Author: admin

ನವದೆಹಲಿ, ಫೆ. 14 : ಮುಂಬರುವ ರಾಜ್ಯಸಭಾ ಚುನಾವಣೆಗೆ ಕಾಂಗ್ರೆಸ್ನ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ರಾಜಸ್ಥಾನದಿಂದ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ವರದಿಯಾಗಿದೆ. ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ ಅವರ ಪುತ್ರ ರಾಹುಲ್ ಗಾಂಧಿ ಮತ್ತು ಪುತ್ರಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಭಾಗಿಯಾಗಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

Read More

ಬೆಂಗಳೂರು,, ಫೆ. 13 : 12 ನೇ ಶತಮಾನದ ಸಾಮಾಜಿಕ ಕ್ರಾಂತಿಯ ಹರಿಕಾರ, ವಿಶ್ವಮಾನವತಾವಾದಿ ಜಗಜ್ಯೋತಿ ಬಸವಣ್ಣನವರ ಭಾವಚಿತ್ರವನ್ನು ಕರ್ನಾಟಕ ರಾಜ್ಯದ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಫೆ. 17ರಂದು ಹಾಕುವಂತೆ ಸಿಎಂ ಸಿದ್ದರಾಮಯ್ಯ ಆದೇಶ ನೀಡಿದ್ದಾರೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಬಸವಣ್ಣ ಭಾವಚಿತ್ರ ಅನಾವರಣಗೊಳಿಸಿ ಸಿದ್ದರಾಮಯ್ಯ ಅವರು ಮಾತಾಡಿ ಬಸವಣ್ಣನವರ ಭಾವಚಿತ್ರದಲ್ಲಿ ವಿಶ್ವ ಗುರು ಬಸವಣ್ಣ -ಸಾಂಸ್ಕೃತಿಕ ನಾಯಕ ಎಂದು ನಮೂದಿಸಲು ಸೂಚನೆ ನೀಡಲಾಗಿದೆ ಎಂದರು.

Read More

ಮಂಗಳೂರು, ಫೆ. 12 : ಟೀಮ್ ಮಂಗಳೂರು ತಂಡದ ಆಶ್ರಯದಲ್ಲಿ ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆಯ ಸಹಭಾಗಿತ್ವದಲ್ಲಿ ತಣ್ಣೀರುಬಾವಿ ಬೀಚ್ನಲ್ಲಿ 2 ದಿನಗಳ ಅಂತಾರಾಷ್ಟ್ರೀಯ ಗಾಳಿಪಟ ಉತ್ಸವಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಶನಿವಾರ ಚಾಲನೆ ನೀಡಿದರು. ನಂತರ ಮಾತಾಡಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರವಾಸೋದ್ಯಮ ಉತ್ತೇಜನಕ್ಕೆ ಪೂರಕವಾದ ಕಾರ್ಯಕ್ರಮಗಳನ್ನು ಪ್ರತೀ ವರ್ಷ ನಿಗದಿತ ದಿನಾಂಕಗಳನ್ನುಕಾರ್ಯಕ್ರಮಗಳನ್ನು ಆಯೋಜಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ಈ ಸಂದರ್ಭದಲ್ಲಿ ಸಂವಿಧಾನ ಪೀಠಿಕೆಯನ್ನು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಬೋಧಿಸಿದರು. ಇಂಡೋನೇಷಿಯಾ, ಎಸ್ಟೋನಿಯಾ, ಥೈಲ್ಯಾಂಡ್, ಉಕ್ರೇನ್, ವಿಯೆಟ್ನಾಂ, ಮಲೇಷ್ಯಾ, ಗ್ರೀಸ್ ಮತ್ತು ಸ್ವೀಡನ್ ಅಂತರಾಷ್ಟ್ರೀಯ ಹಾರಾಟಗಾರರು, ಗುಜರಾತ್, ಮಹಾರಾಷ್ಟ್ರ,ಕೇರಳ ಮತ್ತು ತೆಲಂಗಾಣದಿಂದ 22 ಕ್ಕೂ ಹೆಚ್ಚು ಭಾರತೀಯ ಗಾಳಿಪಟ ಹಾರಾಟಗಾರರು ಭಾಗವಹಿಸಿದ್ದರು.

Read More

ಮಂಗಳೂರು, ಫೆ .12 : ಕೆಎಸ್ಸಾರ್ಟಿಸಿ ಬಸ್ ಢಿಕ್ಕಿಯಾಗಿ ದ್ವಿಚಕ್ರ ವಾಹನ ಸವಾರ ಸಾವನ್ನಪ್ಪಿದ ಘಟನೆ ಅಡ್ಯಾರ್ ಸಮೀಪದ ಅರ್ಕುಳ ದ್ವಾರದ ಬಳಿ ರವಿವಾರ ನಡೆದಿದೆ. ಚರಣ್ ರಾಜ್ (34) ಮೃತಪಟ್ಟವರು. ಚರಣ್ ರಾಜ್ ಅವರು ಒಳರಸ್ತೆಯಿಂದ ಹೆದ್ದಾರಿಗೆ ಪ್ರವೇಶಿಸುತ್ತಿದ್ದ ಸಂದರ್ಭ ಕೆಎಸ್ಸಾರ್ಟಿಸಿ ಬಸ್ ಢಿಕ್ಕಿಯಾಗಿ ಸವಾರ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ. ಅವೈಜ್ಞಾನಿಕ ಕಾಮಗಾರಿಯಿಂದಾಗಿ ಪದೇ ಪದೇ ಇಂಥಹ ಅಪಘಾತಗಳು ಸಂಭವಿಸುತ್ತಿವೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Read More

ಉಳ್ಳಾಲ,ಫೆ. 08 :: ಮಂಗಳೂರಿನ ಪಡೀಲ್ ಸಮೀಪದಲ್ಲಿರುವ ಉಳ್ಳಾಲಕ್ಕೆ ನೀರು ಸರಬರಾಜು ಮಾಡುವ ಮುಖ್ಯ ಪೈಪ್ ಲೈನ್ ಒಡೆದ ಪರಿಣಾಮ ದುರಸ್ತಿ ಕಾರ್ಯಕ್ಕಾಗಿ ಉಳ್ಳಾಲ ನಗರಕ್ಕೆ 1 ವಾರ ನೀರು ಸರಬರಾಜು ಇರುವುದಿಲ್ಲ ಎಂದು ಉಳ್ಳಾಲ ನಗರಸಭೆ ಪ್ರಕಟಣೆಯಲ್ಲಿ ತಿಳಿಸಿದೆ. ಪಂಪ್ವೆಲ್ ಮಹಾವೀರ ವೃತ್ತ ಸಮೀಪದ ಪಡೀಲ್ ರೋಹನ್ ಸ್ಕ್ವೇರ್ ಕಟ್ಟಡದ ಮುಂಭಾಗದಲ್ಲಿ ತುಂಬೆ ಅಣೆಕಟ್ಟಿನಿಂದ ಉಳ್ಳಾಲಕ್ಕೆ ನೀರು ಸರಬರಾಜು ಮಾಡುವ ಮುಖ್ಯ ಪೈಪ್ ಲೈನ್ ಫೆ. 6 ರಂದು ಹಾನಿಯಾಗಿದೆ. ಈ ನಿಟ್ಟಿನಲ್ಲಿ ದುರಸ್ತಿ ಕಾರ್ಯಕ್ಕಾಗಿ 1 ವಾರದ ಬೇಕಾಗಿರುವುದರಿಂದ ಉಳ್ಳಾಲ ನಗರಕ್ಕೆ ನೀರು ಇರುವುದಿಲ್ಲ. ಸಾರ್ವಜನಿಕರು ಸಹಕರಿಸಬೇಕು ಎಂದು ಉಳ್ಳಾಲನಗರಸಭೆ ಪ್ರಕಟಣೆಯಲ್ಲಿ ತಿಳಿಸಿದೆ.

Read More

ಚಿಲಿ, ಫೆ 07: ಹೆಲಿಕಾಪ್ಟರ್ ಅಪಘಾತದಲ್ಲಿ ಚಿಲಿ ದೇಶದ ಮಾಜಿ ಅಧ್ಯಕ್ಷ ಸೆಬಾಸ್ಟಿಯನ್ ಪಿನೆರಾ(74) ಅವರು ನಿಧನರಾಗಿದ್ದಾರೆ. ಚಿಲಿ ದೇಶದ ದಕ್ಷಿಣ ಭಾಗದಲ್ಲಿ ಮಂಗಳವಾರ ಮಧ್ಯಾಹ್ನ ನಡೆದ ಹೆಲಿಕಾಪ್ಟರ್ ಅಪಘಾತದಲ್ಲಿ ನಿಧನರಾದರು ಎಂದು ಅವರ ಕಚೇರಿಯ ಹೇಳಿಕೆ ತಿಳಿಸಿದೆ. ಅಪಘಾತಕ್ಕೀಡಾದ ಹೆಲಿಕಾಪ್ಟರ್ ನಲ್ಲಿ ನಾಲ್ಕು ಮಂದಿ ಇದ್ದು, ಮೂವರು ಬದುಕುಳಿದಿದ್ದಾರೆ ಎಂದು ಸರ್ಕಾರದ ತುರ್ತು ಸಂಸ್ಥೆ ಸೆನಾಪ್ರೆಡ್ ತಿಳಿಸಿದೆ.

Read More

ಪುತ್ತೂರು, ಫೆ 06 : ನವವಿವಾಹಿತೆಯೊಬ್ಬರು ನೇಣು ಬಿಗಿದು ಆತ್ಯಹತ್ಯೆ ಮಾಡಿಕೊಂಡ ಘಟನೆ ಪುತ್ತೂರು ತಾಲೂಕಿನ ಕುರಿಯ ಗಡಾಜೆ ಎಂಬಲ್ಲಿ ನಡೆದಿದೆ. ಮೃತರನ್ನು ಸಾಂತ್ಯ ನಿವಾಸಿ ಜಯಪ್ರಕಾಶ್ ಎಂಬವರ ಪತ್ನಿ ವೈಶಾಲಿ (26) ಎಂದು ಗುರುತಿಸಲಾಗಿದೆ. ಜಯಪ್ರಕಾಶ್ ಹಾಗೂ ವೈಶಾಲಿ ಮದುವೆ 7 ತಿಂಗಳ ಹಿಂದೆ ನಡೆದಿತ್ತು.ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಪುತ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕುಂದಾಪುರ, ಫೆ 05 : ಉಡುಪಿ ಜಿಲ್ಲಾ ಭಾರತೀಯ ಜನತಾ ಪಕ್ಷದ ನೂತನ ಅಧ್ಯಕ್ಷರಾಗಿ ನೇಮಕವಾದ ಕುಂದಾಪುರದ ಬಿ. ಕಿಶೋರ್ ಕುಮಾರ್ ಅವರಿಗೆ ಶನಿವಾರ ಕುಂದಾಪುರ ಬಿಜೆಪಿ ಮಂಡಲದ ವತಿಯಿಂದ ಪಕ್ಷದ ಕಚೇರಿಯಲ್ಲಿ ಅಭಿನಂದನೆ ಸಲ್ಲಿಸಲಾಯಿತು. ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಮಾತಾಡಿ, ಪಕ್ಷವನ್ನು ಬೂತ್ ಮಟ್ಟದಿಂದ ಇನ್ನಷ್ಟು ಬಲಪಡಿಸುವ ಜತೆಗೆ ಶಕ್ತಿ ತುಂಬುವ ಕಾರ್ಯ ಜಿಲ್ಲಾಧ್ಯಕ್ಷರಿಂದ ಆಗಲಿ ಎಂದು ಹಾರೈಸಿದರು. ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಅವರಿಗೆ ಅಭಿನಂದನಾ ಕಾರ್ಯಕ್ರಮ ನಡೆಯಿತು. ಅಭಿನಂದನೆ ಸ್ವೀಕರಿಸಿ ಮಾತನಾಡಿ, ಇದು ಬಯಸದೇ ಬಂದ ಭಾಗ್ಯ. ಕಾರ್ಯಕರ್ತರೊಂದಿಗಿನ ನಿರಂತರ ಸಂಬಂಧ ಈ ಹಂತಕ್ಕೆ ಬೆಳೆಸಿದೆ. ಈ ಜವಾಬ್ದಾರಿ ಸಿಗುವಲ್ಲಿ ನೆರವಾದ ಎಲ್ಲ ಹಿರಿಯ, ಕಿರಿಯರೆಲ್ಲರಿಗೂ ಋಣಿ ಎಂದರು. ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ. ಕುಂದಾಪುರ ಮಂಡಲದ ಅಧ್ಯಕ್ಷ ಶಂಕರ ಅಂಕದಕಟ್ಟೆ ಅಧ್ಯಕ್ಷರು,ಮಂಗಳೂರು ಸಹ ಪ್ರಭಾರಿ ರಾಜೇಶ್ ಕಾವೇರಿ,ಒಬಿಸಿ ಮೋರ್ಚಾ ರಾಜ್ಯ ಕಾರ್ಯದರ್ಶಿ ವಿಠಲ ಪೂಜಾರಿ ಐರೋಡಿ, ಜಿಲ್ಲಾ…

Read More

ಫ್ರಾನ್ಸ್, ಫೆ 04 : ಜಗತ್ತಿನ ಗಮನ ಸೆಳೆದಿರುವ ಭಾರತದ ಯುಪಿಐ ತಂತ್ರಜ್ಞಾನ ಇದೀಗ ಫ್ರಾನ್ಸ್ಗೆ ಕಾಲಿಟ್ಟಿದೆ. ಇಮಾನ್ಯುಯೆಲ್ ಮ್ಯಾಕ್ರಾನ್ ರವರು ಭಾರತದಿಂದ ವಾಪಸ್ ಹೋದ ಬೆನ್ನಲ್ಲೇ ಫ್ರಾನ್ಸ್ನಲ್ಲಿ ಭಾರತದ ಯುಪಿಐ ಪಾವತಿ ಶುರುವಾಗಿದ್ದು, ಫೆ 2 ರಂದು ಪ್ಯಾರೀಸ್ನಲ್ಲಿ ನಡೆದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಯುಪಿಐ ಪಾವತಿಗೆ ಚಾಲನೆ ದೊರೆತಿದೆ. ಭಾರತದ ಪ್ರವಾಸಿಗರು ಇನ್ನು ಯುಪಿಐ ಬಳಸಿ ಟಿಕೆಟ್ಗಳನ್ನು ಆನ್ಲೈನ್ನಲ್ಲಿ ಖರೀದಿಸಬಹುದು ಹಾಗೂ ಐಫೆಲ್ ಟವರ್ಗೆ ಭೇಟಿ ನೀಡಲು ಟಿಕೆಟ್ಗಳನ್ನು ಬುಕ್ ಮಾಡಬಹುದು ಎಂದು ಎನ್ ಪಿಸಿಐ ತಿಳಿಸಿದೆ. ಭಾರತದ ಯುಪಿಐ ತಂತ್ರಜ್ಞಾನದ ಕುರಿತು ಫ್ರಾನ್ಸ್ನಲ್ಲಿರುವ ಭಾರತೀಯ ರಾಯಭಾರಿ ಕಚೇರಿಯು ಸಾಮಾಜಿಕ ಜಾಲತಾಣವಾದ ಎಕ್ಸ್ ನಲ್ಲಿ ಮಾಹಿತಿಯನ್ನು ಹಂಚಿಕೊಂಡಿದ್ದು, ಯುಪಿಐ ಪಾವತಿಯನ್ನು ಜಾಗತಿಕಗೊಳಿಸುವ ದೃಷ್ಟಿ ಪ್ರಧಾನಿ ನರೇಂದ್ರ ಮೋದಿಯವರದ್ದಾಗಿದೆ ಎಂದು ಬರೆದುಕೊಂಡಿದೆ.

Read More

ಕಾಸರಗೋಡು, 03 : ನಿರ್ಮಾಣ ಹಂತದ ಮನೆಯ ಮಹಡಿಯಿಂದ ಬಿದ್ದು ಆಟೋ ಚಾಲಕ ರೋರ್ವ ರು ಸಾವನ್ನಪ್ಪಿದ ಘಟನೆ ಬಂದ್ಯೋಡ್ ಸಮೀಪದ ಕುಬಣೂರಿನ ನಲ್ಲಿ ನಡೆದಿದೆ. ಮೃತರನ್ನು ಕುಬಣೂರಿನ ಪದ್ಮ ನಾಭ (45) ಎಂದು ಗುರುತಿಸಲಾಗಿದೆ. ಪದ್ಮನಾಭರವರು ಗುರುವಾರ ಸಂಜೆ ಮನೆ ಸಮೀಪದ ಸ್ನೇಹಿತ ರೋರ್ವರ ಮಹಡಿ ಗೆ ಹತ್ತಿದ್ದ ಸಂದರ್ಭದಲ್ಲಿ ಆಕಸ್ಮಿಕವಾಗಿ ಕೆಳಗೆ ಬಿದ್ದು ಗಂಭೀರ ಗಾಯಗೊಂಡಿದ್ದು, ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆಗೆ ಸ್ಪಂದಿಸದೆ ಶುಕ್ರವಾರ ಸಾವನ್ನಪ್ಪಿದ್ದಾರೆ. ಕುಂಬಳೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More