Author: admin

ಕುಂದಾಪುರ, ಡಿ.22 : ಏಳನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಬಾವಿಗೆ ಹಾರಿ ಆತ್ಮಹತ್ಯೆಗೆ ಮಾಡಿಕೊಂಡ ಘಟನೆ ಬುಧವಾರ ಕುಂದಾಪುರದ ಕಟ್ಕೆರೆ ಎಂಬಲ್ಲಿ ನಡೆದಿದೆ. ರಾಜಶೇಖರ ಎನ್ನುವರ ಪುತ್ರಿ ರಿಷಿತಾ (13) ಮೃತ ವಿದ್ಯಾರ್ಥಿನಿ. ರಿಷಿತಾ ಡಿ.20 ರಂದು ಸಂಜೆ ಶಾಲೆಯಿಂದ ಬಂದವಳು ಮನೆಯ ಸಮೀಪದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ವರದಿಯಾಗಿದೆ. ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು, ಡಿ. 21 : ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಆತಂಕ ಹೆಚ್ಚಗುತ್ತಿದೆ. ರಾಜ್ಯದಲ್ಲಿ 22 ಮಂದಿಯಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿದ್ದು, ಒಬ್ಬ ವೃದ್ಧ ರು  ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದಾರೆ. ಇಲ್ಲಿಯತನಕ ಒಟ್ಟುಸಾವಿನ ಸಂಖ್ಯೆ 3ಕ್ಕೆ ಏರಿಕೆಯಾಗಿದೆ. ಪ್ರಸ್ತುತ ರಾಜ್ಯದಲ್ಲಿ 92 ಸಕ್ರಿಯ ಪ್ರಕರಣಗಳಿವೆ. 20 ಸೋಂಕಿತರು ಆಸ್ಪತ್ರೆಯಲ್ಲಿದ್ದು, ಈ ಪೈಕಿ 7 ಜನರು ಐಸಿಯುನಲ್ಲಿದ್ದಾರೆ. ಉಳಿದ 72 ಜನರು ಹೋಂ ಐಸೋಲೇಷನ್ ನಲ್ಲಿದ್ದಾರೆ. ಈಗಾಗಲೇ 5 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

Read More

ಮಣಿಪಾಲ, ಡಿ. 20 : ಮಣಿಪಾಲ ಫಾರ್ಮಸ್ಯುಟಿಕಲ್ ಸೈನ್ಸ್ ಕಾಲೇಜಿನ ಪ್ರೊಫೆಸರ್ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಕಾಲೇಜಿನಲ್ಲಿ ಮಂಗಳವಾರ ನಡೆದಿದೆ. ಮೃತರನ್ನು ಮಣಿಪಾಲ ಕಾಲೇಜಿನ ಪ್ರೊ. ಡಾ.ಅಲೆಕ್ಸ್ ಜೋಸೆಫ್(47) ಎಂದು ಗುರುತಿಸಲಾಗಿದೆ. ಕಾಲೇಜಿನಲ್ಲಿರುವ ವೇಳೆ ಡಾ.ಅಲೆಕ್ಸ್ ಜೋಸೆಫ್ ಅವರಿಗೆ ವಿಪರೀತ ಎದೆ ನೋವು ಕಾಣಿಸಿಕೊಂಡಿದ್ದು, ತಕ್ಷಣ ಅವರನ್ನು ಮಣಿಪಾಲ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಅವರನ್ನು ಪರೀಕ್ಷಿಸಿದ ವೈದ್ಯರು ಸಾವನ್ನಪ್ಪಿರುವುದಾಗಿ ತಿಳಿಸಿದ್ದಾರೆ.

Read More

ಬೀಜಿಂಗ್ , ಡಿ. 20 : ಚೀನಾದ ಗನ್ಸು- ಕಿಂಗ್ಹೈ ಗಡಿ ಪ್ರದೇಶದಲ್ಲಿ ಸೋಮವಾರ ರಾತ್ರಿ ಸಂಭವಿಸಿದ ಪ್ರಬಲ ಭೂಕಂಪದಲ್ಲಿ ಕನಿಷ್ಠ 111 ಮಂದಿ ಮೃತಪಟ್ಟಿದ್ದು, 400ಕ್ಕೂ ಹೆಚ್ಚುಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ವಾಯುವ್ಯ ಚೀನಾದ ಗನ್ಸು ಪ್ರಾಂತ್ಯದಲ್ಲಿ 6.2 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ. ಇದರಿಂದ ಕಟ್ಟಡಗಳು ನೆಲಸಮಗೊಂಡಿದ್ದು ಅವಶೇಷಗಳಡಿ ಹಲವು ಜನರು ಸಿಲುಕಿದ್ದು ಅವರನ್ನು ರಕ್ಷಣಾ ತಂಡದಿಂದ ಭರದ ಕಾರ್ಯಾ ಚರಣೆ ನಡೆಸುತ್ತಿದ್ದು, ಇದುವರೆಗೂ ಸುಮಾರು ನೂರಕ್ಕೂ ಅಧಿಕ ಜನರು ಸಾವನ್ನಪಿರುವ ಕುರಿತು ವರದಿಯಾಗಿದೆ.ಅಲ್ಲದೆ ರಕ್ಷಣಾ ಕಾರ್ಯಾಚರಣೆ ಇನ್ನೂ ಮುಂದುವರೆದಿದ್ದು ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

Read More

ರಾಮನಗರ,ಡಿ. 18 : ಬೆಳಗಿನ ಜಾವ ತೋಟಕ್ಕೆ ನೀರು ಬಿಡುಲು ಹೋದ ರೈತನನ್ನು ಕಾಡಾನೆಯೊಂದು ತುಳಿದು ಬಲಿ ಪಡೆದುಕೊಂಡಿರುವ ಘಟನೆ ರಾಮನಗರ ಜಿಲ್ಲೆಯ ಹಾರೋಹಳ್ಳಿ ತಾಲೂಕಿನಿ ಹಳ್ಳಿಕೆರೆದೊಡ್ಡಿಯಲ್ಲಿ ನಡೆದಿದೆ. ಮೃತರನ್ನು 64 ವರ್ಷದ ಉರ್ಫ್ ತಿಮ್ಮಪ್ಪ ಎಂದು ಗುರುತಿಸಲಾಗಿದೆ. ಐದು ಗಂಟೆಗೆ ನೀರು ಬಿಡಲು ತೆರಳಿದ್ದ ತಂದೆ, ಇನ್ನೂ ಯಾಕೆ ಮನೆಗೆ ಬಂದಿಲ್ಲ ಎಂದು ತಿಮ್ಮಪ್ಪ ಅವರ ಮಗ ತೋಟಕ್ಕೆ ನೋಡಲು ಹೋದಾಗ ತೋಟದಲ್ಲಿ  ಕಾಡಾನೆಯ  ತುಳಿತಕ್ಕೆ ಒಳಗಾಗಿ ಸಾವನಪ್ಪಿದ ತಂದೆ ಶವ ಬಿದ್ದಿದೆ ಎನ್ನಲಾಗಿದೆ.

Read More

ಹೊಸದಿಲ್ಲಿ, ಡಿ .17 : ಕೊರೊನಾ ಸೋಂಕು ಮತ್ತೆ ದೇಶದಲ್ಲಿ ಹೆಚ್ಚುತ್ತಿದ್ದು,ವಿಶ್ವದ ಹಲವೆಡೆ ವ್ಯಾಪಿಸಿರುವ ಕೋವಿಡನ ಹೊಸ ಮಾದರಿಯ ತಳಿ ಜೆಎನ್.1 ಇದೀಗ ಭಾರತಕ್ಕೂ ಕಾಲಿಟ್ಟಿದೆ. ಅತ್ಯಂತ ವೇಗವಾಗಿ ಹರಡಬಲ್ಲ ಕೊರೊನಾ ಸೋಂಕಿನ ಉಪತಳಿ ಜೆಎನ್.1 ದೇಶದಲ್ಲಿ ಮೊದಲ ಬಾರಿಗೆ ಕೇರಳದಲ್ಲಿ ಪತ್ತೆಯಾಗಿದೆ. ಇದು ದೇಶದಲ್ಲಿ ಪತ್ತೆಯಾದ ಮೊದಲ ಪ್ರಕರಣವಾಗಿದೆ. ಭಾರತ ಸೇರಿ ಜಗತ್ತಿನೆಲ್ಲೆಡೆ ಮತ್ತೊಮ್ಮೆ ಕೊರೊನಾ ವಕ್ಕರಿಸುವಂತಿದೆ. ಮತ್ತೆ ಕೊರೊನಾ ಕೇಸ್ಗಳ ಸಂಖ್ಯೆ ಹೆಚ್ಚುತ್ತಿದೆ. ಅಮೆರಿಕಾ, ಬ್ರಿಟನ್, ಚೀನಾ, ಫ್ರಾನ್ಸ್ ದೇಶಗಳಲ್ಲಿ ಕಂಡುಬಂದಿದ್ದ ಕೊರೊನಾದ ಉಪತಳಿ ಜೆಎನ್.1 ಭಾರತದಲ್ಲೂ ಇದೀಗ ಕಂಡುಬಂದಿದೆ. ಕೇರಳದಲ್ಲಿ ಸೋಂಕು ಪತ್ತೆಯಾಗುತ್ತಿದ್ದಂತೆ ಕರ್ನಾಟಕ ರಾಜ್ಯ ದಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಜೆಎನ್.1 ತಳಿ ವೇಗವಾಗಿ ವ್ಯಾಪಿಸುತ್ತದೆ. ಆದರೂ ಸೋಂಕಿನ ತೀವ್ರತೆಯ ಬಗ್ಗೆ ಇನ್ನೂ ಮಾಹಿತಿ ಲಭ್ಯಿಸಿಲ್ಲ ಎಂದು ಅಮೆರಿಕದ ರೋಗ ನಿಯಂತ್ರಣ ಮತ್ತು ತಡೆ ಕೇಂದ್ರ(ಸಿಡಿಸಿ) ಮಾಹಿತಿ ನೀಡಿದೆ.

Read More

ತಿರುವನಂತಪುರಂ, ಡಿ. 16 : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಕೆ‌ಎಸ್‌ಆರ್‌ಟಿಸಿ ಹೆಸರು (ಟ್ರೇಡ್ ಮಾರ್ಕ್ ) ಬಳಕೆಗೆ ಯಾವುದೇ ಅಭ್ಯಂತರವಿಲ್ಲ ಎಂದು ಮದ್ರಾಸ್ ಹೈಕೋರ್ಟ್ ಹೇಳಿದೆ. ಕೇರಳ ರಾಜ್ಯ ಆರ್ ಟಿಸಿ ಸಲ್ಲಿಸಿದ ಮನವಿಯನ್ನು ಮದ್ರಾಸ್ ಹೈಕೋರ್ಟ್ ವಜಾಗೊಳಿಸಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಕೆಎಸ್ ಆರ್ ಟಿಸಿ ಹೆಸರು ಬಳಸಬಾರದು, ಕೇರಳ ರಾಜ್ಯಕ್ಕೆ ಮಾತ್ರ ಕೆಎಸ್ ಆರ್ ಟಿಸಿ ಹೆಸರು ಬಳಸಲು ಅನುಮತಿ ನೀಡಬೇಕು ಎಂದು ಕೇರಳ ರಾಜ್ಯ ರಸ್ತೆ ಸಾರಿಗೆ ನಿಗಮ ಮದ್ರಾಸ್ ಹೈಕೋರ್ಟ್ ಗೆ ಅರ್ಜಿಯನ್ನು ಸಲ್ಲಿಸಿತ್ತು. ಇದೀಗ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು ಕೆಎಸ್ ಆರ್ ಟಿಸಿ ಹೆಸರು ಬಳಸಬಹುದು. ಇದಕ್ಕೆ ಯಾವುದೇ ರೀತಿಯ ಅಭ್ಯಂತರವಿಲ್ಲ ಎಂದು ಮದ್ರಾಸ್ ಹೈಕೋರ್ಟ್ ಸ್ಪಷ್ಟನೆ ನೀಡಿದೆ.

Read More

ಜೈಪುರ್, ಡಿ. 15 : ರಾಜಸ್ಥಾನದ ನೂತನ ಮುಖ್ಯಮಂತ್ರಿಯಾಗಿ ಭಜನ್ ಲಾಲ್ ಶರ್ಮಾ ಅವರು ಇಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ದಿಯಾ ಕುಮಾರಿ ಮತ್ತು ಪ್ರೇಮ್ ಚಂದ್ ಬೈರ್ವಾ ಅವರು ರಾಜ್ಯದ ಉಪ ಮುಖ್ಯಮಂತ್ರಿಯನ್ನಾಗಿ ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ. ದಿಯಾ ಕುಮಾರಿ ಮತ್ತು ಪ್ರೇಮ್ ಚಂದ್ ಬೈರ್ವಾಯವರಿಗೆ ರಾಜ್ಯಪಾಲ ಕಲ್ರಾಜ್ ಮಿಶ್ರಾ ಅವರು ಪ್ರಮಾಣ ವಚನ ಬೋಧಿಸಿದ್ದಾರೆ. ಪ್ರಮಾಣವಚನ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಸೇರಿದಂತೆ ಹಲವು ಕೇಂದ್ರ ಸಚಿವರು ಭಾಗಿಯಾಗಿದ್ದರು.

Read More

ಪುತ್ತೂರು, ಡಿ 14 : ಹೈದರಾಬಾದ್ ನಲ್ಲಿ ಕೆಲಸಕ್ಕಿದ್ದ ಯುವಕ ಊರಿಗೆ ಬಂದಿದ್ದ ಸಮಯದಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಂಪ್ಯ ಬಳಿ ನಡೆದಿದೆ. ಮೃತರನ್ನು ಕಲ್ಲರ್ಪೆ ನಿವಾಸಿ ಶ್ರೀಧರ್ ಆಚಾರ್ಯ ಸಂಪ್ಯ ಇವರ ಪುತ್ರ ಭರತ್ ಕಲ್ಲರ್ಪೆ(24) ಎಂದು ಗುರುತಿಸಲಾಗಿದೆ. ಭರತ್ ಕಲ್ಲರ್ಪೆ ಅವರು ಮನೆಯ ಸಮೀಪದ ತಮ್ಮ ತೋಟದ ಮರವೊಂದರಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ. ಭರತ್ ಕಲ್ಲರ್ಪೆ ಅವರು ಹೈದರಾಬಾದ್ ನ ಖಾಸಗಿ ಕಂಪೆನಿಯೊಂದರಲ್ಲಿ ಉದ್ಯೋಗದಲ್ಲಿದ್ದು ತಿಂಗಳ ಹಿಂದೆಯಷ್ಟೇ ಊರಿಗೆ ಬಂದಿದ್ದರು ಎನ್ನಲಾಗಿದೆ.

Read More

ಮಂಗಳೂರು, ಡಿ. 13: ಈಜುಕೊಳದಲ್ಲಿ ಮುಳುಗಿ ವ್ಯಕ್ತಿಯೊಬ್ಬ ಮೃತಪಟ್ಟಿರುವ ಘಟನೆ ಬರ್ಕೆ ಠಾಣಾ ವ್ಯಾಪ್ತಿಯ ಮಂಗಳ ಈಜು ಕೊಳದಲ್ಲಿ ನಡೆದಿದೆ.ಮೃತಪಟ್ಟ ವ್ಯಕ್ತಿಯನ್ನು ಬಿಹಾರ ಮೂಲದ ಅಭಿಷೇಕ್(35) ಎಂದು ಗುರುತಿಸಲಾಗಿದೆ. ಅಭಿಷೇಕ್ ಅವರು ಸಂಜೆ 4.30ರ ವೇಳೆಗೆ ಟಿಕೆಟ್ ಪಡೆದುಕೊಂಡು ನೀರಿಗೆ ಇಳಿದಿದ್ದಾರೆ. ಸುಮಾರು 15 ನಿಮಿಷದ ಬಳಿಕ ನೀರಿನಲ್ಲಿ ಮುಳುಗಿದ್ದಾರೆ. . ಈ ವೇಳೆ ಈಜುಕೊಳದಲ್ಲಿ 30 ರಿಂದ 40 ಜನರು ಈಜುತ್ತಿದ್ದರು ಎನ್ನಲಾಗಿದೆ. ಹುಡುಗನೋರ್ವ ಗಮನಿಸಿ ಲೈಫ್ ಗಾರ್ಡ್ಗ ಗಳಿಗೆ ಮಾಹಿತಿ ನೀಡಿದ್ದಾನೆ ಎನ್ನಲಾಗಿದೆ. 15 ಫೀಟ್ ಆಳದಲ್ಲಿ ರಾಜೇಂದ್ರ ಹಾಗು ಪುಂಡಲಿಕ್ ನೀರಿಗೆ ಜಿಗಿದು ಅಭಿಷೇಕನನ್ನು  ಮೇಲೆ ತಂದು ಪ್ರಥಮ ಚಿಕಿತ್ಸೆ ನೀಡಲು ಪ್ರಯತ್ನಿಸಿದರೂ ಯಾವುದೇ ಪ್ರತಿಕ್ರಿಯೆ ಇರಲಿಲ್ಲ . ಬಳಿಕ ಆಸ್ಪತ್ರೆಗೆ ಕರೆದೊಯ್ದರು. ಆದರೆ ಅಷ್ಟರಲ್ಲಿ ಅವರು ಕೊನೆಯುಸಿರೆಳೆದಿದ್ದರು ಎಂದು ಪೊಲೀಸರು ಹೇಳಿದ್ದಾರೆ.

Read More