Subscribe to Updates
Get the latest creative news from FooBar about art, design and business.
Author: admin
ಮೂಡುಬಿದಿರೆ, ಜ. 28 : ಶಿರ್ತಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ (ನಿ) ಇದರ ನೂತನ ಕಚೇರಿಯನ್ನು ಎಸ್‌ಸಿಡಿಸಿಸಿ ಬ್ಯಾಂಕ್ ನ ಅಧ್ಯಕ್ಷರಾದ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರು ಸೋಮವಾರ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಕಲ್ಲಬೆಟ್ಟು ಸಹಕಾರಿ ಸಂಘದಿಂದ ವಿಭಜನೆಗೊಂಡು ಪ್ರತ್ಯೇಕ ಅಸ್ತಿತ್ವಕ್ಕೆ ಬಂದಿರುವ ಶಿರ್ತಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವು ಸ್ಥಳೀಯ ಜನತೆಗೆ ಉತ್ತಮ ಹಾಗೂ ಪರಿಣಾಮಕಾರಿ ಸೇವೆ ನೀಡಲು ಸಾಧ್ಯವಾಗಲಿದೆ. ಈ ಭಾಗದ ರೈತರಿಗೆ ಕೃಷಿ ಸಾಲ ಸೌಲಭ್ಯ ಲಭಿಸಬೇಕು. ಪ್ರವೀಣ್ ಕುಮಾರ್ ಅವರ ನೇತೃತ್ವದಲ್ಲಿ ಈ ಸಂಘ ಸದೃಢವಾಗಿ ಬೆಳೆಯಲಿ ಎಂದರು. ಈ ಸಂದರ್ಭದಲ್ಲಿ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಹಾಗೂ ಶಿರ್ತಾಡಿ ಸಹಕಾರ ಸಂಘದ ಅಧ್ಯಕ್ಷ ಪ್ರವೀಣ್ ಕುಮಾರ್ ಅವರನ್ನು ಸನ್ಮಾನಿಸಲಾಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಾಜಿ ಸಚಿವ ಅಭಯಚಂದ್ರ ಜೈನ್ ವಹಿಸಿದ್ದರು. ಎಸ್‌ಸಿಡಿಸಿಸಿ ಬ್ಯಾಂಕ್ ನಿರ್ದೇಶಕ ಭಾಸ್ಕರ್ ಎಸ್. ಕೋಟ್ಯಾನ್ ಪಡಿತರ ವಿಭಾಗವನ್ನು ಉದ್ಘಾಟಿಸಿದರು. ಎಕ್ಸಲೆಂಟ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ರಾದ…
ಬೆಂಗಳೂರು,ಜ. 27 : ಬೆಂಗಳೂರಿನ ಸೇಂಟ್ ಜೋಸೆಫ್ ವಿಶ್ವವಿದ್ಯಾಲಯದ (SJU) ಸಂವಹನ ಮತ್ತು ಮಾಧ್ಯಮ ಅಧ್ಯಯನ ಶಾಲೆಯ (SCMS) ಆಶ್ರಯದಲ್ಲಿ ಹತ್ತನೇ ಆವೃತ್ತಿಯ ‘ಮೀಡಿಯಾಕಾನ್’ ಅಂತರಾಷ್ಟ್ರೀಯ ಸಮ್ಮೇಳನ ಹಾಗೂ ಸಂಘದ ಉತ್ಸವಗಳಿಗೆ ಜ. 23ರ ಶುಕ್ರವಾರದಂದು ವಿಶ್ವವಿದ್ಯಾಲಯದ ಸಭಾಂಗಣದಲ್ಲಿ ಅದ್ಧೂರಿ ಚಾಲನೆ ನೀಡಲಾಯಿತು. ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದ ಖ್ಯಾತ ಚಲನಚಿತ್ರ ನಿರ್ದೇಶಕ ದಿಬಾಕರ್ ಬ್ಯಾನರ್ಜಿ ಅವರು, ಅಧಿಕಾರ ಮತ್ತು ಪ್ರಬಲ ನಿರೂಪಣೆಗಳ (dominant narratives) ಕುರಿತು ವಿದ್ಯಾರ್ಥಿಗಳಿಗೆ ಮಹತ್ವದ ಕಿವಿಮಾತು ಹೇಳಿದರು. ಜನಪ್ರಿಯತೆ (populism) ಮತ್ತು ಸರ್ವಾಧಿಕಾರತ್ವದಂತಹ ಶಕ್ತಿಗಳು ಇನ್ನು ಮುಂದೆ ಕೇವಲ ರಾಜಕೀಯ ಸಿದ್ಧಾಂತಗಳಾಗಿ ಉಳಿಯದೆ, ದೈನಂದಿನ ನಿರ್ಧಾರಗಳ ಮೇಲೆ ಪ್ರಭಾವ ಬೀರುತ್ತವೆ. ಆದ್ದರಿಂದ ವಿದ್ಯಾರ್ಥಿಗಳು ಬೌದ್ಧಿಕವಾಗಿ ತಮ್ಮನ್ನು ತಾವು ಸನ್ನದ್ಧರನ್ನಾಗಿಸಿಕೊಳ್ಳಬೇಕು ಎಂದು ಅವರು ಅಭಿಪ್ರಾಯಪಟ್ಟರು. ಮುಂಬರುವ ಸವಾಲುಗಳನ್ನು ಎದುರಿಸಲು ಮತ್ತು ಸಾಮಾಜಿಕ-ರಾಜಕೀಯ ಸಂಕೀರ್ಣತೆಗಳನ್ನು ನಿಭಾಯಿಸಲು ಪ್ರತಿ ನಿಮಿಷವೂ ನಿಮ್ಮ ಕನಸುಗಳನ್ನು ಸಾಕಾರಗೊಳಿಸುವತ್ತ ಮತ್ತು ಮಿದುಳಿಗೆ ಕೆಲಸ ಕೊಡುವ ನಿಟ್ಟಿನಲ್ಲಿ ಶ್ರಮಿಸಬೇಕು ಎಂದು ಅವರು ಯುವಜನತೆಗೆ…
ಉಡುಪಿ, ಜ. 26 : ಸ್ಕೂಟರ್ ಗೆ ಕಂಟೈನರ್ ಲಾರಿಯೊಂದು ಢಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರರೊಬ್ಬರು ಸ್ಥಳದಲ್ಲಿಯೇ ಸಾವನಪ್ಪಿದ ಘಟನೆ ಕಲ್ಸಂಕ ಜಂಕ್ಷನ್ ಬಳಿಯ ಪಾಕಶಾಲೆ ಎದುರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಮೃತರನ್ನು ಮಣಿಪಾಲದ ಅವಿನಾಶ್ (29) ಎಂದು ಗುರುತಿಸಲಾಗಿದೆ.ಉಡುಪಿಯಿಂದ ಮಣಿಪಾಲ ಕಡೆ ಹೋಗುತ್ತಿದ್ದ ಕಂಟೈನರ್ ಲಾರಿಯು ಸ್ಕೂಟರ್ ಗೆ ಢಿಕ್ಕಿ ಹೊಡೆದಿದ್ದು, ಗಂಭೀರವಾಗಿ ಗಾಯಗೊಂಡ ಸ್ಕೂಟರ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಉಡುಪಿ ಸಂಚಾರ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಮಂಗಳೂರು, ಜ. 25: ಹಂಪನಕಟ್ಟೆಯಲ್ಲಿರುವ ಅಕ್ಬರ್ ಕಾಂಪ್ಲೆಕ್ಸ್ನಲ್ಲಿ ಶನಿವಾರ ತಡರಾತ್ರಿ ಅಗ್ನಿ ಅವಘಡ ಸಂಭವಿಸಿದ್ದು, ಕಟ್ಟಡದಲ್ಲಿದ್ದ ಹಲವು ಅಂಗಡಿಗಳು ಬೆಂಕಿಗೆ ಆಹುತಿಯಾಗಿವೆ. ಅಗ್ನಿ ಅವಘಡದಲ್ಲಿ ಅಪಾರ ಪ್ರಮಾಣದ ಆಸ್ತಿ ಪಾಸ್ತಿ ನಷ್ಟವಾಗಿದೆ ಎಂದು ವರದಿಯಾಗಿದೆ. ಬೆಂಕಿಯಿಂದಾಗಿ ಪರಿಸರದಲ್ಲಿ ದಟ್ಟವಾದ ಹೊಗೆ ಆವರಿಸಿದ್ದು, ಪಕ್ಕದ ಲಾಡ್ಜ್ನಲ್ಲಿದ್ದವರು ಇಂದರಿಂದ ತೊಂದರೆ ಅನುಭವಿಸಿದ್ದಾರೆಎಂದು ಹೇಳಲಾಗಿದೆ. ಹೇಗೆ ಹೊತ್ತಿಕೊಂಡಿತು ಇದರ ಬಗ್ಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲವಾದರೂ, ಪ್ರಾಥಮಿಕ ತನಿಖೆಯ ಪ್ರಕಾರ ಶಾರ್ಟ್ ಸರ್ಕ್ಯೂಟ್ ಈ ಅವಘಡಕ್ಕೆ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ. ಪೊಲೀಸರು, ಅಗ್ನಿ ಶಾಮಕ ದಳದ ಸಿಬ್ಬಂದಿ ಘಟನಾ ಸ್ಥಳಕ್ಕೆ ಧಾವಿಸಿ ಕಾರ್ಯಾಚರಣೆ ನಡೆಸಿದ್ದಾರೆ.
ಮಂಗಳೂರು, ಜ.24 : ಜಯ-ವಿಜಯ ಜೋಡುಕರೆ ಕಂಬಳ ಸಮಿತಿ (ರಿ) ಜಪ್ಪಿನಮೊಗರು ಇವರ ನೇತೃತ್ವದಲ್ಲಿ ಮನ್ಕುತೋಟಗುತ್ತು ಮತ್ತು ನಾಡಾಜೆಗುತ್ತು ಕೀರ್ತಿಶೀಷ ಜೆ. ಜಯಗಂಗಾಧರ ಶೆಟ್ಟಿಯವರ ಸ್ಮರಣಾರ್ಥ 16ನೇ ವರ್ಷದ ಹೊನಲು ಬೆಳಕಿನ ಜಯ-ವಿಜಯ ಜೋಡುಕರೆ ಕಂಬಳವು ಜಪ್ಪಿನಮೊಗರು ನೇತ್ರಾವತಿ ನದಿ ತೀರದಲ್ಲಿ ಫೆ 14 ಮತ್ತು 15 ರಂದು ನಡೆಯಲಿದೆ ಎಂದು ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರು ಮತ್ತು ಸಮಿತಿಯ ಗೌರವಾಧ್ಯಕ್ಷರಾದ ಡಿ. ವೇದವ್ಯಾಸ ಕಾಮತ್ ಅವರು ನಗರದಲ್ಲಿ ನರೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಕಂಬಳದ ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಿ ಮಾತಾನಾಡಿ ಅವರು, ಫೆ 14 ರಂದು ಬೆಳಿಗ್ಗೆ 8.30ಕ್ಕೆ ಕರಾವಳಿ ಕಾಲೇಜು ಸಮೂಹ ಸಂಸ್ಥೆಗಳು ಮಂಗಳೂರು ಇದರ ಸ್ಥಾಪಕಾಧ್ಯಕ್ಷರಾಗಿರುವ ಎಸ್. ಗಣೇಶ್ ರಾವ್ ಇವರ ಅಧ್ಯಕ್ಷತೆಯಲ್ಲಿ, ಅನಂತಪದ್ಮನಾಭ ಅಸ್ರಣ್ಣರ ಆಶೀರ್ವಚನದೊಂದಿಗೆ,ವೇದಮೂರ್ತಿ ಬ್ರಹ್ಮಶ್ರೀ ವಿಠಲದಾಸ್ ತಂತ್ರಿವರ್ಯರಿಂದ ಕಂಬಳವು ಉದ್ಘಾಟನೆಗೊಳ್ಳಲಿದೆ.ಸುಬ್ಬಯ್ಯ ಭಂಡಾರಿ ಪಟ್ಟದ ಯಜಮಾನರು ಜಪ್ಪುಗುಡ್ಡೆಗುತ್ತು ಹಾಗೂ ಇತರ ಅನೇಕ ಗಣ್ಯ ಅತಿಥಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿರಲಿದ್ದಾರೆ ಎಂದರು.…
ಮಂಗಳೂರು, ಜ.23 : ಕದ್ರಿ ಶ್ರೀ ಮಂಜುನಾಥ ದೇವಸ್ಥಾನದಲ್ಲಿ ವರ್ಷಂಪ್ರತಿ ನಡೆಯುವ ವರ್ಷಾವಧಿ ಜಾತ್ರೆಯು ಜ.14 ಬುಧವಾರ ದಿಂದ ಜ.24 ಶನಿವಾರ ತನಕ ನಡೆಯುತ್ತಿದೆ. ಜ.21 ಬುಧವಾರದಂದು ಕದ್ರಿ ಶ್ರೀ ಮಂಜುನಾಥ ಕ್ಷೇತ್ರದಲ್ಲಿ ವರ್ಷಾವಧಿ ಮನ್ಮಹಾರಥೋತ್ಸವವು ವೈಭವದಿಂದ ನೆರವೇರಿತು. ಕದ್ರಿ ಯೋಗೀಶ್ವರ ಮಠದ ಶ್ರೀ ರಾಜಾ ನಿರ್ಮಲ್‌ನಾಥಜೀ ದೇವಸ್ಥಾನಕ್ಕೆ ಆಗಮಿಸಿ ಮಂಜುನಾಥ ದೇವರ ದರ್ಶನ ಪಡೆದರು. ಬಳಿಕ ಅವರು ರಥಕ್ಕೆ ಒಂದು ಸುತ್ತು ಹಾಕಿ,ತೆಂಗಿನಕಾಯಿ ಒಡೆದು ಕುದುರೆ ಏರಿ ಮುಂದುವರಿಯುತ್ತಿದ್ದಂತೆ ಭಕ್ತರೆಲ್ಲರೂ ರಥ ಎಳೆದು ದೇವಸ್ಥಾನಕ್ಕೆ ಮೂರು ಸುತ್ತು ಪ್ರದಕ್ಷಿಣೆ ಬಂದರು. ಮಧ್ಯಾಹ್ನ 12ಕ್ಕೆ ಮಹಾಪೂಜೆ, 1.30ಕ್ಕೆ ಮಂಜುನಾಥ ದೇವರ ರಥಾರೋಹಣ ನಡೆಯಿತು. ಸಂಜೆ ಮಹಾರಥೋತ್ಸವದ ನಂತರ ದೇವರ ದರ್ಶನ ಬಲಿ, ಬೆಳ್ಳಿರಥೋತ್ಸವ, ಚಂದ್ರಮಂಡಲ ಉತ್ಸವ ನಡೆಯಿತು. ಬಳಿಕ ಮಹಾಪೂಜೆ, ಭೂತಬಲಿ, ಕವಾಟ ಬಂಧನ ಧ್ವಜಾವರೋಹಣ, ನಿತ್ಯ ಬಲಿ ನೆರವೇರಿತು. ಜ. 24ರಂದು ಶ್ರೀ ದೇಗುಲದಿಂದ ಶ್ರೀ ಮಲರಾಯ ದೈವದ ಭಂಡಾರ ಹೊರಡುವುದು, ಮಧ್ಯಾಹ್ನ 12ಕ್ಕೆ ಸಂಪ್ರೋಕ್ಷಣೆ, ಶ್ರೀ ಅಣ್ಣಪ್ಪ ದೈವಕ್ಕೆ…
ಶ್ರೀನಗರ, ಜ. 22 : ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಶಸ್ತ್ರಸಜ್ಜಿತ ಸೇನಾ ವಾಹನವು ಸ್ಕಿಡ್ ಆಗಿ 200 ಅಡಿ ಆಳದ ಕಮರಿಗೆ ಉರುಳಿ ಬಿದ್ದ ಪರಿಣಾಮ ಹತ್ತು ಮಂದಿ ಸಿಬ್ಬಂದಿ ಸಾವನ್ನಪ್ಪಿದ ಘಟನೆ ಗುರುವಾರ ನಡೆದಿದೆ. 17 ಜನರಿದ್ದ ಸೇನಾ ವಾಹನವು ಎತ್ತರದ ಪೋಸ್ಟ್ ಗೆ ಹೋಗುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಭದೇರ್ವಾ-ಚಂಬಾ ರಸ್ತೆಯ ಖನ್ನಿ ಟಾಪ್‌ನಲ್ಲಿರುವ 200 ಅಡಿ ಆಳದ ಕಮರಿಗೆ ಉರುಳಿ ಬಿದ್ದಿದೆ. ಪರಿಣಾಮ ಹತ್ತು ಮಂದಿ ಸಿಬ್ಬಂದಿ ಸಾವನ್ನಪ್ಪಿದ್ದಾರೆ ಮತ್ತು ಏಳು ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಅಪಘಾತ ಸಂಭವಿಸಿದ ತಕ್ಷಣ ಸೇನೆ ರಕ್ಷಣಾ ಕಾರ್ಯಾಚರಣೆ ಪ್ರಾರಂಭಿಸಿದೆ. ಪೊಲೀಸರು ಮತ್ತು ಸ್ಥಳೀಯ ನಿವಾಸಿಗಳು ಗಾಯಗೊಂಡ ಸೈನಿಕರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.
ಬೆಂಗಳೂರು,ಜ.21 : ಸೇಂಟ್ ಜೋಸೆಫ್ ವಿಶ್ವವಿದ್ಯಾಲಯದ ಐಇಇಇ (IEEE) ವಿದ್ಯಾರ್ಥಿ ಘಟಕದ ಅತ್ಯಂತ ಪ್ರಮುಖ ವಿಭಾಗವಾದ ಕಂಪ್ಯೂಟರ್ ಸೈನ್ಸ್ ಸೊಸೈಟಿಯು, ಜನವರಿ 19ರಂದು ತನ್ನ ಉದ್ಘಾಟನೆ ಮತ್ತು ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ನಡೆಯಿತು. ವಂ| ಡೆನ್ಜಿಲ್ ಲೋಬೋ ಎಸ್.ಜೆ ಅವರು ಪ್ರಾರ್ಥನೆ ನಡೆಸಿಕೊಟ್ಟರು. ನಂತರ ದೀಪ ಬೆಳಗಿಸಲಾಯಿತು. ಕಂಪ್ಯೂಟರ್ ಸೊಸೈಟಿಯ ಸಲಹೆಗಾರರಾದ ಡಾ. ದೀಪಾ ನಾಗಲವಿ ಅವರು ಮುಖ್ಯ ಅತಿಥಿಗಳನ್ನು ಪರಿಚಯಿಸಿದರು. ಮುಖ್ಯ ಅತಿಥಿಗಳಾದ ದೇವೇಂದ್ರ ಗೌಡ ಅವರು ಸಭೆಯನ್ನು ಉದ್ದೇಶಿಸಿ ಮಾತನಾಡಿ, ವಿದ್ಯಾರ್ಥಿಗಳು ಐಇಇಇ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಲು, ತಾಂತ್ರಿಕ ಸಾಮರ್ಥ್ಯಗಳನ್ನು ಹೆಚ್ಚಿಸಿಕೊಳ್ಳಲು, ನಾವೀನ್ಯತೆಯನ್ನು ಅಳವಡಿಸಿಕೊಳ್ಳಲು ಮತ್ತು ನಾಯಕತ್ವದ ಜವಾಬ್ದಾರಿಗಳನ್ನು ಸಮಗ್ರತೆ ಹಾಗೂ ಸಮರ್ಪಣಾ ಮನೋಭಾವದಿಂದ ನಿಭಾಯಿಸಲು ಪ್ರೇರೇಪಿಸಿದರು. ತದನಂತರ ವಿದ್ಯಾರ್ಥಿ ನಾಯಕರಾದ ಕುಮಾರಿ ರಿದಾ ಕ್ವಾಜಿ ಮತ್ತು ಫರ್ಹಾನುಲ್ಲಾ ಸಾಮಿ ಅವರು ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು. ಕಾರ್ಯಕ್ರಮದ ಅತ್ಯಂತ ಪ್ರಮುಖ ಘಟ್ಟವಾದ ಪದಗ್ರಹಣ ಸಮಾರಂಭದಲ್ಲಿ ನೂತನವಾಗಿ ಆಯ್ಕೆಯಾದ ಪದಾಧಿಕಾರಿಗಳನ್ನು ವಿಧ್ಯುಕ್ತವಾಗಿ ಪದವಿಗೇರಿಸಿ ಗೌರವಿಸಲಾಯಿತು.ಇದರ ಬೆನ್ನಲ್ಲೇ ಡಾ. ದೀಪಾ…
ಮಂಗಳೂರು, ಜ.20: ನಗರದ ಹೊಯ್ಗೆ ಬಝಾರ್ ನಲ್ಲಿರುವ ಅಲ್ಬುಕರ್ಕ್ & ಸನ್ಸ್ ಹೆಂಚಿನ ಕಾರ್ಖಾನೆಯಲ್ಲಿ ಮಂಗಳವಾರ ಬೆಂಕಿ ಅವಘಡ ಸಂಭವಿಸಿದೆ. ಕಾರ್ಖಾನೆಯಲ್ಲಿ ಬೆಳಗಿನ ಜಾವ ಬೆಂಕಿ ಕಾಣಿಸಿಕೊಂಡು ಕಾರ್ಖಾನೆ ಆವರಣವನ್ನು ವೇಗವಾಗಿ ವ್ಯಾಪಿಸಿದೆ. ಕಾರ್ಖಾನೆಯ ಆವರಣದಲ್ಲಿ ಹೆಂಚು ಸುಡಲು ಸಂಗ್ರಹಿಸಿಟ್ಟಿದ್ದ ಕಟ್ಟಿಗೆ ಮತ್ತು ಇತರ ದಹ್ಯ ವಸ್ತುಗಳಿದ್ದ ಕಾರಣ ಬೆಂಕಿಯ ತೀವ್ರತೆ ಹೆಚ್ಚಾಗಿತ್ತು. ಬೆಂಕಿ ಅವಘಡದಲ್ಲಿ ಯಾವುದೇ ಜೀವಹಾನಿ ಸಂಭವಿಸಿಲ್ಲ ಎನ್ನಲಾಗಿದೆ ಎಂದು ವರದಿಯಾಗಿದೆ. ಪಾಂಡೇಶ್ವರ ಮತ್ತು ಕದ್ರಿ ಅಗ್ನಿಶಾಮಕ ಠಾಣೆಗಳ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯಾಚರಣೆಯನ್ನು ನಡೆಸಿದ್ದಾರೆ.
ಮಂಗಳೂರು,ಜ.19 : ಮಹಾನಗರ ಪಾಲಿಕೆ ವ್ಯಾಪ್ತಿಯ 32ನೇ ಕದ್ರಿ ಉತ್ತರ ವಾರ್ಡಿನ ಈಡನ್ ಕ್ಲಬ್ ಬಳಿ ಸುಮಾರು 30 ಲಕ್ಷ ರೂ. ವಿಶೇಷ ಅನುದಾನದಲ್ಲಿ ಮುಂದುವರಿದ ಅಭಿವೃದ್ಧಿ ಕಾಮಗಾರಿ ನಡೆಯಲಿದ್ದು ಅದರ ಭೂಮಿ ಪೂಜೆಯು ಶಾಸಕ ವೇದವ್ಯಾಸ ಕಾಮತ್ ರವರ ನೇತೃತ್ವದಲ್ಲಿ ನಡೆಯಿತು. ನಂತರ ಮಾತನಾಡಿದ ಶಾಸಕರು, ಇಲ್ಲಿನ ಸ್ಥಳೀಯರ ಬೇಡಿಕೆಯಂತೆ ಈ ಕಾಮಗಾರಿಗೆ ಅನುದಾನವನ್ನು ಹೊಂದಿಸಿಕೊಳ್ಳಲಾಗಿದ್ದು, ಶೀಘ್ರದಲ್ಲಿ ಕಾಮಗಾರಿ ಮುಗಿದು ಎಲ್ಲರ ಉಪಯೋಗಕ್ಕೆ ಬಳಕೆಯಾದರೆ ಖುಷಿಯ ವಿಚಾರವೆಂದರು. ಈ ಸಂದರ್ಭದಲ್ಲಿ ಸ್ಥಳೀಯ ನಿಕಟಪೂರ್ವ ಮ.ನ.ಪಾ ಸದಸ್ಯರಾದ ಶ್ರೀಮತಿ ಶಕೀಲಾ ಕಾವ, ಶಕ್ತಿಕೇಂದ್ರ ಅಧ್ಯಕ್ಷರಾದ ವೆಂಕಟೇಶ್, ಹರೀಶ್ ಕಾಮತ್, ರಮೇಶ್ ಮುಂಡಾಣ, ಮೋಹನ್ ಪೂಜಾರಿ, ನಿತಿನ್ ಕುಮಾರ್, ಪ್ರವೀಣ್ ನಿಡ್ಡೇಲ್, ಭಾಸ್ಕರಚಂದ್ರ ಶೆಟ್ಟಿ, ಪುರುಷೋತ್ತಮ್ ಶೆಣೈ, ಡಾ. ಸುಧೀಶ್ ರಾವ್, ಸಂತೋಷ್ ಕುಮಾರ್, ರಶ್ಮಿ ಪಿ, ಬಾಲಕೃಷ್ಣ ಶೆಟ್ಟಿ, ಲೋಕೇಶ್, ವರುಣ್ ಅಂಬಟ್, ಕಮಲಾಕ್ಷಿ ಗಂಗಾಧರ ಕದ್ರಿ, ಚೇತನ ನರೇಂದ್ರ, ರಾಮಚಂದ್ರ ದಂಡಕೇರಿ, ನರಸಿಂಹ ಗೌಡ, ಮೋಹನ, ಸವಿತಾ, ಕೆ.ಬಾಲಕೃಷ್ಣ ಶೆಟ್ಟಿ,…












