Author: admin

ಮಂಗಳೂರು, ಜು. 15 : ಇತ್ತೀಚೆಗೆ ರಾಜ್ಯದ ಯುವ ಜನರಲ್ಲಿ ಹೃದಯಾಘಾತದಿಂದಾಗಿ ಸಾವಿನ ಸಂಖ್ಯೆ ಹೆಚ್ಚಾಗಿದೆ. ಈ ಬಗ್ಗೆ ಜಾಗೃತಿ,ಮುನ್ನೆಚ್ಚರಿಕೆ ಮತ್ತು ತಪಾಸಣೆ ಅಗತ್ಯ ಎಂದು ಹೃದಯ ತಜ್ಞ, ಮಂಗಳೂರು ಇಂಡಿಯಾನಾ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಡಾ. ಯೂಸುಫ್ ಕುಂಬ್ಳೆ ಅವರು ಸೋಮವಾರ ಪತ್ರಿಕಾಭನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬದಲಾದ ಜೀವನ ಪದ್ಧತಿಯಿಂದಾಗಿ ಯುವ ಸಮುದಾಯದಲ್ಲಿ ಹೃದಯಾಘಾತ ಪ್ರಕರಣಗಳು ಹೆಚ್ಚಾಗುತ್ತಿದೆ. ಫಾಸ್ಟ್ ಫುಡ್ ಸೇವನೆಯು ತೀವ್ರವಾಗಿ ಹೆಚ್ಚಾಗಿದ್ದು, ಇದರಲ್ಲಿ, ಕೃತಕ ಪದಾರ್ಥಗಳು ಇದ್ದು ಆರೋಗ್ಯಕ್ಕೆ ಹಾನಿಕಾರಕವಾಗುತ್ತವೆ. ಮನೆಯ ಅಡುಗೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದರು. ಅತಿಯಾದ ಎಣ್ಣೆ ಪದಾರ್ಥ ಸೇವನೆಯೂ ಕೂಡ ಅಪಾಯಕಾರಿ. ಮೀನು ಸೇವನೆ ಹೃದಯದ ಆರೋಗ್ಯಕ್ಕೆ ಸೂಕ್ತವಾಗಿದೆ. ದೈಹಿಕ ಚಟುವಟಿಕೆಗಳು, ವ್ಯಾಯಾಮಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು.ಶಾಲೆ ಕಾಲೇಜುಗಳಲ್ಲ ದೈಹಿಕ ಚಟುವಟಿಕೆಗಳಿಗೆ ಆಧ್ಯತೆ ನೀಡಬೇಕು ಎಂದವರು ಹೇಳಿದರು. ಧೂಮಪಾನ, ಮದ್ಯಪಾನ, ಮಾದಕ ವಸ್ತು ಸೇವನೆ, ಕೆಲಸದ ಒತ್ತಡ, ವೈಯಕ್ತಿಕ ಜೀವನದ ಉದ್ವಿಗ್ನತೆ, ಶುಗರ್, ರಕ್ತದೊತ್ತಡ, ಕೊಬ್ಬು,…

Read More

ಬೆಂಗಳೂರು, ಜು. 14  : ಕನ್ನಡದ ಹಿರಿಯ ನಟಿ ಬಿ.ಸರೋಜಾದೇವಿ (87 ) ಅವರು ವಯೋ ಸಹಜ ಅನಾರೋಗ್ಯದಿಂದಾಗಿ ಸೋಮವಾರ ಮಲ್ಲೇಶ್ವರಂನಲ್ಲಿರುವ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ. ಸರೋಜಾ ದೇವಿ ಅವರು 1938ರ ಜನವರಿ 7ರಂದು ಬೆಂಗಳೂರಿನಲ್ಲಿ ಜನಿಸಿದರು. ಅವರ ತಂದೆ ಬೈರಪ್ಪ ತಾಯಿ ರುದ್ರಮ್ಮಾ. ಸರೋಜಾ ದೇವಿ ಅವರು ಭೀಷ್ಮ ಹೊನ್ನಪ್ಪ ಭಾಗವತರ್ ಅವರ `ಮಹಾಕವಿ ಕಾಳಿದಾಸ’ ಚಿತ್ರದಲ್ಲಿ ಅಭಿನಯಿಸುವ ಮೂಲಕ ಚಿತ್ರರಂಗಕ್ಕೆ ಪ್ರವೇಶಿಸಿದರು. 2019ರಲ್ಲಿ ರಿಲೀಸ್ ಆದ ಪುನೀತ್ ರಾಜ್ಕುಮಾರ್ ನಟನೆಯ ‘ನಟಸಾರ್ವಭೌಮ’ ಅವರು ನಟಿಸಿದ ಕೊನೆಯ ಚಿತ್ರವಾಗಿತ್ತು. ಮೇರು ನಟರಾದ ರಾಜ್ಕುಮಾರ್, ಕಲ್ಯಾಣ್ ಕುಮಾರ್ ಮೊದಲಾದವರ ಜೊತೆ ಸರೋಜಾ ದೇವಿ ನಟಿಸಿದ್ದರು. ಅಮರ ಶಿಲ್ಪಿ ಜಕಣಾಚಾರಿ, ಮಲ್ಲಮ್ಮನ ಪವಾಡ, ಭಾಗ್ಯವಂತರು, ಬಬ್ರುವಾಹನ ಕಥಾಸಂಗಮ ಮುಂತಾದ ಕನ್ನಡ ಸಿನಿಮಾಗಳಲ್ಲಿ ಸರೋಜಾ ದೇವಿ ನಟಿಸಿದ್ದರು.

Read More

ಬೆಳ್ತಂಗಡಿ,ಜು. 13 : ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದ ವಿವಾಹಿತ ಮಹಿಳೆಯೊಬ್ಬರು ತಮ್ಮ ತಾಯಿಯ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಯ್ಯೂರು ಗ್ರಾಮದಲ್ಲಿ ನಡೆದಿದೆ. ಮೃತರನ್ನು ಕೊಯ್ಯೂರಿನ ದರ್ಖಾಸ್ನ ದೇವಪ್ಪ ಬಂಗೇರ ಅವರ ಪುತ್ರಿ ರಮ್ಯಾ (32) ಎಂದು ಗುರುತಿಸಲಾಗಿದೆ. ರಮ್ಯಾ ಅವರು  ಕೊಯ್ಯೂರು ಗ್ರಾಮದಲ್ಲಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದರು. ಅವರು ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದು, ರಮ್ಯಾ  ಜುಲೈ 13 ರಂದು ಮಧ್ಯಾಹ್ನ ಮನೆಯ ಒಂದು ಕೋಣೆಯಲ್ಲಿ ನೇಣು ಬಿಗಿದುಕೊಂಡು ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ವರದಿಯಾಗಿದೆ. ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಮಂಗಳೂರು, ಜುಲೈ 12: ಕರ್ನಾಟಕದ ರಿಯಲ್ ಎಸ್ಟೇಟ್ ಕ್ಷೇತ್ರದಲ್ಲಿ, ಮಂಗಳೂರಿನ ಹೆಸರಾಂತ ಉದ್ಯಮ ಸಂಸ್ಥೆಯ ರೋಹನ್ ಕಾರ್ಪೊರೇಷನ್ ಬಾಲಿವುಡ್ ಸೂಪರ್ ಸ್ಟಾರ್ ಶಾರೂಖ್ ಖಾನ್ ಅವರನ್ನು ತನ್ನ ಆಧಿಕೃತ ಬ್ರಾಂಡ್ ಅಂಬಾಸಿಡರ್ ಆಗಿ ಜುಲೈ 12 ರಂದು ಘೋಷಣೆ ಮಾಡಿತು. ಈ ಕಾರ್ಯಕ್ರಮವು ಮಂಗಳೂರಿನ ಬಿಜೈ ಭಾರತ್ ಮಾಲ್‌ನಲ್ಲಿ  ಅದ್ದೂರಿಯಾಗಿ  ನಡೆಯಿತು. ಈ ಸಮಾರಂಭದಲ್ಲಿ ಜಿಲ್ಲೆಯ ಪ್ರಮುಖ ಮಾಧ್ಯಮ ಪ್ರತಿನಿಧಿಗಳು, ಸಾಮಾಜಿಕ ಮಾಧ್ಯಮ ಪ್ರಭಾವಿಗಳು, ಮತ್ತು ಸಿನಿಮಾ ತಾರೆಗಳು ಭಾಗವಹಿಸಿದ್ದರು. ಸಂಸ್ಥಾಪಕರಾದ ಡಾ. ರೋಹನ್ ಮೊಂತೇರೊ ಅವರು ಈ ಸಂದರ್ಭದಲ್ಲಿ ಮಾತನಾಡಿ ಶಾರೂಖ್ ಖಾನ್ ಅವರನ್ನು ತನ್ನ ಆಧಿಕೃತ ಬ್ರಾಂಡ್ ಅಂಬಾಸಿಡರ್ ಆಗಿ ಘೋಷಣೆ ಮಾಡುವ ಮೂಲಕ  ರೋಹನ್ ಕಾರ್ಪೊರೇಷನ್ ಮಂಗಳೂರು ನಗರವನ್ನು ರಾಷ್ಟ್ರಮಟ್ಟದಲ್ಲಿ ಗುರುತಿಸುವಂತೆ ಮಾಡಲಿದೆ. ರೋಹನ್ ಕಾರ್ಪೊರೇಷನ್ ಮತ್ತು ಶಾರೂಕ್ ಖಾನ್ ಅವರ ಈ ಮಹತ್ವದ ಹೆಜ್ಜೆ ಮಂಗಳೂರಿನ ಹೆಮ್ಮೆ ಮಾತ್ರವಲ್ಲ, ಕರ್ನಾಟಕದ ಗರಿಮೆಯ ಪ್ರತಿಬಿಂಬವಾಗಿದೆ ಎಂದರು. ಕಾರ್ಯಕ್ರಮವನ್ನು  ನಿರೂಪಕಿ ರೀನಾ ಡಿಸೋಜಾ ಅವರು ನಿರೂಪಿಸಿದರು.

Read More

ಉಡುಪಿ, ಜು. 11 : ಸಮುದ್ರದಲ್ಲಿನ ಅಲೆಗಳ ಅಬ್ಬರದಿಂದಾಗಿ ಸಾಂಪ್ರದಾಯಿಕ ಮೀನುಗಾರಿಕಾ ದೋಣಿ ಮಗುಚಿ ಒಬ್ಬ ಮೀನುಗಾರ ಮೃತಪಟ್ಟ ಘಟನೆ ಉಡುಪಿಯ ಪಡುಕೆರೆ ಕಡಲತೀರದಲ್ಲಿ ಸಂಭವಿಸಿದೆ. ಮೃತರನ್ನು ಪಿತ್ರೋಡಿ ನಿವಾಸಿ ನೀಲು (48) ಎಂದು ಗುರುತಿಸಲಾಗಿದೆ. ಸಮುದ್ರದಲ್ಲಿ ಮೀನುಗಾರಿಕಾ ದೋಣಿ ಮಗುಚಿದ ಸಂದರ್ಭದಲ್ಲಿ ನೀಲು ಅವರು ಸಮುದ್ರಕ್ಕೆ ಎಸೆಯಲ್ಪಟ್ಟಿದ್ದಾರೆ. ಈ ವೇಳೆ ಅವರು ಮೀನುಗಾರಿಕಾ ಬಲೆಗಳು ಮತ್ತು ಇತರ ಸಲಕರಣೆಗಳಲ್ಲಿ ಸಿಲುಕಿಹಾಕಿಕೊಂಡಿದ್ದ ಪರಿಣಾಮ ನೀರಿನಿಂದ ಹೊರಬರಲು ಸಾಧ್ಯವಾಗಲಿಲ್ಲ. ಉಳಿದ ಮೀನುಗಾರರು ಅವರನ್ನು ಬಲೆಯಿಂದ ಬಿಡಿಸಿ ದಡಕ್ಕೆ ತಂದು ನೋಡಿದಾಗ, ಅವರು ಮೃತಪಟ್ಟಿರುವುದು ಕಂಡುಬಂದಿದೆ ಎನ್ನಲಾಗಿದೆ. ಈ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಮಂಗಳೂರು, ಜು. 10 : ಕೃಷ್ಣವಾಣಿ ಪಿಕ್ಚರ್ಸ್ ಲಾಂಛನದಲ್ಲಿ ತಯಾರಾದ ನಡುಬೈಲ್ ಜಗದೀಶ್ ಅಮೀನ್ ನಿರ್ಮಾಣದ ನಿತಿನ್ ರೈ ಕುಕ್ಕವಳ್ಳಿ ನುಳಿಯಾಲು ನಿರ್ದೇಶನದಲ್ಲಿ ತಯಾರಾದ “ಧರ್ಮ ಚಾವಡಿ” ತುಳು ಚಿತ್ರ ಜುಲೈ 11 ರಂದು ಬಿಡುಗಡೆಗೊಳ್ಳಲಿದೆ ಎಂದು ಹಿರಿಯ ನಟ ರಮೇಶ್ ರೈ ಕುಕ್ಕುವಳ್ಳಿ ಪತ್ರಿಕಾಗೋಷ್ಟಿಯಲ್ಲಿ ತಿಳಿಸಿದರು. ಚಿತ್ರ ನಿರ್ದೇಶಕ ನಿತಿನ್ ರೈ ಕುಕ್ಕವಳ್ಳಿ ಮಾತಾಡಿ, ಇದು ನನ್ನ ನಿರ್ದೇಶನದ ಎರಡನೇ ಚಿತ್ರ. ಜಗದೀಶ್ ಅಮೀನ್ ನಡುಬೈಲು ಚಿತ್ರವನ್ನು ನಿರ್ಮಾಣ ಮಾಡಿದ್ದು ಪ್ರಸಾದ್ ಕೆ. ಶೆಟ್ಟಿ ಸಂಗೀತ ನೀಡಿದ್ದಾರೆ. ಶ್ರೀನಾಥ್ ಪವಾರ್ ಸಂಕಲನ ,ಅರುಣ್ ರೈ ಪುತ್ತೂರು ಛಾಯಾಗ್ರಹಣ ಚಿತ್ರಕ್ಕಿದ್ದು ರಜಾಕ್ ಪುತ್ತೂರು ಚಿತ್ರಕಥೆ ಬರೆದಿದ್ದಾರೆ ಎಂದರು.. ಚಿತ್ರದಲ್ಲಿ ರಮೇಶ್ ರೈ ಕುಕ್ಕುವಳ್ಳಿ ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದು, ರವಿ ಸ್ನೇಹಿತ್ , ಚೇತನ್ ರೈ ಮಾಣಿ, ಸುರೇಶ್ ರೈ, ಪ್ರಕಾಶ್ ಧರ್ಮ ನಗರ, ದೀಪಕ್ ರೈ ಪಾಣಾಜೆ, ಸುಂದರ್ ರೈ ಮಂದಾರ,ರಂಜನ್ ಬೋಳೂರು, ಮನೀಶ್ ಶೆಟ್ಟಿ ಸಿದ್ದಕಟ್ಟೆ, ರಕ್ಷಣ್ ಮಾಡೂರು, ರೂಪ…

Read More

ಮಂಗಳೂರು, ಜು. 09 : ಅದ್ರಿ ಸ್ಟಾರ್ ಫಿಲಂಸ್ ಅರ್ಪಿಸುವ ಸಾನ್ವಿಕ ಅವರ ನಿರ್ದೇಶನದ “ಜಾವ ಕಾಫಿ” ಕನ್ನಡ ಚಿತ್ರ ಜು. 11 ರಂದು ತೆರೆಗೆ ಬರಲಿದೆ ಎಂದು ಚಿತ್ರದ ನಿರ್ಮಾಪಕಿ, ನಾಯಕಿ,‌ ನಿರ್ದೇಶಕಿ ಸಾನ್ವಿಕ ಅವರು ಮಂಗಳವಾರ ಪತ್ರಿಕಾಭನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ʼಜಾವ ಕಾಫಿʼ ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಚಿತ್ರವಾಗಿದೆ. ಬೆಂಗಳೂರು, ಮಂಗಳೂರು,‌ ಕೇರಳ ಮುಂತಾದ ಕಡೆ ಚಿತ್ರೀಕರಣ ನಡೆದಿದೆ. ಅಜಯ್ ವರ್ಧನ್ ನಾಯಕರಾಗಿ, ಸಾನ್ವಿಕ ನಾಯಕಿಯಾಗಿ ನಟಿಸಿದ್ದಾರೆ. ಚಿತ್ರದಲ್ಲಿ ಮಂಜುನಾಥ್, ಪ್ರತಿಮ, ‌ಭವಾನಿ ಶಂಕರ್, ವಿಜಯ್ ಕುಮಾರ್, ರಾಮಚಂದ್ರ, ರಾಮಲಿಂಗಪ್ಪ ನಟಿಸಿದ್ದಾರೆ. ಧ್ರುವ ದೇವರಾಯನ್ ಹಿನ್ನೆಲೆ ಸಂಗೀತ, ನೃತ್ಯ ನಿರ್ದೇಶಕರಾಗಿ ಪಾಲಾಶ್ ಮಾಸ್ಟರ್, ಶ್ರೀಧರ್ ಕರ್ಕೇರ ಸಂಗೀತ ನೀಡಿದ್ದಾರೆ ಎಂದು ತಿಳಿಸಿದರು. ನಾಯಕ ನಟ ಅಜಯ್ ವರ್ಧನ್ ಮಾತನಾಡಿ, ಈಗಾಗಲೇ ತುಳು ಚಿತ್ರದಲ್ಲಿ ನಟಿಸಿರುವ ನನಗೆ ಇದು ಮೂರನೇ ಚಿತ್ರ. ಸಾನ್ವಿಕ ಅವರು‌ ಒಂದೊಳ್ಳೆ ಚಿತ್ರ ಮಾಡಿದ್ದಾರೆ. ನಾನು ಪತ್ರಕರ್ತನ ಪಾತ್ರ…

Read More

ಮಂಗಳೂರು, ಜು. 08  : ಅಲ್ ಮದೀನಾ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಸಿದ್ದೀಕ್ ಪಾಂಡವರಕಲ್ಲು ಎಂಬಾತ ಮುಸ್ಲಿಂ ಸಮುದಾಯದ ಯುವತಿಯರಿಗೆ ಮದುವೆ ಮಾಡಿಸುವ ನೆಪದಲ್ಲಿ ಕ್ರೌಡ್‌ ಫಂಡ್ ಸಂಗ್ರಹ ಮಾಡುವುದಲ್ಲದೆ ಯುವತಿಯರ ಮೊಬೈಲ್ ನಂಬರ್ ಪಡೆದು, ತನ್ನ ಆನೈತಿಕ ಚಟುವಟಿಕೆಗಳಿಗೆ ಬಳಸಿಕೊಳ್ಳುತ್ತಿದ್ದಾನೆ. ಯುವತಿಯರಿಗೆ ಕಿರುಕುಳ ನೀಡಿದ್ದನ್ನು ಪ್ರಶ್ನಿಸಿದಕ್ಕೆ ಸಿದ್ದೀಕ್ ಪಾಂಡವರಕಲ್ಲು ಎಂಬವರು ನನ್ನ ವಿರುದ್ಧ ಸುಳ್ಳುಕೇಸು ದಾಖಲಿಸಿರುವುದಾಗಿ ಮಂಗಳೂರಿನ ದಿ ವಾಯ್ಸ್ ಆಫ್ ಬ್ಲಡ್ ಡೋನರ್ಸ್ ಸಂಸ್ಥೆಯ ಸ್ಥಾಪಕ ಅಬ್ದುಲ್ ರವೂಫ್ ಆರೋಪಿಸಿದ್ದಾರೆ. ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನು ದಿ ವಾಯ್ಸ್ ಆಪ್ ಬ್ಲಡ್ ಡೋನರ್ಸ್ ಎಂಬ ಸಂಸ್ಥೆಯನ್ನು ಹುಟ್ಟು ಹಾಕಿ ಅದರ ಮೂಲಕ ವಿವಿಧ ಪ್ರದೇಶಗಳಲ್ಲಿ ರಕ್ತದಾನ ಶಿಬಿರಗಳನ್ನು ಏರ್ಪಡಿಸಿ ದಾಖಲೆಯ ಮಟ್ಟದಲ್ಲಿ ರಕ್ತದಾನ ಮಾಡಿದ್ದೇನೆ. ವಿಕಲಚೇತನರಿಗೆ ವೀಲ್ ಚೇರ್ ಮುಂತಾದ ಪರಿಕರಗಳನ್ನು ನೀಡುತ್ತಾ ನಿರಂತರವಾಗಿ ಸಮಾಜ ಸೇವೆ ಮಾಡುತ್ತಾ ಬಂದಿದ್ದೇನೆ ಎಂದು ಹೇಳಿದರು. ಸಿದ್ದೀಕ್ ಪಾಂಡವರಕಲ್ಲು ಮುಸ್ಲಿಂ ಸಮುದಾಯದ ಅಮಾಯಕ ಯುವತಿಯರನ್ನು ತನ್ನ ತೀಟೆ ತೀರಿಸಿಕೊಳ್ಳಲು…

Read More

ಬಂಟ್ವಾಳ, ಜು. 07 : ಕಾರೊಂದು ರಸ್ತೆ ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕೆಳಗಿನ ತುಂಬೆ ಎಂಬಲ್ಲಿ ಜು. 05, ಶನಿವಾರ ನಡೆದಿದೆ. ಮೃತರನ್ನು ಪಾವೂರು ನಿವಾಸಿ ನೌಫಲ್ ಎಂದು ಗುರುತಿಸಲಾಗಿದೆ. ನೌಫಲ್ ಅವರು ಶನಿವಾರ ಬೆಳಿಗ್ಗೆ ಉಸ್ಮಾನ್ ಎಂಬವರಿಗೆ ಸೇರಿದ ಸ್ವಿಫ್ಟ್ ಕಾರು ಖರೀದಿಸಿ ಅದನ್ನು ತೆಗೆದುಕೊಂಡು ಹೋಗುವ ವೇಳೆ ಈ ಘಟನೆ ಸಂಭವಿಸಿದೆ ಎಂದು ಹೇಳಲಾಗಿದೆ. ಸಂಚಾರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Read More

ಉಡುಪಿ, ಜು. 06 : ಕುಂಜಾಲು ದನದ ತಲೆ ಪತ್ತೆ ಪ್ರಕರಣಕ್ಕೆ ಸಂಬಂಧಿಸಿ ಪ್ರಚೋದನಕಾರಿ ಹೇಳಿಕೆ ನೀಡಿರುವ ಆರೋಪದಲ್ಲಿ ಎಸ್ ಡಿಪಿಐ ರಾಜ್ಯ ಕಾರ್ಯದರ್ಶಿ ರಿಯಾಝ್ ಕಡಂಬು ವಿರುದ್ಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಸ್ವಯಂಪ್ರೇರಿತ ಪ್ರಕರಣ ದಾಖಲಾಗಿದೆ. ರಿಯಾಝ್ ಕಡಂಬು ಜು.5ರಂದು ಉಡುಪಿಯಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ, ಕುಂಜಾಲುವಿನಲ್ಲಿ ದನದ ತಲೆ ಪತ್ತೆ ಪ್ರಕರಣಕ್ಕೆ ಸಂಬಂಧಿಸಿ ಸಂಘ ಪರಿವಾರ ಮತ್ತು ಬಿಜೆಪಿ ನಾಯಕರು ಸಮಾಜದ ಸ್ವಾಸ್ಥ ಕೆಡಿಸುವಂತಹ, ಗಲಭೆ ಸೃಷ್ಟಿಸುವಂತಹ ಹುನ್ನಾರವನ್ನು ಮಾಡಿದ್ದಾರೆ ಎಂಬುದಾಗಿ ಸಾರ್ವಜನಿಕವಾಗಿ ಹೇಳಿಕೆ ನೀಡಿದ್ದಾರೆ. ರಿಯಾಝ್ ಕಡಂಬು ಅವರು ಆಧಾರರಹಿತವಾಗಿ ಸಾರ್ವಜನಿಕ ಶಾಂತಿ-ಸುವ್ಯವಸ್ಥೆಯನ್ನು ಭಂಗ ತರುವಂತೆ ಮಾತನಾಡಿರುವುದಾಗಿ ದೂರಲಾಗಿದೆ. ಈ ಹೇಳಿಕೆ ಸಾರ್ವಜನಿಕರಿಗೆ ಸುಳ್ಳು ಮಾಹಿತಿ ನೀಡಿ ಗಲಭೆ-ಗೊಂದಲ ಉಂಟು ಮಾಡುವಂತಿದೆ. ರಿಯಾಝ್ ಧರ್ಮಗಳ ನಡುವೆ ದ್ವೇಷ ಹುಟ್ಟು ಹಾಕುವಂತಹ ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆ ಎಂದು ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More