Author: admin

ಮಂಗಳೂರು, ಸೆ. 09:ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್. ಎಸ್ ಭೋಸರಾಜು ಅವರು ಸಣ್ಣ ನೀರಾವರಿ ಇಲಾಖೆ ವತಿಯಿಂದ ಹರೇಕಳದಲ್ಲಿ ನೇತ್ರಾವತಿ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಕಿಂಡಿ ಅಣೆಕಟ್ಟು ಕಾಮಗಾರಿಯನ್ನು ವೀಕ್ಷಣೆ ಮಾಡಿದರು. ಈ ಸಂದರ್ಭದಲ್ಲಿ ವಿಧಾನಪರಿಷತ್ತಿನ ಸದಸ್ಯರಾದ ಹರೀಶ್ ಕುಮಾರ್, ಸಣ್ಣ ನೀರಾವರಿಯ ಇಲಾಖೆಯ ಅಭಿಯಂತರು ಹಾಗೂ ಮತ್ತಿತ್ತರು ಉಪಸ್ಥಿತರಿದ್ದರು.

Read More

ಬೆಳ್ತಂಗಡಿ, ಸೆ. 06: ಇನೋವಾ ಕಾರು ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಸಾವನ್ನಪ್ಪಿದ ಘಟನೆ ಬೆಳ್ತಂಗಡಿ ತಾಲೂಕಿನ ಕಾಪಿನಡ್ಕದಲ್ಲಿ ನಡೆದಿದೆ. ಮೃತರನ್ನು ಕಾರ್ಕಳ ತಾಲೂಕಿನ ಈದು ಗ್ರಾಮದ ಸುಧೀರ್ ಎಂದು ಗುರುತಿಸಲಾಗಿದೆ. ಬೆಳ್ತಂಗಡಿ ಕಡೆಯಿಂದ ಉಡುಪಿ ಕಡೆಗೆ ಹೋಗುತ್ತಿದ್ದ ಇನೋವಾ ಕಾರು ಹಾಗೂ ಅಳದಂಗಡಿ ಕಡೆಯಿಂದ ಬೆಳ್ತಂಗಡಿಗೆ ಬರುತ್ತಿದ್ದ ಬೈಕ್ ನಡುವೆ ಢಿಕ್ಕಿ ಸಂಭವಿಸಿದ್ದು, ಢಿಕ್ಕಿ ರಭಸಕ್ಕೆ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿದ್ದು, ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎನ್ನಲಾಗಿದೆ.

Read More

ಉಡುಪಿ,ಸೆ.05: ರಾಷ್ಟ್ರಮಟ್ಟದ ಬಾಕ್ಸಿಂಗ್ ಕ್ರೀಡಾಪಟು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಲ್ಪೆ ಸಮೀಪದ ಶಾಂತಿನಗರದಲ್ಲಿ ನಡೆದಿದೆ. ಮೃತರನ್ನು ಶಾಂತಿನಗರ ನಿವಾಸಿ ವಿರಾಜ್ ಮೆಂಡನ್ (29 ಎಂದು ಗುರುತಿಸಲಾಗಿದೆ. ವಿರಾಜ್ ಅವರು ಮಲ್ಪೆ ಬಂದರಿನಲ್ಲಿ ಮೀನುಗಾರಿಕೆ ಕೆಲಸ ಮಾಡಿಕೊಂಡಿದ್ದ. ಬಾಕ್ಸಿಂಗ್ ಕ್ಷೇತ್ರದಲ್ಲಿ ರಾಷ್ಟ್ರವನ್ನು ಪ್ರತಿನಿಧಿಸಿದ್ದ. ಇಂದು ಮಂಗಳವಾರ ಮನೆಯ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.ಮಲ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಮಂಗಳೂರು, ಸೆ. 4: ಓಂ ಸಾಯಿ ಪ್ರೊಡಕ್ಷನ್ಸ್ ಬ್ಯಾನರಿನಡಿಯಲ್ಲಿ ನಿರ್ಮಾಣವಾದ ನಿಗೂಢ ಗುರುತು ಕನ್ನಡ ಚಲನಚಿತ್ರದ ಟ್ರೈಲರ್ ಬಿಡುಗಡೆ ಸಮಾರಂಭವು ಸೆ.7ರಂದು ಬೆಳಿಗ್ಗೆ 10.30ಕ್ಕೆ ಮಂಗಳೂರು ರಥಬೀದಿ ಶ್ರೀ ಕಾಳಿಕಾಂಬಾ ವಿನಾಯಕ ದೇವಸ್ಥಾನದ ಪಟ್ಟೆ ಲಿಂಗಪ್ಪ ಆಚಾರ್ಯ ಕಲ್ಯಾಣ ಮಂಟಪದಲ್ಲಿ ನಡೆಯಲಿದೆ. ಬೆಳಿಗ್ಗೆ ಶ್ರೀ ಕ್ಷೇತ್ರದಲ್ಲಿ ಆರಾಧಿಸಲ್ಫಡುವ ದೇವರುಗಳಿಗೆ ವಿಶೇಷ ಪ್ರಾರ್ಥನೆ ಬಳಿಕ ಸಭಾ ಕಾರ್ಯಕ್ರಮ ನಡೆಯಲಿದೆ. ನಿಗೂಢ ಗುರುತು ಚಿತ್ರದ ವಿಶಾಲ ಕರ್ನಾಟಕದ ಹಂಚಿಕೆದಾರರಾದ ತುಕಾರಾಮ ಬಾಯಾರು ಅವರು ಪ್ರಾಸ್ತಾವಿಕ ಮಾತನಾಡಲಿದ್ದಾರೆ. ಶ್ರೀ ಕಾಳಿಕಾಂಬಾ ವಿನಾಯಕ ದೇವಸ್ಥಾನದ ಮೊಕ್ತಸರ ಸುಂದರ ಆಚಾರ್ಯ ಬೆಳುವಾಯಿ ಅವರು ದೀಪ ಪುಜ್ವಲನೆ ಮಾಡಲಿದ್ದಾರೆ. ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ಡಿ.ವೇದವ್ಯಾಸ ಕಾಮತ್ ಅಧ್ಯಕ್ಷತೆ ವಹಿಸಿ ಚಿತ್ರದ ಟೀಸರ್ ಬಿಡುಗಡೆ ಮಾಡಲಿದ್ದಾರೆ. ಕಲರ್ ಕಿರುತೆರೆ ನಿರ್ದೇಶಕ ವಿಜಯಕೃಷ್ಣ ಕೆ.ಆರ್. ಉಡುಪಿ, ರಂಗಕಲಾವಿದೆ ಚಲನಚಿತ್ರ ನಟಿ ರೂಪಶ್ರೀ ವರ್ಕಾಡಿ, ಕನ್ನಡದ ಲಕ್ಷ್ಮೀ ಬಾರಮ್ಮ ಧಾರಾವಾಹಿ ನಿರ್ದೇಶಕ ಯಶವಂತ್, ದ.ಕ. ಚಿನ್ನ, ಬೆಳ್ಳಿ, ಕೆಲಸಗಾರರ ಸಂಘದ ಅಧ್ಯಕ್ಷ ಕೆ.ಎಲ್.ಹರೀಶ್…

Read More

ಸುಳ್ಯ, ಸೆ. 04 : ಹುಂಡೈ 25ನೇ ವಾರ್ಷಿಕೋತ್ಸವ ಶುಭ ಸಂದರ್ಭದಲ್ಲಿ ಸುಳ್ಯ ಓಡಬಾಯಲ್ಲಿ ಅದ್ವೈತ್ ಹುಂಡೈ ಶೋರೂಂ ಉದ್ಘಾಟನೆಗೊಂಡಿತು. ಅದ್ವೈತ್ ಹುಂಡೈ ಆಡಳಿತ ನಿರ್ದೇಶಕರಾದ ಡಾ.ಎಸ್ ವಿ ಎಸ್ ಸುಬ್ರಹ್ಮಣ್ಯ ಗುಪ್ತಾ ಅವರು ಹುಂಡೈ ಶೋರೂಂ ನ್ನು ಉದ್ಘಾಟಿಸಿದರು. ಹುಂಡೈ ಸಿನೀಯರ್ ಆರ್ ಎಸ್ ಓ ವ್ಯವಸ್ಥಾಪಕ ಶರತ್ತ್ ತುಳಸಿಗರೆ ಅವರು ಸಭಾ ಕಾರ್ಯವನ್ನು ಉದ್ದೇಶಿಸಿ ಮಾತನಾಡಿದರು. ಹುಂಡೈ ಶೋರೂಂ ಕಟ್ಟಡ ಮಾಲಕರಾದ ಶಶಿಕಲಾ ಶುಭಕರ ರಾವ್ ಕುಂಭಕ್ಕೊಡು,ರಾಜೇಶ್ ಪುತ್ತೂರು, ಸೇಲ್ಸ್ ಹೆಡ್ಡ್ ಶಿವಪ್ರಸಾದ್ ಎ.ಎಸ್, ಅದ್ವೈತ್ ಹುಂಡೈ ನ ಸರ್ವಿಸ್&ಪಾರ್ಟ್ಸ್ ವಿಭಾಗದ ನಿರ್ದೇಶಕ ರಾಧಾಕೃಷ್ಣ ಗೌಡ,ಸೇಲ್ಸ್ & ಮಾರ್ಕೆಟಿಂಗ್ ವಿಭಾಗದ ನಿರ್ದೇಶಕ ಅಜಯ್ ಸಿಂಗ್, ಕರ್ನಾಟಕ ಸೇವಾ ಭಾರತಿ ಕಾರ್ಯದರ್ಶಿ ಕೆ.ಚೆನ್ನಯ್ಯ ಸ್ವಾಮಿ, ಸರ್ವಿಸ್ ವಿಭಾಗದ ಕ್ಲಸ್ಟರ್ ಹೆಡ್ಡ್ ಶಶಿಕಾಂತ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

Read More

ಜೋಹಾನ್ಸ್‌ಬರ್ಗ್‌ , ಸೆ. 3 : ಐದಂಸ್ತಿನ ಕಟ್ಟಡವೊಂದರಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿ ಕನಿಷ್ಠ 63 ಮಂದಿ ಮೃತಪಟ್ಟ ಘಟನೆ ದಕ್ಷಿಣ ಆಫ್ರಿಕಾದ ಜೋಹಾನ್ಸ್ಬರ್ಗ್ನಲ್ಲಿ ಗುರುವಾರ ನಡೆದಿದೆ. ಸುಮಾರು 200 ಜನರು ಕಟ್ಟಡದಲ್ಲಿ ವಾಸವಿದ್ದರು ಎನ್ನಲಾಗಿದೆ. ಮಧ್ಯ ಜೋಹಾನ್ಸ್‌ಬರ್ಗ್‌ ನ ಬಹುಮಹಡಿ ವಸತಿ ಕಟ್ಟಡದಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಕನಿಷ್ಠ 63 ಜನರು ಸಾವನ್ನಪ್ಪಿದ್ದು, 40ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ, ಸಾವಿನ ಸಂಖ್ಯೆ ಇನ್ನಷ್ಟು ಏರಿಕೆಯಾಗುವ ಸಾಧ್ಯತೆ ಇದೆಯೆಂದು ತುರ್ತು ನಿರ್ವಾಹಣಾ ಅಧಿಕಾರಿಗಳು ಹೇಳಿದ್ದಾರೆ.

Read More

ಜೈಪುರ, ಸೆ 02 : ಹಿಟ್ಟಿನ ಗಿರಣಿಯಲ್ಲಿ ವಿದ್ಯುತ್ ಸ್ಪರ್ಶಗೊಂಡು ಒಂದೇ ಕುಟುಂಬದ 4 ಮಂದಿ ಸಾವನ್ನಪ್ಪಿದ ಘಟನೆ ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ಶುಕ್ರವಾರ ನಡೆದಿದೆ. ಹಿಟ್ಟಿನ ಗಿರಣಿ ಅರ್ಜುನ ಸಿಂಗ್ ಎಂಬವರಿಗೆ ಸೇರಿದ್ದು, ಘಟನೆ ನಡೆದ ಸಮಯದಲ್ಲಿ ಅರ್ಜುನ ಸಿಂಗ್ ಅವರು ಕೆಲಸದ ನಿಮಿತ್ತ ದೆಹಲಿಯಲ್ಲಿದ್ದರು. ಅವರ ಪತ್ನಿ ಹಿಟ್ಟಿನ ಗಿರಣಿ ಯಂತ್ರವನ್ನು ನಿರ್ವಹಿಸುತ್ತಿದ್ದಾಗ ವಿದ್ಯುತ್ ಶಾಕ್ ಹೊಡೆದಿದೆ. ತಾಯಿಯನ್ನು ರಕ್ಷಿಸಲು ಇಬ್ಬರು ಪುತ್ರರು ಧಾವಿಸಿದ್ದು, ಅವರಿಗೂ ವಿದ್ಯುತ್ ತಗುಲಿದೆ. ಅರ್ಜುನವರ ಮಾವ ಮೂವರನ್ನು ವಿದ್ಯುತ್ ಶಾಕ್ ನಲ್ಲಿ ನೋಡಿದಾಗ ಅವರನ್ನು ರಕ್ಷಣೆ ಮಾಡಲು ಹೋಗಿದ್ದು, ಅವರು ಕೂಡ ವಿದ್ಯುತ್ ಸ್ಪರ್ಶಕ್ಕೆ ಒಳಗಾಗಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

Read More

ಗುಜರಾತ್, ಸೆ. 01 : ಕಕ್ರಾಪರ್ ನ  3ನೇ  ಹಂತದ ಪರಮಾಣು ವಿದ್ಯುತ್ ಸ್ಥಾವರ ಪೂರ್ಣ ಪ್ರಮಾಣದಲ್ಲಿ ಕಾರ್ಯಾಚರಣೆ ಆರಂಭಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಗುಜರಾತ್ ನಲ್ಲಿರುವ ಕಕ್ರಾಪರ್ ನಲ್ಲಿ ಈಗಾಗಲೇ ಎರಡು ಸ್ಥಾವರಗಳು 220 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆಯನ್ನು ಸಾಮರ್ಥ್ಯ ಹೊಂದಿದೆ. ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿ ‘ಭಾರತ ಮತ್ತೊಂದು ಸಾಧನೆ ಮಾಡಿದೆ. 700 MW ಸಾಮರ್ಥ್ಯದ ಗುಜರಾತ್ನ ಮೊದಲ ಅತಿದೊಡ್ಡ ಸ್ವದೇಶಿ ನಿರ್ಮಿತ ಕಕ್ರಾಪರ್ ಪರಮಾಣು ವಿದ್ಯುತ್ ಸ್ಥಾವರದ ಘಟಕ-3 ಪೂರ್ಣ ಪ್ರಮಾಣದಲ್ಲಿ ಕಾರ್ಯನಿರ್ವಹಿಸಲು ಆರಂಭಿಸಿದೆ. ಅದಕ್ಕಾಗಿ ವಿಜ್ಞಾನಿಗಳು ಮತ್ತು ಎಂಜಿನಿಯರ್ ಗಳಿಗೆ ಅಭಿನಂದನೆಗಳು ಎಂದು ಮೆಚ್ಚಿಗೆ ಸೂಚಿಸಿದ್ದಾರೆ.

Read More

ಕುಂದಾಪುರ, ಸೆ. 01 : ಹತ್ತನೇ ತರಗತಿ ಓದುತ್ತಿದ್ದ, ಹಾಸ್ಟೆಲ್ ನಲ್ಲಿದ್ದ ವಿದ್ಯಾರ್ಥಿನಿಯೊಬ್ಬಳು ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಪಡುಕೋಣೆ ಎಂಬಲ್ಲಿ ನಡೆದಿದೆ. ಮೃತರನ್ನು ಕುಂದಾಪುರದ ಪುರಸಭೆಯಲ್ಲಿ ಪೌರಕಾರ್ಮಿಕರಾಗಿರುವ ಪಡುಕೋಣೆ ನಿವಾಸಿಗಳಾದ ಪ್ರಶಾಂತ್, ಸುನಂದಾ ದಂಪತಿ ಪುತ್ರಿ ಸಿಂಧು(16) ಎಂದು ಗುರುತಿಸಲಾಗಿದೆ. ಸಿಂಧು ಕುಂದಾಪುರದ ವಡೇರಹೋಬಳಿ ಎಂಬಲ್ಲಿರುವ ಬಾಲಕಿಯರ ವಸತಿ ನಿಲಯದಲ್ಲಿದ್ದು ಸಮೀಪದ ಸರ್ಕಾರಿ ಶಾಲೆಯಲ್ಲಿ ಎಸ್.ಎಸ್.ಎಲ್.ಸಿ ಓದುತ್ತಿದ್ದಳು. ಈಕೆ ಗುರುವಾರ ಅನಾರೋಗ್ಯದ ಕಾರಣ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ. ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಸುಳ್ಯ, ಆ. 31 : ರಸ್ತೆ ಬದಿ ನಿಂತಿದ್ದ ಕಾರ್ಮಿಕರಿಗೆ ಕಾರೊಂದು ಡಿಕ್ಕಿ ಹೊಡೆದು ಮೂವರು ಸಾವನ್ನಪ್ಪಿದ ಘಟನೆ ಅಡ್ಕಾರಿನಲ್ಲಿ ನಡೆದಿದೆ. ಮೃತರನ್ನು ಹಾವೇರಿ ಜಿಲ್ಲೆಯ ರಾಣೆಬೆನ್ನೂರು ನಿವಾಸಿಗಳಾದ ಕಾರ್ಮಿಕರಾದ ಚಂದ್ರಪ್ಪ ರೇಗಪ್ಪ, ಮಾಂತೇಶ್ ಎಂದು ಗುರುತಿಸಲಾಗಿದೆ. ಮಡಿಕೇರಿಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಕಾರು ನಿಯಂತ್ರಣ ತಪ್ಪಿ ರಸ್ತೆ ಬದಿ ನಿಂತಿದ್ದ ಚಂದ್ರಪ್ಪ, ರೇಗಪ್ಪ, ವೆಂಕಪ್ಪ, ಮಾಂತೇಶ್ ಎಂಬವರಿಗೆ ಢಿಕ್ಕಿಯಾಗಿದ್ದು, ಮೂವರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಇವರಲ್ಲಿ ವೆಂಕಪ್ಪ ಚಿಕಿತ್ಸೆ ಪಡೆಯುತ್ತಿದ್ದಾರೆ ಎನ್ನಲಾಗಿದೆ.

Read More