Subscribe to Updates
Get the latest creative news from FooBar about art, design and business.
Author: admin
ಬಂಟ್ವಾಳ, ಜು. 22: ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ಮನೆಯ ಮಹಡಿ ಮೇಲೆ ಬಿದ್ದ ಘಟನೆ ವಗ್ಗ ಸಮೀಪದ ಬಾಂಬಿಲ ಎಂಬಲ್ಲಿ ನಡೆದಿದೆ. ಲಾರಿಚಾಲಕ ಅಲ್ಪಸ್ವಲ್ಪ ಗಾಯಗಳೊಂದಿಗೆ ಪಾರಾಗಿದ್ದಾನೆ. ಬಾಂಬಿಲ ಆಶ್ಬಕ್ ಎಂಬವರ ಮನೆಯ ಮಹಡಿಗೆ ಲಾರಿ ಬಿದ್ದ ಪರಿಣಾಮ ಮನೆಗೆ ಹಾನಿಯಾಗಿದೆ.ಮಂಗಳೂರಿನಿಂದ ಬೆಳ್ತಂಗಡಿ ಕಡೆಗೆ ಹೋಗುತ್ತಿದ್ದ ಲಾರಿ ಮಧ್ಯ ರಾತ್ರಿ ಬಾಂಬಿಲ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಮನೆಯ ಮಹಡಿ ಮೇಲೆ ಬಿದ್ದಿದೆ ಎನ್ನಲಾಗಿದೆ.
ಮಂಗಳೂರು, ಜು. 21: ನೀರು ತುಂಬಿದ್ದ ಬಕೆಟ್ ಗೆ ಬಿದ್ದು ಒಂದು ವರ್ಷ ಎಂಟು ತಿಂಗಳ ಮಗು ಮೃತಪಟ್ಟಿರುವ ಘಟನೆ ಕಾವೂರಿನಲ್ಲಿ ನಡೆದಿದೆ. ಕಾವೂರು ಮಸೀದಿ ಬಳಿ ಬಾಡಿಗೆ ಮನೆಯಲ್ಲಿ ವಾಸವಿದ್ದ ಫಿರೋಝ್ ಅನ್ಸಾರಿ ಎಂಬವರ ಪುತ್ರಿ ಆಯಿಶ ಮೃತಪಟ್ಟಿರುವ ಮಗು ಎಂದು ಹೇಳಲಾಗಿದೆ. ಬುಧವಾರ ಸಂಜೆ ಮಗು ಮನೆಯಲ್ಲಿ ಆಟವಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ನೀರು ತುಂಬಿದ್ದ ಬಕೆಟ್ ಗೆ ಬಿದ್ದು ಮೃತಪಟ್ಟಿದೆ ಎನ್ನಲಾಗಿದೆ. ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳೂರು, ಜು. 20 : ರಸ್ತೆ ವಿಭಜಕಕ್ಕೆ ಬೈಕ್ ಢಿಕ್ಕಿ ಹೊಡೆದು ಇಂಜಿನಿಯರಿಂಗ್ ವಿದ್ಯಾರ್ಥಿ ಸಾವನ್ನಪ್ಪಿದ ಘಟನೆ ಬುಧವಾರ ಮಂಗಳೂರಿನಲ್ಲಿ ಸಂಭವಿಸಿದೆ. ಮೃತ ಯುವಕನನ್ನು ವಿದ್ಯಾರ್ಥಿ ಮಹಮ್ಮದ್ ನಶತ್(21) ಎಂದು ಗುರುತಿಸಲಾಗಿದೆ. ಮಹಮ್ಮದ್ ನಶತ್ ಮೂಲತಃ ಉಪ್ಪಳದವರಾಗಿದ್ದು,ಪಡೀಲ್ ಕಡೆಯಿಂದ ವಳಚ್ಚಿಲ್ ಕಾಲೇಜು ಕಡೆಗೆ ಬೈಕಿನಲ್ಲಿ ತೆರಳುತ್ತಿದ್ದಾಗ, ಬೈಕ್ ಸ್ಕಿಡ್ ಆಗಿ ಡಿವೈಡರ್ ಗೆ ಬಡಿದು ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡು ಮೃತಪಟ್ಟಿದ್ದಾನೆ ಸಾವನ್ನಪ್ಪಿದ್ದಾನೆ ಎನ್ನಲಾಗಿದೆ.
ಉಡುಪಿ, ಜು. 13: ಉಡುಪಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ವಿದ್ಯಾಕುಮಾರಿ ಕೆ. ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ ಇದ್ದ ಉಡುಪಿ ಜಿಲ್ಲಾಧಿಕಾರಿ ಕೂರ್ಮರಾವ್ ಅವರು ವರ್ಗವಣೆಯಾಗಿದ್ದಾರೆ. ವಿದ್ಯಾಕುಮಾರಿ ಕೆ. ಅವರು ಈ ಹಿಂದೆ ಉಡುಪಿ ಜಿಲ್ಲೆಯ ಎಡಿಸಿಯಾಗಿ ಸೇವೆ ಸಲ್ಲಿಸಿದ್ದಾರೆ.
ನವದೆಹಲಿ,ಜು. 11: ದೆಹಲಿ – ಮೀರತ್ ಎಕ್ಸ್‌ಪ್ರೆಸ್ ವೇಯಲ್ಲಿ ಶಾಲಾ ಬಸ್ ಮತ್ತು ಕಾರು ನಡುವೆ ಅಪಘಾತ ಸಂಭವಿಸಿ 6 ಮಂದಿ ಮೃತಪಟ್ಟಿರುವ ಘಟನೆ ಗಾಜಿಯಾಬಾದ್ ನಲ್ಲಿ ಮಂಗಳವಾರ ನಡೆದಿದೆ. ಈ ಅಪಘಾತದಲ್ಲಿ ಕಾರಿನಲ್ಲಿದ್ದ ಒಂದೇ ಕುಟುಂಬದ 6 ಸದಸ್ಯರು ಸಾವನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಬಸ್ನಲ್ಲಿ ಯಾವುದೇ ವಿದ್ಯಾರ್ಥಿಗಳು ಇರಲಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಬಸ್ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ.
ಬೆಳ್ತಂಗಡಿ,ಜು. 10 : ದ್ವಿಚಕ್ರ ವಾಹನಕ್ಕೆ ಪಿಕಪ್ ಡಿಕ್ಕಿ ಹೊಡೆದು ಸ್ಥಳದಲ್ಲೇ ದ್ವಿಚಕ್ರ ಸವಾರ ಸಾವನ್ನಪ್ಪಿದ ಘಟನೆ ಕುಪ್ಪೆಟ್ಟಿಯಲ್ಲಿ ನಡೆದಿದೆ. ಮೃತರನ್ನು ಶುಂಠಿಪಲಿಕೆ ನಿವಾಸಿ ಅಬೂಬಕರ್ ಎಂದು ಗುರುತಿಸಲಾಗಿದೆ.ಬೆಳ್ತಂಗಡಿ ಊರುವಲು ಗ್ರಾಮದ ಕುಪ್ಪೆಟ್ಟಿ ರಸ್ತೆ ಮಜ್ಜೆ ಎಂಬಲ್ಲಿ ಈ ಅಪಘಾತ ನಡೆದಿದೆ. ಅಪಘಾತದಲ್ಲಿ ಮೃತರ ಪತ್ನಿ ಗಂಭೀರ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಪುತ್ತೂರು ಸಂಚಾರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾಸರಗೋಡು, ಜು. 09 : ಆಟೊ ರಿಕ್ಷಾವೊಂದು ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದುಆಟೋ ಚಾಲಕ ಸಾವನಪ್ಪಿದ ಘಟನೆ ಕುಂಬಳೆ ಪೊಲೀಸ್ ಠಾಣೆ ವ್ಯಾಪ್ತಿಯ ಪೆರ್ಮುದೆ ಬಳಿ ನಡೆದಿದೆ. ಮೃತರನ್ನು ಚೇವಾರ್ ಮಿತ್ತಡ್ಕದ ಕಿಶೋರ್ ಯಾನೆ ಪ್ರಕಾಶ್ ಸಿ. ಎಚ್ (34) ಎಂದು ಗುರುತಿಸಲಾಗಿದೆ. ಚೇವಾರ್ ನಲ್ಲಿ ಕಿಶೋರ್ ಆಟೋರಿಕ್ಷಾ ಬಾಡಿಗೆ ನಡೆಸುತ್ತಿದ್ದು, ರವಿವಾರ ಬಾಡಿಗೆಗೆ ತೆರಳಿ ಮರಳುತ್ತಿದ್ದಾಗ ರಸ್ತೆ ಬದಿ ಇಡಲಾಗಿದ್ದ ಇಂಟರ್ ಲಾಕ್ ಗೆ ಬಡಿದು ರಿಕ್ಷಾ ಮಗುಚಿ ಬಿದ್ದಿದೆ. ರಿಕ್ಷಾದಡಿ ಸಿಲುಕಿದ್ದ ಕಿಶೋರ್ ನನ್ನು ನಾಗರಿಕರು ಆಸ್ಪತ್ರೆಗೆ ತಲಪಿಸಿದರೂ ಜೀವ ಉಳಿಸಲಾಗಲಿಲ್ಲ.
ಮಂಗಳೂರು ಜು. 08 : ಚಿಕ್ಕಬಳ್ಳಾಪುರದ ಉಪವಿಭಾಗಾಧಿಕಾರಿಯಾಗಿದ್ದ ಡಾ.ಜಿ.ಸಂತೋಷ್ ಕುಮಾರ್ ಅವರನ್ನು ದಕ್ಷಿಣ ಕನ್ನಡ ಜಿಲ್ಲಾ ಅಪರ ಜಿಲ್ಲಾಧಿಕಾರಿ ಮತ್ತು ಅಪರ ದಂಡಾಧಿಕಾರಿ ಹುದ್ದೆಗೆ ನಿಯುಕ್ತಿಗೊಳಿಸಿ ಸರಕಾರ ಶುಕ್ರವಾರ ಆದೇಶ ನೀಡಿದೆ. ದಕ್ಷಿಣ ಕನ್ನಡ ಜಿಲ್ಲಾ ಅಪರ ಜಿಲ್ಲಾಧಿಕಾರಿಯಾಗಿದ್ದ ಎಚ್.ಕೃಷ್ಣಮೂರ್ತಿ ವರ್ಗಾವಣೆಗೊಂಡ ಹಿನ್ನೆಲೆಯಲ್ಲಿ ಹುದ್ದೆ ಖಾಲಿಯಾಗಿತ್ತು. ಹೀಗಾಗಿ ಡಾ. ಸಂತೋಷ ಕುಮಾರ್ ಅವರನ್ನು ಖಾಲಿ ಇದ್ದ ಹುದ್ದೆಗೆ ನೇಮಕ ಮಾಡಲಾಗಿದೆ.
ಕಾರ್ಕಳ, ಜು. ೦7: ಚಲಿಸುತ್ತಿದ್ದ ಬೈಕ್ ಮೇಲೆ ಬೃಹತ್ ಗಾತ್ರದ ಮರವೊಂದು ಉರುಳಿ ಬಿದ್ದ ಪರಿಣಾಮ ಬೈಕ್ ಸವಾರ ಸಾವನ್ನಪ್ಪಿದ ಘಟನೆ ಬೆಳ್ಮಣ್ ಪೇಟೆಯಲ್ಲಿ ಗುರುವಾರ ನಡೆದಿದೆ. ಮೃತರನ್ನು ಪ್ರವೀಣ್ ಆಚಾರ್ಯ ಎಂದು ಗುರುತಿಸಲಾಗಿದೆ. ಪ್ರವೀಣ್ ಆಚಾರ್ಯ ಅವರು ಬೈಕ್ ನಲ್ಲಿ ಸಂಚರಿಸುತ್ತಿದ್ದ ವೇಳೆ ರಸ್ತೆ ಪಕ್ಕದಲ್ಲಿದ್ದ ಬೃಹತ್ ಗಾತ್ರದ ಮರವೊಂದು ಉರುಳಿ ಬಿದ್ದಿದ್ದು,ಮರದಡಿಯಲ್ಲಿ ಸಿಲುಕಿಕೊಂಡಿದ್ದ ಅವರನ್ನುತಕ್ಷಣ ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದರಾದರೂ ಅಷ್ಟರಲ್ಲಿ ಅವರು ಕೊನೆಯುಸಿರೆಳೆದಿದ್ದರು ಎನ್ನಲಾಗಿದೆ. ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ.
ಪುತ್ತೂರು, ಜು. 06: ಕಾರು ಅಪಘಾತ ಸಂಭವಿಸಿ ವಿದ್ಯಾರ್ಥಿನಿಯೊಬ್ಬರು ಮೃತಪಟ್ಟಿರುವ ಘಟನೆ ತುಂಬೆ ಸಮೀಪದ ರಾಮಲ್ ಕಟ್ಟೆ ಎಂಬಲ್ಲಿ ಗುರುವಾರ ನಡೆದಿದೆ. ಮೃತರನ್ನು ಮಂಗಳೂರು ಸಂತ ಅಲೋಶಿಯಸ್ ಕಾಲೇಜಿನ ಬಿಬಿಎಂ ವಿದ್ಯಾರ್ಥಿನಿ, ಪುತ್ತೂರು ಕೂರ್ನಡ್ಕ ನಿವಾಸಿ ಅಬ್ದುಲ್ ಮಜೀದ್ ಅವರ ಪುತ್ರಿ ಖತೀಜತ್ ಹನಾ (19) ಎಂದು ಗುರಿತಿಸಲಾಗಿದೆ. ಖತೀಜತ್ ಹನಾ ಇವರು ಪುತ್ತೂರಿನಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯೊಂದಕ್ಕೆ ಹೋಗುತ್ತಿದ್ದ ವೇಳೆ ರಾಮಲ್ ಕಟ್ಟೆ ತಲುಪಿದಾಗ ಮಳೆ ಜೋರಾಗಿ ಸುರಿಯುತ್ತಿದ್ದ ಕಾರಣ ಚಾಲಕನ ನಿಯಂತ್ರಣ ತಪ್ಪಿ ಕಾರು ರಸ್ತೆ ಬದಿಯ ಗುಡ್ಡಕ್ಕೆ ಗುದ್ದಿ ಪಲ್ಟಿಯಾಗಿದೆ ಈ ವೇಳೆ ಗಂಭೀರ ಗಾಯಗೊಂಡ ಖತೀಜತ್ ಹನಾ ಅವರನ್ನು ಆಸ್ಪತ್ರೆಗೆ ಕೊಂಡೊಯ್ಯಲಾಗಿತ್ತದರೂ ಅದಾಗಲೇ ಆಕೆ ಮೃತಪಟ್ಟಿದ್ದಾರೆ ಎನ್ನಲಾಗಿದೆ .ಇವರ ಜೊತೆಗಿದ್ದ ಈಕೆಯ ತಾಯಿ ಮತ್ತು ಚಾಲಕ ಸಣ್ಣ ಪುಟ್ಟ ಗಾಯಗಳಿಂದ ಪಾರಾಗಿದ್ದಾರೆ ಎಂದು ಹೇಳಲಾಗಿದೆ. ಬಂಟ್ವಾಳ ಸಂಚಾರ ಠಾಣಾಧಿಕಾರಿ ಎಸ್.ಐ.ಸುತೇಶ್ ಮತ್ತು ಸಿಬ್ಬಂದಿ ಸ್ಥಳಕ್ಕೆ ಬೇಟಿ ನೀಡಿದ್ದಾರೆ.












