Subscribe to Updates
Get the latest creative news from FooBar about art, design and business.
Author: admin
ಹೈದರಾಬಾದ್, ಮೇ. 22 : ಕನ್ನಡ, ತಮಿಳು, ಸೇರಿದಂತೆ ಹಲವು ಭಾಷೆಗಳ ಚಿತ್ರಗಳಲ್ಲಿ ನಟಿಸಿದ್ದ ನಟ ಶರತ್ ಬಾಬು (73 ) ಹೈದರಾಬಾದ್ನ ಖಾಸಗಿ ಆಸ್ಪತ್ರೆಯಲ್ಲಿ ಸೋಮವಾರ ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಶರತ್ ಬಾಬು ಅವರು ಹೈದರಾಬಾದ್ನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ ಎನ್ನಲಾಗಿದೆ. ಶರತ್ ಬಾಬು ಅವರ ನಿಧನಕ್ಕೆ ಚಿತ್ರರಂಗದ ಗಣ್ಯರು ಸೇರಿ ಅಭಿಮಾನಿಗಳು ಸಂತಾಪ ಸೂಚಿಸಿದ್ದಾರೆ.
ಮಂಗಳೂರು, ಮೇ. 20:ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಪ್ರಮಾಣ ವಚನ ಸ್ವೀಕರಿಸಿದಂತೆ ದ. ಕ. ಜಿಲ್ಲಾ ಕಾಂಗ್ರೆಸ್ ವತಿಯಿಂದ ಮಲ್ಲಿಕಟ್ಟೆ ಕಾಂಗ್ರೆಸ್ ಭವನದ ಮುಂಭಾಗದಲ್ಲಿ ಪಟಾಕಿ ಸಿಡಿಸಿ ಸಿಹಿ ತಿಂಡಿ ಹಂಚಿ ಸಂಭ್ರಮಿಸಯಿತು. ಈ ಸಂದರ್ಭದಲ್ಲಿ ಮಾಜಿ ಸಚಿವ ಅಭಯಚಂದ್ರ ಜೈನ್, ಮಾಜಿ ಜಿಲ್ಲಾ ಅಧ್ಯಕ್ಷ ಇಬ್ರಾಹಿಂ ಕೊಡಿಜಾಲ್, ಮ.ನ.ಪಾ. ಮಾಜಿ ಮೂಡ ಅಧ್ಯಕ್ಷ ಸುರೇಶ್ ಬಲ್ಲಾಳ್, ವಿಪಕ್ಷ ನಾಯಕ ನವೀನ್ ಡಿ ಸೋಜಾ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಸಾಹುಲ್ ಹಮೀದ್ ಕೆ.ಕೆ., ಶುಭೋದಯ ಆಳ್ವಾ,ನಿರಾಜ್ ಪಾಲ್, ವಿಶ್ವಾಸ್ ಕುಮಾರ್ ದಾಸ್, ಗಣೇಶ್ ಪೂಜಾರಿ, ಸಬಿತಾ ಮಿಸ್ಕಿತ್, ಮಂಜುಳಾ ನಾಯಕ್, ಸರೀಫ್ ಚೊಕ್ಕಬೆಟ್ಟು, ಹನೀಫ್ ಬೆಂಗ್ರೆ, ಪ್ರಶಾಂತ್ ಪೂಜಾರಿ, ಯೋಗೀಶ್ ಕುಮಾರ್, ಸಮರ್ಥ್ ಭಟ್, ಭುವನ್ ಕರ್ಕೇರ, ಇಮ್ರಾನ್ ಎ ಆರ್, ಟಿ ಕೆ ಸುಧೀರ್, ಯಶವಂತ್ ಪ್ರಭು, ಹನೀಫ್ ಸೋಲಾರ್, ಯೋಗೀಶ್ ಕುಮಾರ್, ನಝೀರ್ ಬಜಾಲ್ ಮೊದಲದವರು ಉಪಸ್ಥಿತರಿದ್ದರು.
ಬೆಂಗಳೂರು, ಮೇ. 13: ವಿಧಾನಸಭಾ ಚುನಾವಣೆ ಹೋರಾಟದಲ್ಲಿ ಕಾಂಗ್ರೆಸ್ 135 ಕ್ಷೇತ್ರಗಳಲ್ಲಿ ಜಯ ಗಳಿಸುವ ಮೂಲಕ ಸ್ಪಷ್ಟ ಬಹುಮತದೊಂದಿಗೆ ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿಯಲು ಸಜ್ಜಾಗಿದೆ. ಬಿಜೆಪಿ ಆಡಳಿತ ವಿರೋಧಿ ಅಲೆಗೆ ಕೊಚ್ಚಿ ಹೋಗಿ ಹೀನಾಯ ಸೋಲು ಕಂಡಿದ್ದು, ಕೇವಲ 66 ಕ್ಷೇತ್ರಗಳಲ್ಲಷ್ಟೇ ಗೆಲ್ಲಲು ಶಕ್ತವಾಗಿದೆ. ಜೆಡಿಎಸ್ ಪಕ್ಷ ಕೇವಲ 19 ಸ್ಥಾನಗಳಿಗೆ ತೃಪ್ತಿಪಟ್ಟುಕೊಳ್ಳಬೇಕಾಗಿದೆ. ಈ ಫಲಿತಾಂಶದಿಂದ ಬಿಜೆಪಿ-ಜೆಡಿಎಸ್ ಲೆಕ್ಕಾಚಾರಗಳು ತಲೆಕೆಳಗಾಗಿವೆ. ಈ ಚುನಾವಣೆಯಲ್ಲಿ ರಾಜ್ಯದ ಮತದಾರರು ಸ್ಥಿರ ಸರಕಾರ ಬೇಕೆಂಬ ಉದ್ದೇಶದೊಂದಿಗೆ ಒಂದೇ ಪಕ್ಷದ ಆಡಳಿತಕ್ಕೆ ಬಹುಮತದ ತೀರ್ಪು ನೀಡುವ ಮೂಲಕ ರಾಜಕೀಯ ಪ್ರಜ್ಞೆ ಮೆರೆದಿದ್ದಾರೆ.
ಮಂಗಳೂರು, ಮೇ 10 :ಮಂಗಳೂರು ದಕ್ಷಿಣ ಬಿಜೆಪಿ ಅಭ್ಯರ್ಥಿ ವೇದವ್ಯಾಸ್ ಕಾಮತ್ ಉರ್ವದ ಗಾಂಧಿನಗರ ಶಾಲೆಯಲ್ಲಿ ಮತದಾನ ಮಾಡಿದ್ದಾರೆ. ಮಂಗಳೂರು:ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಇನಾಯತ್ ಅಲಿ ಅವರು ಮಂಗಳೂರಿನ ಸೈಂಟ್ ಆಗ್ನೇಸ್ ಹಿರಿಯ ಪ್ರಾಥಮಿಕ ಶಾಲೆ, ಬೆಂದೂರಿನಲ್ಲಿ ಇನಾಯತ್ ಅಲಿ ಮತ ಚಲಾಯಿಸಿದ್ದಾರೆ. ಮಂಗಳೂರು :ಡಾ.ಭರತ್ ಶೆಟ್ಟಿ ವೈ ಅವರು ಕದ್ರಿ ಕೆಪಿಟಿ ಯ ಬೂತ್ ಸಂಖ್ಯೆ 132ರಲ್ಲಿ ಇಂದು ಬೆಳಗ್ಗೆ ಮತ ಚಲಾಯಿಸಲಿದ್ದಾರೆ. ಮಂಗಳೂರು: ಉಳ್ಳಾಲ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸತೀಶ್ ಕುಂಪಲ ಇವರು ಕುಂಪಲ ಮತಗಟ್ಟೆ ಸಂಖ್ಯೆ 127 ರಲ್ಲಿ ಪತ್ನಿ ಹಾಗೂ ಮಗಳ ಜತೆಗೆ ಬಂದು ಮತ ಚಲಾಯಿಸಿದ್ದಾರೆ. ಮಂಗಳೂರು:ಉಳ್ಳಾಲ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಯು.ಟಿ ಖಾದರ್ ಅವರ ಏಕೈಕ ಪುತ್ರಿ ಹವ್ವಾ ನಸೀಮ ತಮ್ಮ ಮೊದಲ ಹಕ್ಕನ್ನು ಜಾರದಗುಡ್ಡೆ ಶಾಲೆಯಲ್ಲಿ ತಂದೆ, ತಾಯಿಯ ಜೊತೆಗೆ ಮತ ಚಲಾಯಿಸಿದ್ದಾರೆ. ಬಂಟ್ವಾಳ:ಬಂಟ್ವಾಳ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶಾಸಕ ರಾಜೇಶ್ ನಾಯ್ಕ…
ಉಡುಪಿ, ಮೇ 09 : ಸ್ಕೂಟರಿಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಅಂಬಾಗಿಲಿನಿಂದ ಕಲ್ಸಂಕಕ್ಕೆ ಹೋಗುವ ರಸ್ತೆಯಲ್ಲಿ ನಡೆದಿದೆ. ಮೃತರನ್ನು ಪುತ್ತೂರು ಗ್ರಾಮದ ಹನುಮಂತನಗರದ ನಿವಾಸಿ ರವಿಚಂದ್ರ ದೇವಾಡಿಗ (57) ಎಂದು ಗುರುತಿಸಲಾಗಿದೆ. ಇವರು ಸ್ಕೂಟರ್ ಡಿವೈಡರ್ ಬಳಿ ತಿರುಗಿಸುತ್ತಿರುವಾಗ ಅದೇ ರಸ್ತೆಯಲ್ಲಿ ಬರುತ್ತಿದ್ದ ಮಾರುತಿ ಆಲ್ಟೋ ಕಾರು ಸ್ಕೂಟರ್ ಗೆ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸಮೇತ ರಸ್ತೆಗೆ ಬಿದ್ದು ತಲೆಗೆ ಗಂಭೀರವಾಗಿ ಗಾಯಗೊಂಡ ಅವರು ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಉಡುಪಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣದ ದಾಖಲಾಗಿದೆ.
ಮಂಗಳೂರು, ಮೇ 08 : ಸಾರ್ವತ್ರಿಕ ಕರ್ನಾಟಕ ವಿಧಾನಸಭಾ ಚುನಾವಣೆ-2023ಕ್ಕೆ ಸಂಬಂಧಿಸಿದಂತೆ, ಮತದಾರರು ತಮ್ಮ ಹಕ್ಕು ಚಲಾಯಿಸಲು ಅನುಕೂಲವಾಗುವಂತೆ, ಮೇ.10ರ ಬುಧವಾರ ಸಾರ್ವಜನಿಕ ರಜೆ ಘೋಷಿಸಲಾಗಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಿ ಕಚೇರಿಗಳು, ಶಾಲೆಗಳು, ಕಾಲೇಜುಗಳು, ವಿವಿಧ ಸಂಸ್ಥೆಗಳು ಮತ್ತು ಖಾಸಗಿ ಸಂಸ್ಥೆಗಳಿಗೆ ಮೇ.10ರಂದು ಸಾರ್ವತ್ರಿಕ ರಜೆ ಘೋಷಿಸಲಾಗಿದೆ. ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಿರುವ ಎಲ್ಲಾ ಸರ್ಕಾರಿ ನೌಕರರು ಚುನಾವಣಾ ಕರ್ತವ್ಯ ನಿರ್ವಹಿಸಬೇಕು ಎಂದು ಡಿಪಿಎಆರ್‌ನ ಅಧೀನ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುಳ್ಯ : ಹೊಳೆಯಲ್ಲಿ ಮುಳುಗಿ ಸಹೋದರಿಯರು ಸಾವನ್ನಪ್ಪಿದ ಘಟನೆ ಸೋಮವಾರ ಕಡಬ ತಾಲೂಕಿನ ಸುಬ್ರಹ್ಮಣ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಬಳ್ಪ ಸಮೀಪದ ಕೇನ್ಯದ ಕನ್ಕಲ್ ಕುಮಾರಧಾರಾ ನದಿಯ ಪೆಲತಗುಂಡಿಯಲ್ಲಿ ಸಂಭವಿಸಿದೆ. ಸಾವನ್ನಪ್ಪಿದ ಸಹೋದರಿಯರು ಮೂಲತಃ ಬಳ್ಪದ ಕನ್ಕಲ್ ನವರಾಗಿದ್ದು ಬೆಂಗಳೂರಿನಲ್ಲಿ ಎಂಜಿನಿಯರ್ ಆಗಿರುವ ಸತೀಶ್ ಅಮ್ಮಣ್ಣಾಯ ಅವರ ಪುತ್ರಿಯರಾದ ಹಂಸಿತಾ (15) ಹಾಗೂ ಆವಂತಿಕಾ (11) ಎಂದು ಗುರುತಿಸಲಾಗಿದೆ. ರಾತ್ರಿ ವೇಳೆ ಕಾರ್ಯಾಚರಣೆ ನಡೆಸಿ ಇಬ್ಬರ ಮೃತದೇಹ ಪತ್ತೆ ಹಚ್ಚಿ ನದಿಯಿಂದ ಹೊರ ತೆಗೆಯಲಾಯಿತು ಎನ್ನಲಾಗಿದೆ.
ಬಂಟ್ವಾಳ : ಕಾಂಗ್ರೆಸ್ ಅಭ್ಯರ್ಥಿ, ಮಾಜಿಸಚಿವ ಬಿ.ರಮಾನಾಥ ರೈ ಅವರ ಚುನಾವಣಾ ಪ್ರಚಾರದ ಭಾಗವಾಗಿ ಸೋಮವಾರ ಸಂಜೆ ರೋಡ್ ಶೋ ಜರಗಿತು. ಸ್ಟಾರ್ ಪ್ರಚಾರಕರಿಲ್ಲದ ರೋಡ್ ಶೋನಲ್ಲಿ ಹೆಚ್ಚಿನ ಜನ ಸೇರಿದ್ದರು. ಬಂಟ್ವಾಳದ ಕೇಂದ್ರ ಸ್ಥಾನ ಬಿ.ಸಿ.ರೋಡ್ ನಲ್ಲಿ ಕೇಸರಿ, ಬಿಳಿ, ಹಸಿರು ಬಣ್ಣದ ಕಾಂಗ್ರೆಸ್‍ನ ತ್ರಿವರ್ಣ ಧ್ವಜಗಳನ್ನು ಹಿಡಿದ ಕಾರ್ಯಕರ್ತರು, ರೈಯವರ ಅಭಿಮಾನಿಗಳು ಮುಖ್ಯರಸ್ತೆಯಲ್ಲಿ ಹೆಜ್ಜೆ ಹಾಕಿದರು. ಪೊಳಲಿ ದ್ವಾರದ ಕೈಕಂಬ ಬಳಿ ಹಾಕಿದ್ದ ವೇದಿಕೆಯಲ್ಲಿ ಕೊನೆಯ ಚುನಾವಣಾ ಪ್ರಚಾರಸಭೆ ನಡೆಯಿತು. ಐಶಾರಾಮಿ ಜೀವನ ನಡೆಸುವ ಆಸೆಯಿಂದ ಮತ್ತೊಮ್ಮೆ ಚುನಾವಣೆಗೆ ಸ್ಪರ್ಧಿಸಿಲ್ಲ. ಕ್ಷೇತ್ರದಲ್ಲಿ ಆರು ಬಾರಿ ಗೆಲ್ಲಿಸಿ ಶಾಸಕ, ಸಚಿವನನ್ನಾಗಿ ಮಾಡಿದ್ದೀರಿ. ಮತ್ತೆ 9ನೇ ಬಾರಿಗೆ ಸ್ಪರ್ಧಿಸುವ ಅವಕಾಶವನ್ನು ನೀಡಿದ್ದೀರಿ. ಈ ಋಣವನ್ನು ನಾನು ನನ್ನ ಜನ್ಮಜನ್ಮಾಂತರಕ್ಕೂ ಮರೆಯಲು ಸಾಧ್ಯವಿಲ್ಲ. ಈ ಋಣವನ್ನು ತೀರಿಸುವುದಕ್ಕಾಗಿ ಮತ್ತು ನಿಮ್ಮೆಲ್ಲರ ಸೇವೆಗಾಗಿ ಹಾಗೂ ಕ್ಷೇತ್ರದ ಜನರಿಗೆ ಸ್ವಾಭಿಮಾನದ ಬದುಕು ಕಟ್ಟಿಕೊಡುವುದಕ್ಕಾಗಿ ಮತ್ತೊಮ್ಮೆ ಸ್ಪರ್ಧಿಸಿದ್ದೇನೆ ಎಂದರು. ಕಳೆದ ಚುನಾವಣೆಯಲ್ಲಿ ಸತತವಾಗಿ ಅಪಪ್ರಚಾರದ ಮೂಲಕ ನನ್ನನ್ನು…










