Subscribe to Updates
Get the latest creative news from FooBar about art, design and business.
Author: admin
ಹೆಬ್ರಿ: ಕಳೆದ ಕೆಲವು ದಿನಗಳಿಂದ ನಿರಂತರ ಸುರಿಯುತ್ತಿರುವ ಮಳೆಯಿಂದಾಗಿ ಆಗುಂಬೆ ಘಾಟಿಯ ಮೂರು ಮತ್ತು ನಾಲ್ಕನೇ ಸುತ್ತಿನ ಮಧ್ಯದಲ್ಲಿ ಭೂಕುಸಿತವಾಗಿದೆ. ಭಾರೀ ಪ್ರಮಾಣದ ಮಣ್ಣು ಮತ್ತು ಮರ ರಸ್ತೆಗೆ ಬಿದ್ದಿದೆ, ಇದರಿಂದಾಗಿ ಸಂಚಾರ ಸ್ಥಗಿತವಾಗಿದೆ. ತಡರಾತ್ರಿ ಭೂಕುಸಿತ ಸಂಭವಿಸಿದ್ದು, ರಾತ್ರಿಯಿಂದಲೇ ವಾಹನ ಸಂಚಾರ ಬಂದ್ ಆಗಿದ್ದು, ಶಿವಮೊಗ್ಗ ಆಗುಂಬೆಯಿಂದ ಉಡುಪಿಗೆ ಬರುವ ವಾಹನಗಳು ಸಿದ್ಧಾಪುರ ಮೂಲಕ ಸಂಚರಿಸುತ್ತಿವೆ. ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಮಣ್ಣು ತೆರವು ಕಾರ್ಯಾಚರಣೆ ನಡೆಯುತ್ತಿದೆ.
ಕೊಲಂಬೋ: ಶ್ರೀಲಂಕಾದಲ್ಲಿ ಆರ್ಥಿಕ ಬಿಕ್ಕಟ್ಟು ತಾರಕಕ್ಕೇರಿದ್ದು, ಅಧ್ಯಕ್ಷ ಗೋಟಾಬಯ ವಿರುದ್ಧದ ಪ್ರತಿಭಟನೆ ತೀವ್ರಗೊಳ್ಳುತ್ತಿದ್ದಂತೆಯೇ ಲಂಕಾ ಪ್ರಧಾನಿ ರನಿಲ್ ವಿಕ್ರಮ ಸಿಂಘೆ ಅವರು ರಾಜೀನಾಮೆ ನೀಡಿದ್ದಾರೆ. ಟ್ವೀಟ್ ಮೂಲಕ ರನಿಲ್ ವಿಕ್ರಮ ಸಿಂಘೆ ರಾಜೀನಾಮೆಯನ್ನು ಧೃಡ ಪಡಿಸಿದ್ದಾರೆ. ಜನರ ಹಿತದೃಷ್ಟಿಯಿಂದ ರಾಜೀನಾಮೆ ನೀಡುವುದಾಗಿ ತಿಳಿಸಿದ್ದಾರೆ. ರಾಜಕೀಯ ಪರಿಸ್ಥಿತಿ ಹದಗೆಟ್ಟ ಹಿನ್ನೆಲೆಯಲ್ಲಿ ಸರ್ವಪಕ್ಷ ಸರ್ಕಾರಕ್ಕೆ ದಾರಿ ಮಾಡಿಕೊಡುವ ನಿಟ್ಟಿನಲ್ಲಿ ತಾವು ರಾಜೀನಾಮೆ ನೀಡುತ್ತಿದ್ದೇನೆ ಎಂದು ಅವರು ತಿಳಿಸಿದ್ದಾರೆ.
ಉತ್ತರಾಖಂಡ : ಉತ್ತರಾಖಂಡ್ ರಾಜ್ಯದ ನೈನಿತಾಲ್ ಜಿಲ್ಲೆಯ ರಾಮನಗರ ಎಂಬಲ್ಲಿ ಕಾರೊಂದು ನದಿಗೆ ಬಿದ್ದ ಪರಿಣಾಮ ಒಂಬತ್ತು ಮಂದಿ ಮೃತಪಟ್ಟಿರುವ ಘಟನೆ ನಡೆದಿದೆ. ಈ ಘಟನೆಯಲ್ಲಿ ಸಾವನ್ನಪ್ಪಿದವರೆಲ್ಲರೂ ಪಂಜಾಬ್ ಮೂಲದವರು ಎನ್ನಲಾಗಿದೆ ಕಾರಿನಲ್ಲಿ ಒಟ್ಟು 11 ಜನರಿದ್ದು, ಇಬ್ಬರನ್ನು ರಕ್ಷಿಸಲಾಗಿದ್ದು, ಉಳಿದ ಒಂಬತ್ತು ಮಂದಿ ಅಸುನೀಗಿದ್ದಾರೆ ಎಂದು ಸ್ಥಳೀಯಾಡಳಿತ ದೃಢಪಡಿಸಿದೆ. ಘಟನಾ ಸ್ಥಳಕ್ಕೆ ಪೊಲೀಸರು, ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್ಡಿಆರ್ಎಫ್), ಮತ್ತು ಅಗ್ನಿಶಾಮಕ ತಂಡವು ಧಾವಿಸಿದ್ದು, ಕಾರ್ಯಾಚರಣೆ ನಡೆಯುತ್ತಿದೆ.
ಟೆಕ್ಸಾಸ್ : ನೈರುತ್ಯ ಸ್ಯಾನ್ ಆಂಟೋನಿಯೊದ ದೂರದ ಹಿಂಭಾಗದ ರಸ್ತೆಯಲ್ಲಿ ಶಂಕಿತ ವಲಸಿಗರನ್ನ ಒಳಗೊಂಡ ಟ್ರೇಲರ್ ಟ್ರಕ್ ಪತ್ತೆಯಾಗಿದ್ದು, ಅದರಲ್ಲಿ 46 ಮಂದಿ ಸಾವನ್ನಪ್ಪಿದ್ದಾರೆ ಮತ್ತು ಇತರ 16 ಮಂದಿಯನ್ನ ಆಸ್ಪತ್ರೆಗಳಿಗೆ ಕರೆದೊಯ್ಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಜನರು ಹೇಗೆ ಮೃತಪಟ್ಟಿದ್ದಾರೆ ಎಂದು ಇನ್ನೂ ಸ್ವಷ್ಟವಾಗಿಲ್ಲ.ಈ ಪ್ರದೇಶದಲ್ಲಿ ಟ್ರೇಲರ್ ಟ್ರಕ್ ಪತ್ತೆಯಾಗುವುದಕ್ಕೂ ಕೆಲ ಹೊತ್ತಿನ ಮೊದಲು ಚಾಲಕ ಅದನ್ನು ಅಲ್ಲಿ ಬಿಟ್ಟುಹೋಗಿರಬಹುದು ಎಂಬ ಶಂಕೆಯ ಮೇರೆಗೆ ಆತನಿಗಾಗಿ ಪೋಲಿಸರು ಹುಡುಕಾಟ ಆರಂಭಿಸಲಾಗಿದೆ ಎಂದು ವರದಿಯಾಗಿದೆ.
ತಿರುವನಂತಪುರ : ಖಳನಾಯಕ ಪಾತ್ರದ ಮೂಲಕ ಹೆಸರುವಾಸಿಯಾದ ಮಲಯಾಳಂ ನಟ ಎನ್ ಡಿ ಪ್ರಸಾದ್ (43) ಕೊಚ್ಚಿ ಬಳಿಯ ಕಲಮಸ್ಸೇರಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಜೂ 25,ಶನಿವಾರ ಸಂಜೆ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕೇರಳ ಪೊಲೀಸರು ತಿಳಿಸಿದ್ದಾರೆ. ಪ್ರಸಾದ್ ಪತ್ನಿಯಿಂದ ಪ್ರತ್ಯೇಕವಾಗಿ ವಾಸಿಸುತ್ತಿದ್ದು. ಅವರಿಗೆ ಇಬ್ಬರು ಮಕ್ಕಳಿದ್ದಾರೆ. ಮೃತರು ಪತ್ನಿ ಮತ್ತು ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಪ್ರಸಾದ್ ಅವರು ಹಲವಾರು ಚಲನಚಿತ್ರದಲ್ಲಿ ನಟಿಸಿದ್ದಾರೆ. ಆದರೆ ಆ್ಯಕ್ಷನ್ ಹೀರೋ ಬಿಜು ಚಿತ್ರದಲ್ಲಿನ ಅವರ ಅಭಿನಯ ಅವರಿಗೆ ಪ್ರಸಿದ್ಧಿಯನ್ನು ತಂದುಕೊಟ್ಟಿತ್ತು ಡ್ರಗ್ಸ್ ಪ್ರಕರಣ ಸೇರಿದಂತೆ ಅವರ ಮೇಲೆ ಹಲವು ಪೊಲೀಸ್ ಪ್ರಕರಣಗಳು ದಾಖಲಾಗಿದ್ದವು.
ಮಂಗಳೂರು : ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದಾಗಿ ಎಲೆಕ್ಟ್ರಿಕ್ ಸ್ಕೂಟರ್ ಶೋರೂಮ್ ಗೆ ಬೆಂಕಿ ತಗುಲಿ ಶೋರೂಮ್ ಸಂಪೂರ್ಣವಾಗಿ ಸುಟ್ಟುಹೋದ ಘಟನೆ ಪಡೀಲ್ ಅಳಪೆ ಸಮೀಪದ ನಾಗುರಿ ಬಳಿ ಜೂ.23, ಶುಕ್ರವಾರದಂದು ನಡೆದಿದೆ. ಈ ಘಟನೆ ಇಂದು ಬೆಳಗ್ಗೆ 8 ಗಂಟೆಗೆ ಶೋರೂಮ್ನಲ್ಲಿ ನಡೆದಿದೆ. ಅಗ್ನಿ ಅವಘಡದಿಂದ ಹಲವು ಸ್ಕೂಟರ್ಗಳು ಬೆಂಕಿಗೆ ಆಹುತಿಯಾಗಿದ್ದು, ಲಕ್ಷಾಂತರ ಮೌಲ್ಯದ ಸ್ಕೂಟರ್ ಗಳು ಬೆಂಕಿಗಾಹುತಿಯಾಗಿದೆ ಎಂದು ಅಂದಾಜಿಸಲಾಗಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ವರ್ಗ ಬೆಂಕಿ ನಂದಿಸುತ್ತಿದ್ದಾರೆ. ಸ್ಥಳಕ್ಕೆ ಪೊಲೀಸರು ತೆರಳಿ ಪರಿಶೀಲನೆ ನಡೆಸುತ್ತಿದ್ದಾರೆ.
ಉಳ್ಳಾಲ : ನರಿಂಗಾನ ಗ್ರಾಮದ ತೌಡುಗೋಳಿ ಕ್ರಾಸ್ನಲ್ಲಿರುವ ಗ್ರಾಮ ಪಂಚಾಯತ್ ಕಚೇರಿ ಬಳಿಯ ಹತ್ತಿ ದಾಸ್ತಾನು ಗೋದಾಮು ಮತ್ತು ಹತ್ತಿ ಉತ್ಪನ್ನಗಳ ತಯಾರಿಕಾ ಘಟಕಕ್ಕೆ ಆಕಸ್ಮಿಕ ಬೆಂಕಿ ತಗುಲಿ ಘಟಕ ಭಾಗಶಃ ಸುಟ್ಟು ಹೋಗಿದೆ. ಈ ಘಟನೆ ಜೂ.22, ಮಂಗಳವಾರ ಸಂಜೆ ಸಂಭವಿದ್ದು, 8 ಲಕ್ಷಕ್ಕೂ ಹೆಚ್ಚು ನಷ್ಟ ಉಂಟಾಗಿದೆ ಎಂದು ಅಂದಾಜಿಸಲಾಗಿದೆ. ಉಳ್ಳಾಲದ ಉದ್ಯಮಿ ನೌಮಾನ್ ಮಾಲಿಕತ್ವದ ಕೋಡಿ ಎಂಟರ್ ಪ್ರೈಸಸ್ ಹತ್ತಿ ದಾಸ್ತಾನು ಹಾಗೂ ತಯಾರಿಕಾ ಕೇಂದ್ರ ಇದಾಗಿದೆ. ಬೆಂಕಿ ತಗುಲಿದ ತತ್ಕ್ಷಣ ಸ್ಥಳೀಯರು ಆಗಮಿಸಿ ಬೆಂಕಿ ನಂದಿಸುವ ಪ್ರಯತ್ನಪಟ್ಟರು. ಮಂಗಳೂರಿನ ಪಾಂಡೇಶ್ವರ ಅಗ್ನಿಶಾಮಕ ಆಗಮಿಸಿದಾಗ ಗೋದಾಮು, ಯಂತ್ರಗಳು ಭಾಗಶಃ ಬೆಂಕಿಗೆ ಆಹುತಿಯಾಗಿದ್ದವು. ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಮಿಳುನಾಡು : ತಮಿಳಿನ ಖ್ಯಾತ ನಟ ವಿಜಯ್ ಅವರ ಪಣೈಯೂರುನ ಇಸಿಆರ್ ರಸ್ತೆಯಲ್ಲಿರುವ ಕಚೇರಿಯ ಆವರಣದಲ್ಲಿ ಶನಿವಾರ ಜೂ. 18ರಂದು ಬೆಳಿಗ್ಗೆ ಶವ ಪತ್ತೆಯಾಗಿದೆ. ಮೃತ ವ್ಯಕ್ತಿಯನ್ನು ಪ್ರಭಾಕರ್ ಎಂದು ಗುರುತಿಸಲಾಗಿದ್ದು, ಪ್ರಭಾಕರ್, ಅದೇ ಕಚೇರಿಯಲ್ಲಿ ಕೆಲ ತಿಂಗಳಿಂದ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ. ಕೆಲವು ದಿನಗಳ ಹಿಂದಷ್ಟೆ ತನ್ನ ಊರಿಗೆ ಹೋಗಿ ಕುಟುಂಬವನ್ನು ಭೇಟಿ ಮಾಡಿಕೊಂಡು ಬಂದಿದ್ದ ಎನ್ನಲಾಗಿದೆ. ಅತಿಯಾಗಿ ಕುಡಿದ ಹಿನ್ನೆಲೆಯಲ್ಲಿ ಗಟ್ಟಿಯಾದ ಪದಾರ್ಥ ತಿಂದು ಉಸಿರಾಡಲು ಕಷ್ಟವಾಗಿ ಮೃತಪಟ್ಟಿರಬಹುದು ಎಂದು ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.
ಬೆಂಗಳೂರು: ಪಿಎಸ್ಐ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳು ಬ್ಯಾಡರಹಳ್ಳಿ ಪೊಲೀಸ್ ಠಾಣೆಯ ಪಿಎಸ್ಐ ಹರೀಶ್ ಕೆ. ಎಂಬವವರನ್ನು ಬಂಧಿಸಿದ್ದಾರೆ. ಬೆಂಗಳೂರಿನ ಬ್ಯಾಡರಹಳ್ಳಿ ಪೊಲೀಸ್ ಠಾಣೆಯ ಪಿಎಸ್ಐ ಹರೀಶ್ ಕೆ. ಎಂಬವರು ಬಂಧಿತ ಆರೋಪಿ. ಪೊಲೀಸ್ ಅಧಿಕಾರಿಯಾಗಿದ್ದುಕೊಂಡು, ಪಿಎಸ್ಐ ಅಭ್ಯರ್ಥಿಗಳು ಮತ್ತು ನೇಮಕಾತಿ ವಿಭಾಗದ ನಡುವೆ ಮಧ್ಯವರ್ತಿಯಾಗಿ ಕೆಲಸ ಮಾಡಿದ್ದ ಆರೋಪದ ಹಿನ್ನೆಲೆಯಲ್ಲಿ ಅವರನ್ನು ಬಂಧಿಸಲಾಗಿದೆ. ಬಂಧಿತರು ನೀಡಿದ ಮಾಹಿತಿ ಆಧರಿಸಿ ಪಿಎಸ್ಐ ಹರೀಶ್ ಅವರನ್ನು ಬಂಧಿಸಲಾಗಿದ್ದು, ಕೋರ್ಟ್ ಗೆ ಹಾಜರುಪಡಿಸಲಾಗಿದೆ. ಪಿಎಸ್ಐ ಪೊಲೀಸ್ ಪರೀಕ್ಷಾ ನೇಮಕಾತಿಯಲ್ಲಿ ಅಕ್ರಮಕ್ಕೆ ಸಂಬಂಧಿಸಿದಂತೆ ಈಗಾಗಲೇ ದಿವ್ಯಾ ಹಾಗರಗಿ ಸೇರಿದಂತೆ ಹಲವರ ಬಂಧನ ಆಗಿದೆ. ಬೆಂಗಳೂರಿನಲ್ಲೇ ಹತ್ತಕ್ಕೂ ಹೆಚ್ಚು ಮಂದಿಯ ಬಂಧನವಾಗಿದೆ. ಇನ್ನಷ್ಟು ಮಂದಿಯ ಬಂಧನವಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಆ ನಿಟ್ಟಿನಲ್ಲಿ ತನಿಖೆ ನಡೆಯುತ್ತಿದೆ.
ನವದೆಹಲಿ : ಭಾನುವಾರ ಮುಂಜಾನೆ ದೆಹಲಿಯ ಕೋರಲ್ ಬಾಗ್ನ ಗಫರ್ ಮಾರುಕಟ್ಟೆಯಲ್ಲಿ ಭಾರೀ ಬೆಂಕಿ ಅವಘಡ ಸಂಭವಿಸಿದೆ ಬೆಳಗ್ಗೆ 4 ಗಂಟೆ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದ್ದು. ಕೂಡಲೇ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಲಾಯಿತು. 39 ಅಗ್ನಿಶಾಮಕ ವಾಹನಗಳೊಂದಿಗೆ ಬೆಂಕಿಯನ್ನು ನಂದಿಸಲಾಯಿತು. ಇಲ್ಲಿಯವರೆಗೂ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಆದರೆ, ಬೆಂಕಿ ಅನಾಹುತಕ್ಕೆ ಕಾರಣ ಇನ್ನಷ್ಟೇ ಗೊತ್ತಾಗಬೇಕಿದೆ ಎಂದು ದೆಹಲಿ ಅಗ್ನಿಶಾಮಕ ದಳದ ನಿರ್ದೇಶಕ ಅತುಲ್ ಗರ್ಗ್ ತಿಳಿಸಿದ್ದಾರೆ












