Author: admin

ಬಿಹಾರ, ಆ. 18: ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿ ಪತ್ರಕರ್ತರೊಬ್ಬರನ್ನು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಬಿಹಾರದ ಅರಾರಿಯಾ ಜಿಲ್ಲೆಯಲ್ಲಿ ಶುಕ್ರವಾರ ನಡೆದಿದೆ.ಮೃತರನ್ನು ಬಿಮಲ್ ಯಾದವ್ ಎಂದು ಗುರುತಿಸಲಾಗಿದೆ. ದುಷ್ಕರ್ಮಿಗಳು ಮುಂಜಾನೆ ಬಿಮಲ್ ಯಾದವ್ ಅವರ ಮನೆಯ ಬಾಗಿಲು ತಟ್ಟಿದ್ದು,ಬಾಗಿಲು ತೆಗೆದಾಕ್ಷಣ ಗುಂಡು ಹಾರಿಸಿ ಹತ್ಯೆ ಮಾಡಿದ್ದಾರೆ. ಪೊಲೀಸ್ ವರಿಷ್ಠಾಧಿಕಾರಿ ಮತ್ತು ಪ್ರದೇಶದ ಸಂಸದರು ಸೇರಿದಂತೆ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿದ್ದಾರೆ.

Read More

ಶಿಮ್ಲಾ, ಆ. 17:ಹಿಮಾಚಲ ಪ್ರದೇಶದಲ್ಲಿ ಕಳೆದ ಮೂರು ದಿನಗಳಿಂದ ಸುರಿಯುತಿರುವ ಮಳೆಯಿಂದಾಗಿ 71 ಮಂದಿ ಸಾವನ್ನಪ್ಪಿದ್ದಾರೆ. 2,500 ಜನರನ್ನು ಸುರಕ್ಷಿತ ಸ್ಥಳಗಳಿಗೆ ಕಳುಹಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಜುಲೈಗಿಂತ ಆಗಸ್ಟ್ 15ರ ಅವಧಿಯಲ್ಲಿ ಮಳೆಯ ಅವಾಂತರದಿಂದಾಗಿ 71 ಮಂದಿ ಸಾವನ್ನಪ್ಪಿದ್ದು, ರಾಜ್ಯಾದ್ಯಂತ ಮಳೆಯಿಂದಾಗಿ ಸುಮಾರು 7,500 ಕೋಟಿ ರೂ. ನಷ್ಟವಾಗಿದೆ ಎಂದು ವಿಪತ್ತು ನಿರ್ವಹಣಾ ಪ್ರಧಾನ ಕಾರ್ಯದರ್ಶಿ ಓಂಕಾರ್ ಚಂದ್ ಶರ್ಮಾ ಈ ಬಗ್ಗೆ ಮಾಹಿತಿ ನೀಡಿದ್ದಾರೆ.

Read More

ತಿರುವನಂತಪುರ, ಆ. 16 : ತಾಯಿ ಹಾಲು ಕುಡಿದು ಮಲಗಿದ್ದ 3 ತಿಂಗಳ ಮಗು ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ ತಿರುವನಂತಪುರದಲ್ಲಿ ನಡೆದಿದೆ. ಎದೆ ಹಾಲು ಮಗುವಿನ ಶ್ವಾಸನಾಳಕ್ಕೆ ಸೇರಿ ಮಗು ಮೃತಪಟ್ಟಿದೆ ಎನ್ನಲಾಗಿದೆ. ಪಳ್ಳಿಚಲ್ ಮೂಲದ ಜಯಕೃಷ್ಣನ್ ಮತ್ತು ಜಾನಿಮೋಲ್ ದಂಪತಿಯ ಏಕೈಕ ಪುತ್ರ ಜಿತೇಶ್ ಮೃತ ಮಗುವಾಗಿದೆ. ಭಾನುವಾರ ರಾತ್ರಿ ಮಗುವಿಗೆ ಹಾಲುಣಿಸಿ ಮಲಗಿಸಿದ್ದರು. ಆದರೆ ಸೋಮವಾರ ಬೆಳಗ್ಗೆಯಾದರೂ ಮಗು ಎದ್ದಿಲ್ಲ ಇದನ್ನು ಕಂಡು ಪೋಷಕರು ಸೋಮವಾರ ಬೆಳಗ್ಗೆ ಮಗುವನ್ನು ಖಾಸಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಬಳಿಕ ವೈದ್ಯರು ಪರೀಕ್ಷೆ ನಡೆಸಿ ಬೇರೆ ಆಸ್ಪತ್ರೆಗೆ ಕರೆದೊಯ್ಯುವಂತೆ ತಿಳಿಸಿದ್ದಾರೆ. ಅಂತೆಯೇ ಪೋಷಕರು ಎಸ್ಐಟಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಿಸದೇ ಮಗು ಮೃತಪಟ್ಟಿದೆ.

Read More

ಮಂಗಳೂರು, ಆ. 15 : ನಗರದ ನೆಹರೂ ಮೈದಾನದಲ್ಲಿ 77ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ದ.ಕ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ರಾಷ್ಟ್ರಧ್ವಜಾರೋಹಣ ನೆರವೇರಿಸಿ,  ಗೌರವ ವಂದನೆ ಸ್ವೀಕರಿಸಿ, ಸಂದೇಶ ನೀಡಿದ್ದಾರೆ. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ., ವಿಧಾನ ಪರಿಷತ್ ಶಾಸಕರಾದ ಹರೀಶ್ ಕುಮಾರ್, ನಗರ ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಜೈನ್, ಎಸ್ಪಿ ರಿಷ್ಯಂತ್ ಸೇರಿದಂತೆ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.

Read More

ಬೆಳ್ತಂಗಡಿ, ಆ .14 : ಸ್ಕೂಟರೊಂದು ವಿದ್ಯುತ್ ಕಂಬವೊಂದಕ್ಕೆ ಡಿಕ್ಕಿ ಹೊಡೆದು ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಹೆಬ್ರಿ ಸಮೀಪದ ವರಂಗದ ಮಾತಿಬೆಟ್ಟು ಎಂಬಲ್ಲಿ ಆ.13, ಆದಿತ್ಯವಾರ ನಡೆದಿದೆ. ಮೃತರನ್ನು ಸೂರಿಮಣ್ಣು ನಿವಾಸಿ ಪ್ರಭಾಚಂದ್ರ ಆಚಾರ್ಯ ಎಂದು ಗುರುತಿಸಲಾಗಿದೆ. ಪ್ರಭಾಚಂದ್ರ ಆಚಾರ್ಯ ಇವರು ಸ್ಕೂಟರಿನಲ್ಲಿ ಮುನಿಯಾಲು ಕಡೆಯಿಂದ ವರಂಗ ಕಡೆಗೆ ಹೋಗುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ಸ್ಕೂಟರ್ ರಸ್ತೆಯ ಪಕ್ಕದಲ್ಲಿದ್ದ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರಿಂದಾಗಿ ಗಂಭೀರವಾಗಿ ಗಾಯಗೊಂಡ ಪ್ರಭಾಚಂದ್ರ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬಂಟ್ವಾಳ, ಆ. 13 ಬಿಸಿರೋಡಿನಲ್ಲಿರುವ ಪೆಟ್ರೋಲ್ ಬಂಕ್ ಯೊಂದರ ಮ್ಯಾನೇಜರ್ ಹೃದಯಘಾತದಿಂದ ಶನಿವಾರ ರಾತ್ರಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಬಿಸಿರೋಡಿನ ಪೆಲತ್ತಿಮಾರ್ ನಿವಾಸಿ ಸಂಜೀವ ಅವರ ಪುತ್ರ ಪುರುಷೋತ್ತಮ ಪೂಜಾರಿ (45) ಮೃತಪಟ್ಟ ವ್ಯಕ್ತಿ. ಶನಿವಾರ ಮಧ್ಯ ರಾತ್ರಿ ಇವರಿಗೆ ಹೃದಯ ನೋವು ಕಾಣಿಸಿಕೊಂಡಿದ್ದು, ಕೂಡಲೇ ಆಸ್ಪತ್ರೆಗೆ ದಾಖಲಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ ಎನ್ನಲಾಗಿದೆ.

Read More

ಉಡುಪಿ, ಆ. 12 : ಜಿಲ್ಲಾಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್ ವರ್ಗಾವಣೆಗೊಂಡಿದ್ದು, ನೂತನ ಅಪರ ಜಿಲ್ಲಾಧಿಕಾರಿಯಾಗಿ ಮಮತಾ ದೇವಿ ಜಿಎಸ್ ನೇಮಕಗೊಂಡಿದ್ದಾರೆ. ನೂತನ ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿಎಸ್ ಈ ಹಿಂದೆ ಬೆಂಗಳೂರು ನೃಪತುಂಗ ವಿಶ್ವವಿದ್ಯಾ ನಿಲಯದ ಕುಲ ಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದರು.

Read More

ಪುಂಜಾಲಕಟ್ಟೆ, ಆ. 11 : ಅಂಗನವಾಡಿ ಕೇಂದ್ರದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವಾಗ ಅಂಗನವಾಡಿ ಸಹಾಯಕಿಯೊಬ್ಬರು ಕುಸಿದು ಬಿದ್ದು ಮೃತಪಟ್ಟ ಘಟನೆ ಬಡಗ ಕಜೆಕಾರು ಗ್ರಾಮದ ಕೆದಿಮೇಲು ಎಂಬಲ್ಲಿಆ.6ರಂದು ನಡೆದಿದೆ. ಮೃತರನ್ನು ಅಂಗನವಾಡಿ ಸಹಾಯಕಿ ಕನೆಜಾಲು ನಿವಾಸಿ ವಸಂತಿ ಕೆದಿಮೇಲು (43) ಎಂದು ಗುರುತಿಸಲಾಗಿದೆ. ಅಂಗನವಾಡಿ ಕೇಂದ್ರದಲ್ಲಿ ಕರ್ತವ್ಯದಲ್ಲಿದ್ದ ವೇಳೆ ಅಂಗನವಾಡಿ ಸಹಾಯಕಿ ವಸಂತಿ ನಾಯ್ಕ್ ಅವರು ಕುಸಿದು ಬಿದ್ದು ಅಸೌಖ್ಯಕ್ಕೀಡಾಗಿದ್ದರು. ಇವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

Read More

ಮಂಗಳೂರು, ಆ,10: ಕ್ವಿಟ್ ಇಂಡಿಯಾ ಚಳುವಳಿ ವರ್ಷಾಚರಣೆ ಅಂಗವಾಗಿ ಗೋವಾ ಸ್ವಾತಂತ್ರ್ಯ ಹೋರಾಟಗಾರರಾದ ಮಟ್ಟಾರ್ ವಿಠ್ಠಲ್ ಕಿಣಿ ಅವರನ್ನು ಆ.09, ಬುಧವಾರ ಸನ್ಮಾನಿಸಲಾಯಿತು. ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ನಗರದ ಭೋಜರಾವ್ ಲೈನ್ ನಲ್ಲಿರುವ ಅವರ ಸ್ವಗೃಹ ಕ್ಕೆ ತೆರಳಿ ಜಿಲ್ಲಾಡಳಿತ ಪರವಾಗಿ ಅವರನ್ನು ಸನ್ಮಾನಿಸಿದರು. ಈ ಸಂದರ್ಭದಲ್ಲಿ ಮಂಗಳೂರು ಉಪವಿಭಾಗಾಧಿಕಾರಿ ಹರ್ಷವಧನ್, ತಹಶೀಲ್ದಾರ್ ಪ್ರಶಾಂತ್ ಪಾಟೀಲ ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳಿದ್ದರು.

Read More

ಪುತ್ತೂರು, ಆ. 09 : ತೆಂಗಿನ ಮರ ಹತ್ತಿ ತೆಂಗಿನಕಾಯಿ ಕೀಳುವ ಕಾಯಕದಲ್ಲಿ ಪ್ರಸಿದ್ದಿ ಪಡೆದಿದ್ದ ಮಹಿಳೆಯೊಬ್ಬರು ತೆಂಗಿನ ಮರದಿಂದ ಕೆಳೆಗೆ ಬಿದ್ದು ಸಾವನ್ನಪ್ಪಿದ ಘಟನೆ ಕಡಬ ತಾಲೂಕಿನ ಸವಣೂರು ಸಮೀಪದ ಪುಣ್ಚಪ್ಪಾಡಿ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಪ್ರಮೋದ್ ಬೊಳ್ಳಾಜೆ ಪತ್ನಿ ಸುಚಿತ್ರಾ (30) ಎಂದು ಗುರುತಿಸಲಾಗಿದೆ. ಸುಚಿತ್ರ ಅವರು ಮಹಿಳೆಯಾಗಿ ತೆಂಗಿನಕಾಯಿ ಕೀಳುವ ಕಾಯಕದಲ್ಲಿ ತೊಡಕಿಸಿಕೊಂಡಿದ್ದರಿಂದ ಅವರ ಈ ಕೆಲಸಕ್ಕೆ ಮೆಚ್ಚುಗೆ ವ್ಯಕ್ತಪಡಿಸಿ ಹಲವಾರು ಸಂಘ-ಸಂಸ್ಥೆಗಳು ಪ್ರಶಸ್ತಿ ನೀಡಿ ಗೌರವಿಸಿತ್ತು. ಮೃತರು ಪತಿ, ಇಬ್ಬರು ಮಕ್ಕಳು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

Read More