Subscribe to Updates
Get the latest creative news from FooBar about art, design and business.
Author: admin
ಕೊಣಾಜೆ, ಜ. 14 : ನರಿಂಗಾನ ಕಂಬಳೋತ್ಸವ ವು ನರಿಂಗಾನ ಗ್ರಾಮದ ಮೋರ್ಲ ಬೋಳದ ಲವ-ಕುಶ ಜೋಡುಕರೆಯಲ್ಲಿ ಶನಿವಾರ ಉದ್ಘಾಟನೆಗೊಂಡಿತು. ಬ್ರಹ್ಮಶ್ರೀ ಉಚ್ಚಿಲತ್ತಾಯ ನೀಲೇಶ್ವರ ಪದ್ಮನಾಭ ತಂತ್ರಿಯವರು ಕಂಬಳವನ್ನು ದೀಪ ಬೆಳಗಿಸಿ ಉದ್ಘಾಟಿಸಿ ನಂತರ ಮಾತನಾಡಿ, ಕಂಬಳ ಕ್ರೀಡೆಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ನರಿಂಗಾನದ ವಿಸ್ತಾರವಾದ ಜಾಗದಲ್ಲಿ ಸರ್ಕಾರಿ ಕಂಬಳ ನಡೆಯುತ್ತಿರುವುದು ಹೆಮ್ಮೆಯ ಸಂಗತಿಯಾಗಿದೆ, ತುಳುನಾಡಿನ ಕೃಷಿ ಹಾಗೂ ಸಂಸ್ಕೃತಿಯೊಂದಿಗೆ ಬೆಸೆದುಕೊಂಡಿರುವ ಕಂಬಳ ಈ ನಾಡಿನ ಹೆಮ್ಮೆಯ ಕಲೆಯಾಗಿ ರಾಷ್ಟ್ರಮಟ್ಟದಲ್ಲಿ ಮನ್ನಣೆ ಪಡೆಯುತ್ತಿದೆ ಎಂದರು. ಕಾರ್ಯಕ್ರಮದಲ್ಲಿ ಕಂಬಳ ಸಮಿತಿ ಅಧ್ಯಕ್ಷರು ಹಾಗೂ ವಿಧಾನಸಭೆ ಅಧ್ಯಕ್ಷರಾದ ಯು.ಟಿ.ಖಾದರ್, ಕಂಬಳ ಸಮಿತಿಯ ಗೌರವಾಧ್ಯಕ್ಷರಾದ ವೆಂಕಪ್ಪ ಕಾಜವ ಮಿತ್ತಕೋಡಿ, ಮುಖಂಡರಾದ ಗುಣಪಾಲ್ ಕಡಂಬ, ಧಾರ್ಮಿಕ ಕ್ಷೇತ್ರದ ಮುಂದಾಳುಗಳಾದ ಪ್ರಮೋದ್ ರೈ, ಗುಣಕರ ಆಳ್ವ, ಕುರ್ನಾಡು ಗುತ್ತುವಿನ ಸುಧಾಕರ ಶೆಟ್ಟಿ, ಅರ್ಚಕರಾದ ರಾಘವೇಂದ್ರ ಆಚಾರ್, ಕಿನ್ಯ ಗುತ್ತು ನಾರಾಯಣ ಶೆಟ್ಟಿ, , ಮನಮೋಹನ ಕೊಂಡೆ ಮೊದಲಾದವರು ಉಪಸ್ಥಿತರಿದ್ದರು.
ಹೆನಾನ್, ಜ .13 : ಚೀನಾದ ಹೆನಾನ್ ಪ್ರಾಂತ್ಯದ ಪಿಂಗ್ಡಿಂಗ್ಶಾನ್ ನಗರದ ಕಲ್ಲಿದ್ದಲು ಗಣಿಯಲ್ಲಿ ಅನಿಲ ಸ್ಫೋಟಗೊಂಡು ಕನಿಷ್ಠ 8 ಜನರು ಮೃತಪಟ್ಟ ಘಟನೆ ಶುಕ್ರವಾರ ನಡೆದಿದೆ ಎಂದು ವರದಿಯಾಗಿದೆ. ಪಿಂ ಗ್ಡಿಂ ಗ್ಶಾನ್ ಟಿಯಾನನ್ ಕಲ್ಲಿದ್ದಲು ಗಣಿ ಕಂಪನಿಯಲ್ಲಿ ಶುಕ್ರವಾರ ಮಧ್ಯಾಹ್ನ 2:55ಕ್ಕೆ ಘಟನೆ ನಡೆದಿದೆ. ಈ ವೇಳೆ ಒಟ್ಟು 425 ಮಂದಿ ಇದ್ದರು. ಅವರಲ್ಲಿ 380 ಜನರನ್ನು ಸುರಕ್ಷಿತವಾಗಿ ಹೊರತರಲಾಗಿದೆ. ಉಳಿದ 45 ಮಂದಿ ನಾಪತ್ತೆಯಾಗಿದ್ದಾರೆ ಎಂದು ತುರ್ತು ನಿರ್ವಹಣಾ ಏಜೆನ್ಸಿಯನ್ನು ಉಲ್ಲೇಖಿಸಿ ಕ್ಸಿನ್ಹುವಾ ವರದಿ ಮಾಡಿದೆ.
ಶಿವಮೊಗ್ಗ, ಜ. 12 : ಕರ್ನಾಟಕ ಕಾಂಗ್ರೆಸ್ ಸರ್ಕಾರದ 5ನೇ ಉಚಿತ ಗ್ಯಾರಂಟಿ ಯೋಜನೆಯಾದ ಯುವ ನಿಧಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಶುಕ್ರವಾರ ಶಿವಮೊಗ್ಗದ ಫ್ರೀಡಂ ಪಾರ್ಕ್ನಲ್ಲಿ ಚಾಲನೆ ನೀಡಿದ್ದಾರೆ. ಈ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ ಮಾತಾಡಿ, ಚುನಾವಣೆಗಾಗಿ ಯುವನಿಧಿ ಯೋಜನೆಯನ್ನು ಜಾರಿಗೆ ತಂದಿಲ್ಲ. ನಿರುದ್ಯೋಗಿ ಯುವಕರಿಗೆ ನೆರವಾಗಬೇಕೆಂಬ ಉದ್ದೇಶದಿಂದಷ್ಟೇ ಯುವ ನಿಧಿ ಯೋಜನೆಯನ್ನು ಜಾರಿಗೊಳಿಸಲಾಗಿದೆ ಎಂದು ಹೇಳಿದ್ದಾರೆ. ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಸೇರಿದಂತೆ ವಿವಿಧ ಸಚಿವರು, ಪಕ್ಷದ ನಾಯಕರು ಸಮಾರಂಭದಲ್ಲಿ ಭಾಗವಹಿಸಿದ್ದು, ಬೇರೆ ಬೆರೆ ಜಿಲ್ಲೆಗಳಿಂದ ಲಕ್ಷಾಂತರ ಜನ ಕಾರ್ಯಕ್ರಮಕ್ಕೆ ಆಗಮಿಸಿದ್ದರು.
ಮಂಗಳೂರು ಜ. 11 : ಜಿಲ್ಲಾ ಕಾರಾಗೃಹದಲ್ಲಿ ಸಸಿಗಳನ್ನು ಬೆಳಸಿ, ಮಾರಾಟ ಮಾಡಲು ಅನುಕೂಲವಾಗುವಂತೆ ನರ್ಸರಿ ವ್ಯವಸ್ಥೆ ಕಲ್ಪಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ದ.ಕ. ಲ್ಲಾಧಿಕಾರಿ ಮುಲ್ಲೈ ಮುಗಿಲನ್ ತಿಳಿಸಿದ್ದಾರೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ವತಿಯಿಂದ ಬುಧವಾರ ಜಿಲ್ಲಾ ಕಾರಾ ಗೃಹದಲ್ಲಿ ಆಯೋಜಿಸಲಾಗಿದ್ದ ಬಂಧಿನಿವಾಸಿಗಳ ‘ಮನಪರಿವರ್ತನೆಗಾಗಿ ಸಾಂಸ್ಕೃತಿಕ ಸೌರಭ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ಜೈಲಿನಲ್ಲಿ ಖೈದಿಗಳೇ ವಿವಿಧ ರೀತಿಯ ಗಿಡ ಮರಗಳನ್ನು ಬೆಳೆಸಿ ಪೋಷಿಸಿಕೊಂಡು ಬಂದಿರುವುದು ಶ್ಲಾಘನೀಯ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಕಾರಾಗೃಹ ಅಧೀಕ್ಷಕ ಬಿ.ಟಿ. ಓಬಳೇಶಪ್ಪ, ಜಿಲ್ಲಾ ವಾರ್ತಾಧಿಕಾರಿ ಬಿ.ಎ. ಖಾದರ್ ಶಾ, ಕಾರಾಗೃಹ ಭದ್ರತಾ ಅಧಿಕಾರಿಗಳಾದ ಭರತ್ ನಾಯಕ್ ಮತ್ತಿತ್ತರರು ಉಪಸ್ಥಿತರಿದ್ದರು.
ಕಾಸರಗೋಡು, ಜ. 10 : ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿನೋದ್ ಕುಮಾರ್ (48) ಇಂದು ಮಾವುಂಗಾಲ್ ನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ವಿನೋದ್ ಕುಮಾರ್ ಅವರು ಮನೆಯಲ್ಲಿ ಕುಸಿದು ಬಿದ್ದಿದ್ದು,ಅವರನ್ನು ಆಸ್ಪತ್ರೆಗೆ ಕೊಂಡೊಯ್ದು ಚಿಕಿತ್ಸೆ ನೀಡಿದರೂ ಫಲಕಾರಿಯಾಗಲಿಲ್ಲ. ಪುಲ್ಲೂರು ನಿವಾಸಿಯಾಗಿದ್ದ ವಿನೋದ್ ಕುಮಾರ್ ಅವರು ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ರಾಗಿ ಸೇವೆ ಸಲ್ಲಿಸಿದ್ದ ಅವರು, ಬಳಿಕ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರು.
ಜಪಾನ್, ಜ. 10 : ಮಧ್ಯ ಜಪಾನ್ ನ ನಿಗಟಾ ಪ್ರಾಂತ್ಯದಲ್ಲಿ ಮಂಗಳವಾರ ರಿಕ್ಟರ್ ಮಾಪಕದಲ್ಲಿ 6.0 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ವರದಿಯಾಗಿದೆ. ಭೂಕಂಪನದ ತೀವ್ರತೆ ರಿಕ್ಟರ್ ಮಾಪಕದಲ್ಲಿ 6.0 ದಾಖಲಾಗಿದ್ದು, 200 ಮಂದಿ ಸಾವನಪ್ಪಿದ್ದಾರೆ ಎನ್ನಲಾಗಿದೆ. ರಕ್ಷಣಾ ಕಾರ್ಯಾಚರಣೆ ಇನ್ನೂ ನಡೆಯುತ್ತಿರುವುದರಿಂದ ಒಟ್ಟಾರೆ ಸಾವಿನ ಸಂಖ್ಯೆ ಹೆಚ್ಚಾಗಬಹುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪುತ್ತೂರು, ಜ. 09: ಕಾಲೇಜು ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸುಳ್ಯಪದವು ಕನ್ನಡ್ಕದಲ್ಲಿ ರವಿವಾರ ನಡೆದಿದೆ ಮೃತರನ್ನು ಫಿಲೋಮಿನಾ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿನಿ, ಕನ್ನಡ್ಕ ನಿವಾಸಿ, ದೀಕ್ಷಾ (16) ಎಂದು ಗುರುತಿಸಲಾಗಿದೆ. ಮನೆಯಲ್ಲಿದ್ದ ತಂದೆ-ತಾಯಿ ಕೃಷಿ ಕೆಲಸದಲ್ಲಿ ತೊಡಗಿಸಿಕೊಂಡ ಸಂದರ್ಭದಲ್ಲಿ ದೀಕ್ಷಾ ಮನೆಯ ರೂಮಲ್ಲಿ ಫ್ಯಾನ್ ಗೆ ನೇಣು ಹಾಕಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ವರದಿಯಾಗಿದೆ. ಈಶ್ವರಮಂಗಲ ಹೊರಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪಡುಬಿದ್ರಿ, ಜ. 08 : ಸ್ಕೂಟಿಗೆ ಬಸ್ಸೊಂದು ಢಿಕ್ಕಿಯಾದ ಪರಿಣಾಮ ಸವಾರ ಮೃತಪಟ್ಟ ಘಟನೆ ಪಲಿಮಾರು ಬಳಿ ರವಿವಾರ ರಾತ್ರಿ ನಡೆದಿದೆ. ಪಲಿಮಾರಿನಿಂದ ಸ್ಕೂಟಿಯಲ್ಲಿ ಎರ್ಮಾಳಿನ ಪೂಂದಾಡು ಎಂಬಲ್ಲಿಗೆ ಭಾನುವಾರ ರಾತ್ರಿ ತೆರಳುತ್ತಿದ್ದಾಗ ಬೆಂಗಳೂರಿಗೆ ಹೋಗುತ್ತಿದ್ದ ಬಸ್ಸೊಂದು ಢಿಕ್ಕಿಯಾದ ಪರಿಣಾಮ ಪಲಿಮಾರು ದರ್ಕಾಸ್ತು ನಿವಾಸಿ ಧನ್ ರಾಜ್ ಪಲಿಮಾರು (17) ಆಸ್ಪತ್ರೆಗೆ ಕೊಂಡೊಯ್ಯುವ ದಾರಿ ಮಧ್ಯೆ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಕಾಸರಗೋಡು, ಜ. 06 : ಯುವತಿಯೋರ್ವಳು ರೈಲಿ ನಿಂದ ಬಿದ್ದು ಸಾವನ್ನಪ್ಪಿದ ಘಟನೆ ಪಳ್ಳಿಕೆರೆಯಲ್ಲಿ ಶನಿವಾರ ನಡೆದಿದೆ. ಮೃತರನ್ನುಕಲ್ಪಟ್ಟ ಕಾವುಮಂದದ ಐಶ್ವರ್ಯ ಜೋಸೆಫ್ (30) ಎಂದು ಗುರುತಿಸಲಾಗಿದೆ. ಪಳ್ಳಿಕೆರೆ ಮಾಸ್ತಿ ಗುಡ್ಡೆ ಯ ರೈಲ್ವೆ ಹಳಿ ಸಮೀಪ ಮೃತ ದೇಹಪತ್ತೆ ಯಾಗಿದೆ. ರಾತ್ರಿ ಘಟನೆ ನಡೆದಿರಬಹುದು ಎಂದು ಶಂಕಿಸಲಾಗಿದೆ. ಕೋಜಿಕ್ಕೊಡ್ ನ ಖಾಸಗಿ ಸಂಸ್ಥೆಯಲ್ಲಿ ಉದ್ಯೋಗ ನಿರ್ವಹಿಸುತ್ತಿದ್ದಳು. ಉದ್ಯೋಗ ದ ನಿಮಿತ್ತ ನೇತ್ರಾವತಿ ರೈಲಿನಲ್ಲಿ ಮಂಗಳೂರಿಗೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ ಎನ್ನಲಾಗಿದೆ.
ಮಂಗಳೂರು, ಜ. 5 : ಕರ್ನಾಟಕದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನಲೆ, ದ. ಕ. ಜಿಲ್ಲೆಯಲ್ಲಿ ಪ್ರತೀ ಮಂಗಳವಾರ ಮತ್ತು ಶುಕ್ರವಾರ ಬೆಳಗ್ಗೆ 9ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಕೋರ್ಬಿವ್ಯಾಕ್ಸ್ ಕೋವಿಡ್-19 ಲಸಿಕೆಯನ್ನು ನೀಡಲಾಗುತ್ತದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ತಿಳಿಸಿದ್ದಾರೆ. .ಜಿಲ್ಲಾ ವೆನ್ಲಾಕ್ ಆಸ್ಪತ್ರೆ, ತಾಲೂಕು ಆಸ್ಪತ್ರೆ ಬಂಟ್ವಾಳ, ಬೆಳ್ತಂಗಡಿ, ಪುತ್ತೂರು ಹಾಗೂ ಸುಳ್ಯ ಇಲ್ಲಿ ಕೋರ್ಬಿವ್ಯಾಕ್ಸ್ ಲಸಿಕೆ ಲಭ್ಯವಿದ್ದು, ಸಾರ್ವಜನಿಕರು https://www.cowin.gov.in/ ಮೂಲಕ ನೋಂದಾಯಿಸುವಂತೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಈ ಲಸಿಕೆಯನ್ನು ಕೋವಿಶೀಲ್ಡ್ ಹಾಗೂ ಕೋವ್ಯಾಕ್ಸಿನ್ ಲಸಿಕೆಯ ಎರಡನೇಯ ಡೋಸ್ ಪಡೆದು 6 ತಿಂಗಳು ಅಥವಾ 26 ವಾರ ಪೂರೈಸಿದವರು ಹಾಗೂ 18 ವರ್ಷ ಮೇಲ್ಪಟ್ಟವರು, ಮುನ್ನೆಚ್ಚರಿಕೆ ಡೋಸ್ ಪಡೆಯದ 60 ವರ್ಷ ಮೇಲ್ಪಟ್ಟವರು, ಕಡಿಮೆ ರೋಗ ನಿರೋಧಕ ಶಕ್ತಿ ಉಳ್ಳವರು,ಮತ್ತು ಆರೋಗ್ಯ ಕಾರ್ಯಕರ್ತರು ಕೋರ್ಬಿವ್ಯಾಕ್ಸ್ ಲಸಿಕೆಯನ್ನು ಪಡೆಯಬಹುದಾಗಿದೆ.












