Subscribe to Updates
Get the latest creative news from FooBar about art, design and business.
Author: admin
ದಿಸ್ಪುರ, ಜ. 03 : ಬಸ್ ಮತ್ತು ಟ್ರಕ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ 14 ಮಂದಿ ಸಾವನ್ನಪ್ಪಿದ್ದು, 27 ಮಂದಿ ಗಾಯಗೊಂಡಿರುವ ಘಟನೆ ಅಸ್ಸಾಂನ ದೇರ್ಗಾಂವ್ನಲ್ಲಿ ಬುಧವಾರ ನಡೆದಿದೆ. ತಿನ್ಸುಕಿಯಾದ ತಿಲಿಂಗ ಮಂದಿರಕ್ಕೆ 45 ಮಂದಿ ಪ್ರವಾಸಿಗರು ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದರು. ದೇರ್ಗಾಂವ್ನಲ್ಲಿ ಈ ಪ್ರವಾಸಿ ಬಸ್ ಟ್ರಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಈ ಅವಘಡ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆ ಬಗ್ಗೆ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
ಟೋಕಿಯೊ, ಜ. 02 : ಜಪಾನ್ನಲ್ಲಿ ಒಂದೇ ದಿನ 155 ಬಾರಿ ಭೂಕಂಪ ಸಂಭವಿಸಿದ ಪರಿಣಾಮ 12 ಮಂದಿ ಮೃತಪಟ್ಟಿರುವುದಾಗಿ ವರದಿಯಾಗಿದೆ. ಸೋಮವಾರದ 7.6 ಮತ್ತು 6 ತೀವ್ರತೆಯ ಎರಡು ಪ್ರಬಲ ಭೂಕಂಪಗಳೂ ಸಂಭವಿಸಿದ್ದು, ಭೂಕಂಪನದಿಂದ ಕನಿಷ್ಠ 12 ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿ ತಿಳಿಸಿದೆ. ಜಪಾನ್ನಲ್ಲಿ ಭೂಕಂಪದಿಂದಾಗಿ ಕಟ್ಟಡ ಕುಸಿತಗಳು ಮತ್ತು ಬೆಂಕಿ ಸೇರಿದಂತೆ ಬಹಳ ವ್ಯಾಪಕ ಹಾನಿಯಾಗಿದೆ ಎಂದು ವಿಪತ್ತು ನಿರ್ವಹಣಾ ಸಭೆಯ ಬಳಿಕ ಪ್ರಧಾನ ಮಂತ್ರಿ ಫ್ಯೂಮಿಯೊ ಕಿಶಿಡಾ ತಿಳಿಸಿದ್ದಾರೆ.
ಬಂಟ್ವಾಳ, ಜ. 01 : ಬೈಕ್ ಅಪಘಾತದಲ್ಲಿ ರಂಗಭೂಮಿ ಕಲಾವಿದ ಸಾವನ್ನಪ್ಪಿದ ಘಟನೆ ಪುಂಜಾಲಕಟ್ಟೆ ಎಂಬಲ್ಲಿ ನಡೆದಿದೆ. ಮೃತರನ್ನು ಬಂಟ್ವಾಳ ತಾಲೂಕಿನ ದೇವಶ್ಯಪಡೂರು ಗ್ರಾಮದ ಮರದೊಟ್ಟು ನಿವಾಸಿ ಗೌತಮ್ (26) ಎಂದು ಗುರುತಿಸಲಾಗಿದೆ. ಮೂಡುಬಿದಿರೆ ಪಿಂಗಾರ ಕಲಾವಿದರ ತಂಡದ ಕಲಾವಿದರಾಗಿದ್ದ ಗೌತಮ್ ಅವರು ಡಿ.30ರಂದು ಬೆಳಗ್ಗೆ3 ಗಂಟೆ ಸುಮಾರಿಗೆ ಬೆಳುವಾಯಿಯಲ್ಲಿ ನಾಟಕ ಮುಗಿಸಿ ಮನೆಗೆ ತೆರಳುತ್ತಿದ್ದ ವೇಳೆ ಸ್ಕೂಟರ್ ಅವರ ಮನೆ ಸಮೀಪದ ಮರಕ್ಕೆ ಡಿಕ್ಕಿ ಹೊಡೆದು ರಸ್ತೆಗೆ ಬಿದ್ದು ತಲೆಗೆ ಗಾಯವಾಗಿದೆ. ಈ ಘಟನೆ ಬೆಳಗ್ಗೆಯಷ್ಟೆ ಬೆಳಕಿಗೆ ಬಂದಿದ್ದು, ಅವರನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಯಿ ತಾರೂ, ಅವರು ಅದಾಗಲೇ ಸಾವನ್ನಪ್ಪಿದ್ದರು ಎನ್ನಲಾಗಿದೆ.
ಮಹಾರಾಷ್ಟ್ರ ಡಿ.31 : ಗ್ಲೌಸ್ ತಯಾರಿಸುವ ಫ್ಯಾಕ್ಟರಿಯಲ್ಲಿ ಅಗ್ನಿ ದುರಂತ ಸಂಭವಿಸಿ ಆರು ಕಾರ್ಮಿಕರು ಮೃತಪಟ್ಟ ಘಟನೆ ಮಹಾರಾಷ್ಟ್ರದ ಸಂಭಾಜಿ ನಗರದಲ್ಲಿ ನಡೆದಿದೆ. ಭಾನುವಾರ ಬೆಳಗ್ಗೆ 2 ಗಂಟೆ ಸುಮಾರಿಗೆ ಅಗ್ನಿ ದುರಂತ ಸಂಭವಿಸಿದ್ದು, ಕಾರ್ಖಾನೆಯ ಒಳಗಿದ್ದ ಆರು ಜನ ಸಜೀವ ದಹನಗೊಂಡಿದ್ದಾರೆ ಎನ್ನಲಾಗಿದೆ. ಸ್ಥಳಕ್ಕೆ ಆಗಮಿಸಿರುವ ಅಗ್ನಿಶಾಮಕ ದಳದ ಸಿಬ್ಬಂದಿಯು ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಬೆಂಕಿಯು ಇಡೀ ಕಾರ್ಖಾನೆಗೆ ವ್ಯಾಪಿಸಿದ ಕಾರಣ ಬೆಂಕಿ ನಂದಿಸುವಷ್ಟರಲ್ಲಿಯೇ ಆರು ಕಾರ್ಮಿಕರು ಮೃತಪಟ್ಟಿದ್ದರು ಎನ್ನಲಾಗಿದೆ. ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಸಂಪೂರ್ಣವಾಗಿ ಅಗ್ನಿ ನಂದಿಸಿದ ಬಳಿಕವೇ ಎಷ್ಟು ಜನ ಮೃತಪಟ್ಟಿದ್ದಾರೆ ಎಂಬುದು ಗೊತ್ತಾಗಲಿದೆ ಎಂದು ಪೊಲೀಸ್ ಮೂಲಗಳು ಮಾಹಿತಿ ನೀಡಿವೆ.
ಬೆಂಗಳೂರು, ಡಿ. 30 : ಕರ್ನಾಟಕದಲ್ಲಿ ಕೋವಿಡ್ ನ ಜೆಎನ್1 ರೂಪಾಂತರಿ ಸೋಂಕು ಹೆಚ್ಚಗುತ್ತಿದ್ದು, ಈ ನಿಟ್ಟಿನಲ್ಲಿ ಜ.2 ರಿಂದ ರಾಜ್ಯದಲ್ಲಿ ಮತ್ತೆ ಲಸಿಕೆ ನೀಡಲು ಸರ್ಕಾರ ಮುಂದಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಕರ್ನಾಟಕ ರಾಜ್ಯದಲ್ಲಿ ಕೊರೊನಾ ಸೋಂಕಿನಿಂದ ಸಾವು ಸಂಭವಿಸುತ್ತಿದ್ದು, ಇದರಿಂದ ಆರೋಗ್ಯ ಇಲಾಖೆ ವ್ಯಾಕ್ಸಿನ್ ಮೊರೆ ಹೋಗಿದೆ. ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ಮತ್ತೆ ವ್ಯಾಕ್ಸಿನ್ ಡ್ರೈವ್ ಆರಂಭವಾಗಲಿದೆ.
ನವದೆಹಲಿ, ಡಿ. 29 : ಜೆಡಿಯು (JDU) ಪಕ್ಷದ ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ಬಿಹಾರದ ಸಿಎಂ ನಿತೀಶ್ ಕುಮಾರ್ ಶುಕ್ರವಾರ ನೇಮಕಗೊಂಡಿದ್ದಾರೆ. ಜೆಡಿಯು ಅಧ್ಯಕ್ಷ ಸ್ಥಾನಕ್ಕೆ ರಾಜೀವ್ ರಂಜನ್ ಸಿಂಗ್, ಲಾಲನ್ ಸಿಂಗ್ ಎಂದು ಜನಪ್ರಿಯವಾಗಿ ಕರೆಯಲ್ಪಡುವ ರಾಜೀವ್ ರಂಜನ್ ಸಿಂಗ್ ರಾಜೀನಾಮೆ ನೀಡಿದ ಬೆನ್ನಲ್ಲೇ ಜೆಡಿಯು ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ನಿತೀಶ್ ಕುಮಾರ್ ನೇಮಕಗೊಂಡಿದ್ದಾರೆ.
ಬೆಂಗಳೂರು, ಡಿ. 28: ನಿಗದಿತ ಕಿ.ಮೀ. ಗಳಷ್ಟು ಸಂಚರಿಸಿದ ಬಳಿಕ ಸಾಮರ್ಥ್ಯ ಕಳೆದುಕೊಂಡ ಕೆಎಸ್ ಆರ್ ಸಿ ಬಸ್ ಗಳನ್ನು ಗುಜರಿಗೆ ಹಾಕಬೇಕು. ಗುಜರಿಗೆ ಹಾಕಿದ ಬಸ್ಗಳನ್ನು ಮತ್ತೆ ಸಂಚಾರಕ್ಕೆ ಬಳಸಲು ಅನುಮತಿ ನೀಡುವಂತಿಲ್ಲ ಎಂದು ಹೈಕೋರ್ಟ್ ಆದೇಶ ಹೊರಡಿಸಿದೆ. ಸಾಮರ್ಥ್ಯ ಕಳೆದುಕೊಂಡು ಗುಜರಿಗೆ ಸೇರಬೇಕಾಗಿದ್ದ ಕೆಎಸ್ ಆರ್ ಟಿಸಿ ಬಸ್ ನಿಂದ ಅಪಘಾತ ಉಂಟಾಗಿ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿದ ಪ್ರಕರಣವೊಂದರಲ್ಲಿ ನ್ಯಾ. ರಾಮಚಂದ್ರ ಡಿ.ಹುದ್ದಾರ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಕುರಿತಂತೆ ಮಹತ್ವದ ಆದೇಶ ಹೊರಡಿಸಲಾಗಿದೆ. ಬಸ್ಗಳು ಸಂಚಾರಕ್ಕೆ ಅರ್ಹವಾಗಿರುವ ಬಗ್ಗೆ ಪ್ರತಿ ವರ್ಷವೂ ಸಂಬಂಧಿಸಿದ ಪ್ರಾದೇಶಿಕ ಸಾರಿಗೆ ಅಧಿಕಾರಿಯಿಂದ ಸುಸ್ಥಿತಿ ದೃಢೀಕರಣ ಪತ್ರ ಪಡೆಯಬೇಕು. ಆರ್ಟಿಓ ವತಿಯಿಂದ ದೃಢೀಕರಣ ಪತ್ರ ಪಡೆದ ಬಸ್ಗಳಿಗೆ ಮಾತ್ರವೇ ರಸ್ತೆಯಲ್ಲಿ ಸಂಚರಿಸಲು ಅನುಮತಿ ನೀಡಬೇಕು ಎಂದು ನ್ಯಾಯಪೀಠ ಹೇಳಿದೆ.
ಚೆನ್ನೈ, ಡಿ. 27 : ರಸಗೊಬ್ಬರ ತಯಾರಿಕಾ ಘಟಕದ ಪೈಪ್ ನಲ್ಲಿ ಅಮೋನಿಯಾ ಸೋರಿಕೆಯಾದ ಪರಿಣಾಮ 6 ಜನರು ಅಸ್ವಸ್ಥಗೊಂಡ ಘಟನೆ ತಮಿಳುನಾಡು ಸಮೀಪದ ಎನ್ನೋ ರ್ ನಲ್ಲಿ ಮಂಗಳವಾರ ರಾತ್ರಿ ನಡೆದಿದೆ. ಕೋರಮಂಡಲ್ ಇಂಟರ್ ನ್ಯಾಷನಲ್ ಲಿಮಿಟೆಡ್ ನ ಸಮುದ್ರ ಸಮೀಪ ಹಾದು ಹೋಗಿದ್ದ ಪೈಪ್ ನಿಂದ ಅಮೋನಿಯಾ ಗ್ಯಾಸ್ ಸೋರಿಕೆಯಾದ ಪರಿಣಾಮ 6 ಮಂದಿ ಅಸ್ವಸ್ಥಗೊಂ ಡಿದ್ದಾರೆ ಎಂದು ಹೇಳಲಾಗಿದೆ.ಅಸ್ವಸ್ಥಗೊಂಡ ಆರು ಮಂದಿ ಚಿಕಿತ್ಸೆ ಪಡೆದು ಬುಧವಾರ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ವರದಿಯಾಗಿದೆ. ಸ್ಥಳೀಯರು ನೀಡಿದ ದೂರನ್ನು ಆಲಿಸಿದ ಬಳಿಕ ಅಮೋನಿಯಾ ಗ್ಯಾಸ್ ಪೈಪ್ ಲೈನ್ ನಲ್ಲಿ ಸೋರಿಕೆಯಾಗುತ್ತಿರುವುದನ್ನು ಪತ್ತೆ ಹಚ್ಚಿ, ಅದನ್ನು ಸರಿಪಡಿಸಲಾಗಿದೆ ಎಂದು ತಮಿಳುನಾಡು ಪರಿಸರ ನಿಯಂತ್ರಣ ಮಂಡಳಿ ಹೇಳಿದೆ. ತುರ್ತು ಸೇವೆಗಾಗಿ ಸ್ಥಳದಲ್ಲಿ ಮೆಡಿಕಲ್ ಮತ್ತು ಪೊಲೀಸ್ ಸಿಬಂದಿಗಳನ್ನು ನಿಯೋಜಿಸಲಾಗಿದೆ ಎಂದು ಆವಡಿ ಪೊಲೀಸ್ ಕಮಿಷನರ್ ವಿಜಯ್ ಕುಮಾರ್ ಅವರು ಎಕ್ಸ್ ನಲ್ಲಿ ಮಾಹಿತಿ ನೀಡಿದ್ದಾರೆ.
ಹಿರಿಯಡ್ಕ, ಡಿ. 26 : ಈಜಲು ತೆರಳಿದ್ದ ಯುವಕನೊಬ್ಬ ಹೊಳೆಯ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಬೈರಂಪಳ್ಳಿ ಗ್ರಾಮದ ಕೆ.ಸಿ.ರೋಡ್ನ ಪಟ್ಟಿಬಾವು ಹೊಳೆಯಲ್ಲಿ ನಡೆದಿದೆ. ಮೃತರನ್ನು ಅಜಯ್ (21) ಎಂದು ಗುರುತಿಸಲಾಗಿದೆ. ರವಿವಾರದಂದು ವಾಲಿಬಾಲ್ ಆಟ ಆಡಿದ ಬಳಿಕ ಅಜಯ್ ತಾನು ಈಜಿಕೊಂಡು ನದಿಯ ಇನ್ನೊಂದು ದಡಕ್ಕೆ ಹೋಗುವುದಾಗಿ ಸ್ನೇಹಿತರತ್ತಿರ ಹೇಳಿ ಹೊಳೆಗೆ ಇಳಿದಿದ್ದು, ಮಧ್ಯದಲ್ಲಿ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಹಿರಿಯಡ್ಕ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪುರ, ಡಿ.22 : ಏಳನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಬಾವಿಗೆ ಹಾರಿ ಆತ್ಮಹತ್ಯೆಗೆ ಮಾಡಿಕೊಂಡ ಘಟನೆ ಬುಧವಾರ ಕುಂದಾಪುರದ ಕಟ್ಕೆರೆ ಎಂಬಲ್ಲಿ ನಡೆದಿದೆ. ರಾಜಶೇಖರ ಎನ್ನುವರ ಪುತ್ರಿ ರಿಷಿತಾ (13) ಮೃತ ವಿದ್ಯಾರ್ಥಿನಿ. ರಿಷಿತಾ ಡಿ.20 ರಂದು ಸಂಜೆ ಶಾಲೆಯಿಂದ ಬಂದವಳು ಮನೆಯ ಸಮೀಪದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ವರದಿಯಾಗಿದೆ. ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.












