿಂದ ಬಾಧಿತರಾಗಿರುವವರಿಗೆ ಚಿಕಿತ್ಸೆಗಾಗಿ ಆದ್ಯತೆಯ ಮೇಲೆ ನೆರವು ನೀಡುವುದನ್ನು ಪರಿಗಣಿಸಲಾಗಿದೆ. ಶಿಕ್ಷಣ ಮುಂದುವರಿಸಲು ಕಷ್ಟ ಪಡುತ್ತಿರುವವರಿಗೆ, ಕ್ರೀಡಾ ಕ್ಷೇತ್ರದ ಸಾಧಕರಿಗೆ, ಉತ್ತಮ ಶೈಕ್ಷಣಿಕ ಸಾಧನೆ ಮಾಡಿದವರಿಗೆ ಉತ್ತೇಜನ ನೀಡುವುದಕ್ಕಾಗಿ ಅವರನ್ನು “ನೆರವು” ನೀಡಲು ಆಯ್ಕೆ ಮಾಡಲಾಗಿದೆ ಎಂದು ಹೇಳಿದರು.

    ಹಿಂದಿನ ವರ್ಷಗಳಲ್ಲಿ ಸಂಘ ಸಂಸ್ಥೆಗಳಿಗೆ ನೀಡಲಾದ ನೆರವು ಆಯಾ ಪರಿಸರದಲ್ಲಿ ಧನಾತ್ಮಕ ಪರಿಣಾಮ ಬೀರಿದೆ. ಸಾರ್ವಜನಿಕ ಆಸ್ತಿಗಳ ನಿರ್ಮಾಣ ಆಗಿದೆ. ಅವಕಾಶವಂಚಿತರು ‘ನೆರವು’ ಪಡೆದುಕೊಂಡು ಸ್ವಾವಲಂಬಿಯಾದ ಉದಾಹರಣೆಗಳಿವೆ. ಸಾಮಾಜಿಕ ಜವಾಬ್ದಾರಿಯ ನೆಲೆಯಲ್ಲಿ ನಾವು ಕೈಗೊಂಡ ಈ ಸೇವಾ ರೂಪದ ಕಾರ್ಯಕ್ರಮ ಸಾರ್ವಜನಿಕ ಮನ್ನಣೆ ಪಡೆದಿರುವುದು ಆಯೋಜಕರಾದ ನಮಗೆ ಸಾರ್ಥಕ್ಯ ಭಾವನೆಯನ್ನು ಮೂಡಿಸಿದೆ. ಅನುಭೂತಿ ಮತ್ತು ಬದ್ಧತೆಯಿಂದ ಕೈಗೊಂಡ “ನೆರವು” ಕಾರ್ಯಕ್ರಮ ಅನುಷ್ಠಾನದಲ್ಲಿ ನಮ್ಮ ತಂಡ ಅತ್ಯಂತ ಜವಾಬ್ದಾರಿಯಿಂದ ಕೆಲಸ ಮಾಡಿದೆ. ಶಿಕ್ಷಣ ಉಪಕ್ರಮದಡಿ ನೆರವು ಪಡೆದವರಲ್ಲಿ ಕೆಲವರು ಈಗ ಉದ್ಯೋಗಸ್ಥರಾಗಿ, ತಾವು ಇತರರಿಗೆ ಸಹಾಯ ಮಾಡುವ ಸ್ಥಿತಿಗೆ ತಲುಪಿರುವುದು ಈ ಯೋಜನೆ ತಂದ ಮಾನವೀಯ ಬದಲಾವಣೆಯಾಗಿದೆ ಎಂದು ಹೇಳಿದರು. ಮೊದಲ ವರ್ಷ ವಿತರಣೆ ಮಾಡಲಾದ ಮೊತ್ತ 1.25 ಕೋಟಿ ರೂಪಾಯಿ. ವರ್ಷದಿಂದ ಈ ಮೊತ್ತ ಏರುತ್ತಾ ಹೋಗಿದೆ. ವರ್ಷದಿಂದ ವರ್ಷ ಅರ್ಜಿಗಳ ಸಂಖ್ಯೆ ಹೆಚ್ಚುತ್ತಿದೆ, ಸಹಜವಾಗಿ ಮೊತ್ತವೂ ಹೆಚ್ಚಾಗಿದೆ ಎಂದರು.

    ಈ ಯೋಜನೆಯ ವ್ಯಾಪ್ತಿ ದಕ್ಷಿಣ ಕನ್ನಡ, ಉಡುಪಿ ಮತ್ತು ಗಡಿನಾಡು ಕಾಸರಗೋಡು ಜಿಲ್ಲೆಗಳು. (ಕೆಲವು ವಿಶೇಷ ಪ್ರಕರಣಗಳಲ್ಲಿ ಮಾನವೀಯತೆಯ ಹಿನ್ನೆಲೆಯಲ್ಲಿ ಈ ಗಡಿಯನ್ನು ದಾಟಿಯೂ ನೆರವು ನೀಡಲಾಗಿದೆ) ಪ್ರತೀ ವ್ಯಕ್ತಿಗೆ ಅವರವರ ಅವಶ್ಯಕತೆಯನ್ನು ಪರಿಗಣಿಸಿ ಕನಿಷ್ಠ 10,000 ರೂ.ಗಳಿಂದ ಗರಿಷ್ಠ 1,00,000 ರೂ.ಗಳವರೆಗೆ ನೀಡಲಾಗಿದೆ, ಆರೋಗ್ಯ ರಕ್ಷಣೆ, ಚಿಕಿತ್ಸೆಗೆ ಮೊದಲಾದ್ಯತೆ ನೀಡಲಾಗಿದೆ. ಸಂಘ ಸಂಸ್ಥೆಗಳಾದರೆ ಕನಿಷ್ಠ 1,00,000 ರೂ.ಗಳಿಂದ ಗರಿಷ್ಠ 10,00,000 ರೂ.ಗಳವರೆಗೆ ನೆರವು ನೀಡಲಾಗಿದೆ. ವೈದ್ಯಕೀಯ ಪ್ರಕರಣಗಳಲ್ಲಿ ಅವಶ್ಯದಾಖಲೆಗಳನ್ನು ಪಡೆದು, ಪರಿಶೀಲಿಸಿ, ಹಿಮ್ಮಾಹಿತಿ ಪಡೆದು ನೆರವು ನೀಡಲಾಗಿದೆ. ಬಹುತೇಕ ಅರ್ಜಿಗಳು ವೈದ್ಯಕೀಯ ನೆರವನ್ನು ಕೋರಿದವುಗಳಾಗಿವೆ. ಸಂಘ ಸಂಸ್ಥೆಗಳ ಸಂದರ್ಭದಲ್ಲಿ ಅವುಗಳ ಚಟುವಟಿಕೆ ಸ್ವಚ್ಚತೆ ಕಾಪಾಡುವಿಕೆ, ಮಹಿಳಾ ಸಶಕ್ತಿಕರಣ, ಯುವಜನರ ಸಬಲೀಕರಣ, ಕೌಶಲೀಕರಣ ಸಹಿತ ಸಾಮಾಜಿಕ ಪರಿವರ್ತನೆಗೆ ಅವುಗಳ ಕೊಡುಗೆಯನ್ನು ಗಮನಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.

    ನಿತೇಶ್ ಶೆಟ್ಟಿ ಎಕ್ಕಾರ್ ಕಾರ್ಯಕ್ರಮ ನಿರೂಪಿಸಿದರು.

     

    Navaloka media news
    Navaloka media news
    Share. Facebook Twitter Pinterest LinkedIn WhatsApp Reddit Tumblr Email
    admin
    • Website

    Related Posts

    Local News November 23, 2025

    ಕಾಪು ಉಚ್ಚಿಲದಲ್ಲಿ ಎಕ್ಸ್‌ಪ್ರೆಸ್ ಬಸ್‌ನಿಂದ ಬಿದ್ದು ವ್ಯಕ್ತಿ ಮೃತ್ಯು

    Local News November 22, 2025

    ಎಂ.ಸಿ.ಸಿ. ಬ್ಯಾಂಕಿನ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಅನಿಲ್ ಲೋಬೊ ಇವರಿಗೆ ತೌಳವ ಸಹಕಾರಿ ಮಾಣಿಕ್ಯ ಪ್ರಶಸ್ತಿ ಪ್ರಧಾನ

    Local News November 22, 2025

    ನ. 23 : ದೈಗೋಳಿಯಲ್ಲಿ ನವಚೇತನ ಕೇರ್ ಸೆಂಟರ್ ಹೊಸ ಆರೈಕೆ ಘಟಕ ಉದ್ಘಾಟನೆ

    Local News November 21, 2025

    ಡಿ.07 : ಮಂಗಳೂರಿನ ಕಲಾಂಗಣ ಮೈದಾನದಲ್ಲಿಕೊಂಕಣಿ ಮಕ್ಕಳ ಸಾಹಿತ್ಯ ಸಮ್ಮೇಳನ ಪರಾಗ್- 2025

    Local News November 20, 2025

    ನಾಳೆ ನ.21ರಂದು ಎಂ.ಎನ್.ಆರ್ ಪ್ರೊಡಕ್ಷನ್ ಸಂಸ್ಥೆಯ ‘ವಾದಿರಾಜ ವಾಲಗ ಮಂಡಳಿ’ ಕನ್ನಡ ಚಿತ್ರಕ್ಕೆ ಮುಹೂರ್ತ

    Local News November 19, 2025

    ಬಂಟ್ವಾಳ: ಸ್ಕೂಟರ್-ಕಾರು ಡಿಕ್ಕಿ-ಎಂಜಿನಿಯರಿಂಗ್ ವಿದ್ಯಾರ್ಥಿನಿ ಸಾವು

    Comments are closed.

    Demo
    Don't Miss
    Local News November 23, 2025

    ಕಾಪು ಉಚ್ಚಿಲದಲ್ಲಿ ಎಕ್ಸ್‌ಪ್ರೆಸ್ ಬಸ್‌ನಿಂದ ಬಿದ್ದು ವ್ಯಕ್ತಿ ಮೃತ್ಯು

    ಕಾಪು, ನ. 23 : ಮಂಗಳೂರಿನಿಂದ ಉಡುಪಿಗೆ ಹೋಗುತ್ತಿದ್ದ ಖಾಸಗಿ ಎಕ್ಸ್‌ಪ್ರೆಸ್ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯೊಬ್ಬರು ವಾಹನದಿಂದ ಬಿದ್ದು ಮೃತಪಟ್ಟ…

    ಎಂ.ಸಿ.ಸಿ. ಬ್ಯಾಂಕಿನ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಅನಿಲ್ ಲೋಬೊ ಇವರಿಗೆ ತೌಳವ ಸಹಕಾರಿ ಮಾಣಿಕ್ಯ ಪ್ರಶಸ್ತಿ ಪ್ರಧಾನ

    November 22, 2025

    ನ. 23 : ದೈಗೋಳಿಯಲ್ಲಿ ನವಚೇತನ ಕೇರ್ ಸೆಂಟರ್ ಹೊಸ ಆರೈಕೆ ಘಟಕ ಉದ್ಘಾಟನೆ

    November 22, 2025

    ಡಿ.07 : ಮಂಗಳೂರಿನ ಕಲಾಂಗಣ ಮೈದಾನದಲ್ಲಿಕೊಂಕಣಿ ಮಕ್ಕಳ ಸಾಹಿತ್ಯ ಸಮ್ಮೇಳನ ಪರಾಗ್- 2025

    November 21, 2025
    Stay In Touch
    • Facebook
    • Twitter
    • Pinterest
    • Instagram
    Facebook X (Twitter) Instagram Pinterest
    • Home
    • Local News
    • State News
    • National/International news
    • Film News
    • Contact Us
    © 2025 All Right Reserved. Designed by Blueline Computers.

    Type above and press Enter to search. Press Esc to cancel.