Subscribe to Updates
Get the latest creative news from FooBar about art, design and business.
Author: admin
ಕಾಸರಗೋಡು, ಮಾ. 13: ಆಟೋ ರಿಕ್ಷಾ ಚಾಲಕ ನೋರ್ವ ಅವರ ಮನೆ ಸಮೀಪ ಮೃತ ಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಬದಿಯಡ್ಕ ಸಮೀಪದ ಪಳ್ಳ ತ್ತಡ್ಕ ದಲ್ಲಿ ನಡೆದಿದೆ. ಮೃತರನ್ನು ಕುಡ್ಪ oಗುಯಿ ಕಡಾರ್ ಪ ಳ್ಳ ದ ಅಬ್ದುಲ್ ಸಲಾಂ (27) ಎಂದು ಗುರುತಿಸಲಾಗಿದೆ. ಅಬ್ದುಲ್ ಸಲಾಂ ಅವರು ನಾಪತ್ತೆಯಾ ದುದರಿಂದ ಶೋಧ ನಡೆಸಿದಾಗ ಮನೆ ಸಮೀಪದ ಮರವೊಂದರಲ್ಲಿ ನೇಣು ಬಿಗಿದು ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಬದಿಯಡ್ಕ ಪೊಲೀಸರು ಮಹಜರು ನಡೆಸಿ ದ್ದು ,ಕಾಸರಗೋಡು ಆಸ್ಪತ್ರೆ ಯಲ್ಲಿ ಮರಣೋತ್ತರ ಪರೀಕ್ಷೆ ಬಳಿಕ ಸಂಬಂಧಿಕರಿಗೆ ಬಿಟ್ಟು ಕೊಡಲಾಯಿತು ಎನ್ನಲಾಗಿದೆ.
ಹಾಪುರ್, ಮಾ. 12 : ಪೊಲೀಸ್ ಪೇದೆಯೊಬ್ಬರು ತಮ್ಮ ಸೇವಾ ಬಂದೂಕಿನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ. ಕಾನ್ಸ್ಟೇಬಲ್ ಅಂಕಿತ್ ಕುಮಾರ್(25) ಆತ್ಮಹತ್ಯೆಗೆ ಶರಣಾದವರು. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಘಟನೆ ಸಂಬಂಧ ತನಿಖೆ ನಡೆಸಲಾಗುತ್ತಿದೆ ಎಂದು ಹಾಪುರ್ ಪೊಲೀಸ್ ವರಿಷ್ಠಾಧಿಕಾರಿ ಅಭಿಷೇಕ್ ವರ್ಮಾ ತಿಳಿಸಿದ್ದಾರೆ.
ಕಾಪು, ಮಾ. 11 : ಖಾಸಗಿ ಎಕ್ಸ್ ಪ್ರೆಸ್ ಬಸ್ ಢಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದ ಶಾಲಾ ವಿದ್ಯಾರ್ಥಿನಿ ಸಾವನ್ನಪ್ಪಿದ ಘಟನೆ ಶನಿವಾರ ನಡೆದಿದೆ. ಮೃತರನ್ನು ಕಾಪು ಮಹಾದೇವಿ ಪ್ರೌಢಶಾಲೆಯ ಎಂಟನೇ ತರಗತಿ ವಿದ್ಯಾರ್ಥಿನಿ ವರ್ಷಿತಾ ಶೇರ್ವೆಗಾರ (13) ಎಂದು ಗುರುತಿಸಲಾಗಿದೆ ಶನಿವಾರ ಬೆಳಗ್ಗೆ ಶಾಲೆಗೆ ಹೊಗುತ್ತಿದ್ದ ಆಕೆ ರಾಷ್ಟ್ರೀಯ ಹೆದ್ದಾರಿ 66ರ ಮಂದಾರ ಹೊಟೇಲ್ ಬಳಿ ರಸ್ತೆ ದಾಟಲು ನಿಂತಿದ್ದ ವೇಳೆ ಉಡುಪಿಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಎಕ್ಸ್ ಪ್ರೆಸ್ ಬಸ್ ಢಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿತ್ತು. ಅಪಘಾತದಲ್ಲಿ ಬಾಲಕಿಯ ತಲೆಗೆ ಗಂಭೀರ ಏಟಾಗಿದ್ದು ಗಾಯಗೊಂಡಿರುವ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು, ಆದರೆ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾಳೆ ಎನ್ನಲಾಗಿದೆ . ಕಾಪು ಪೊಲೀಸರು ಖಾಸಗಿ ಬಸ್ ಅನ್ನು ವಶಕ್ಕೆ ತೆಗೆದುಕೊಂಡು ತನಿಖೆ ಮುಂದುವರಿಸಿದ್ದಾರೆ.
ಮಂಗಳೂರು, ಮಾ. 10: ರೈಲು ಢಿಕ್ಕಿಯಾಗಿ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ತೊಕ್ಕೊಟ್ಟು ಕಾಪಿಕಾಡಲ್ಲಿ ಗುರುವಾರ ನಡೆದಿದೆ. ಮೃತರನ್ನು ಉಳ್ಳಾಲಬೈಲು ಗೇರು ಕೃಷಿ ಸಂಶೋಧನಾ ಕೇಂದ್ರ ಬಳಿಯ ನಿವಾಸಿ, ಹಿರಿಯ ಸಿವಿಲ್ ಗುತ್ತಿಗೆದಾರ ಜನಾರ್ದನ ಆಚಾರಿ (78) ಎಂದು ಗುರುತಿಸಲಾಗಿದೆ. ಜನಾರ್ದನ ಅವರು ಗುರುವಾರ ಬೆಳಗ್ಗೆ ಮನೆಯಿಂದ ಹೊರಟವರು ಸಮೀಪದ ಕಾಪಿಕಾಡಿನ ರೈಲ್ವೇ ಹಳಿಯಲ್ಲಿ ರೈಲು ಢಿಕ್ಕಿ ಹೊಡೆದು ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಎನ್ನಲಾಗಿದೆ.
ಮಂಗಳೂರು,ಮಾ. 09 : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಬಿಸಿಲ ತಾಪ ಗಣನೀಯವಾಗಿ ಏರಿಕೆಯಾಗುತ್ತಿದ್ದು,ಕರಾವಳಿ ಭಾಗದಲ್ಲಿ ಮತ್ತೊಮ್ಮೆ ದೇಶದಲ್ಲಿಯೇ ಗರಿಷ್ಠ ತಾಪಮಾನ 38.8 ಡಿ.ಸೆ. ದಾಖಲಾಗಿದೆ. ಒಣಹವೆ ಹಾಗೂ ಉತ್ತರದಿಂದ ದಕ್ಷಿಣಕ್ಕೆ ಬೀಸುತ್ತಿರುವ ಗಾಳಿಯಿಂದ ರಾಜ್ಯದಲ್ಲಿ ತಾಪಮಾನ ಒಂದೇ ಸಮನೆ ಏರಿಕೆಯಾಗುತ್ತಿದೆ. ವಾತಾವರಣದಲ್ಲಿ ಬಿಸಿ ಹೆಚ್ಚಾಗಿ ತೇವಾಂಶ ಕಡಿಮೆಯಾಗುತ್ತಿದೆ. ರಾಜ್ಯದಲ್ಲಿ ದಿನದಿಂದ ದಿನಕ್ಕೆ ಬಿಸಿಲ ತಾಪ ಗಣನೀಯವಾಗಿ ಏರಿಕೆಯಾಗುತ್ತಿರುವುದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಈ ಬಾರಿ ಬೇಸಿಗೆಯು ವಾಡಿಕೆಗಿಂತ ಮೊದಲೇ ಪ್ರಾರಂಭವಾಗಿದೆ. ಮಾರ್ಚ್ ಎರಡನೇ ವಾರದಿಂದ ಬಿಸಿಲ ತೀವ್ರತೆ ಮತ್ತಷ್ಟು ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಮಂಗಳೂರು ಮಾ.8: ನಗರದ ಪುರಭವನದಲ್ಲಿ ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಶನ್ ಇದರ 24ನೇ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮವು ಮಾ.7 ಮಂಗಳವಾರದಂದು ಜರಗಿತು.ಮಂಗಳೂರು ದಕ್ಷಿಣ ವಿಧಾನ ಸಭಾ ಕ್ಷೇತ್ರದ ಶಾಸಕರಾದ ವೇದವ್ಯಾಸ ಕಾಮತ್ ಅವರು ಇತರ ಗಣ್ಯರೊಂದಿಗೆ ಸೇರಿ ಈ ಕಾರ್ಯಕ್ರಮವನ್ನು ಉದ್ಘಾಟಿಸಿದರು. ನಂತರ ಸಭೆಯನ್ನು ಉದ್ದೇಶಿಸಿ ಮಾತಾಡಿ ಸರಕಾರಿ ಸೌಳಭ್ಯಗಳ ಪ್ರಯೋಜನ ಪಡೆದುಕೊಳ್ಳಲು ಅನುಕೂಲವಾಗಲು ಜಿಲ್ಲೆಯಲ್ಲಿರುವ ಎಲ್ಲಾ ಟೈಲರ್ಗಳು ತಪ್ಪದೇ ಇ-ಶ್ರಮ್ ಕಾರ್ಡ್ ಮಾಡಿಕೊಳ್ಳಿ ಎಂದು ಸಲಹೆ ನೀಡಿದರು.ಆಧುನಿಕ ಜಗತ್ತಿನ ಸ್ಪರ್ಧತ್ಮಕ ರೆಡಿಮೆಡ್ ಪ್ಯಾಶನ್ ಯುಗದ ನಡುವೆಯೂ ಟೈಲರ್ಸ್ ಗಳು ತಮ್ಮ ವೃತ್ತಿಯನ್ನು ನಡೆಸುತ್ತಾ ಬಂದಿದೆ.ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಶನ್ ಮುಖಾಂತರ ಉತ್ತಮ ಸೇವೆಗಳು ಆಗಲಿ ಎಂದು ಶುಭಹಾರೈಸಿದರು. ಬಳಿಕ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಸುರತ್ಕಲ್ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಭರತ್ ಶೆಟ್ಟಿ ಮಾತಾಡಿ ಟೈಲರ್ ಗಳ ಬೇಡಿಕೆ ಹಾಗೂ ಅವರಿಗೆ ಸರ್ಕಾರದಿಂದ ನೆರವು ಒದಗಿಸುವ ಬಗ್ಗೆ ಮುಂದಿನ ವಿಧಾನ ಸಭಾ ಅಧಿವೇಶನದಲ್ಲಿ ಪ್ರಸ್ತಾಪಿಸುತ್ತೇನೆ ಎಂದರು. ಕರ್ನಾಟಕ ಸ್ಟೇಟ್ ಟೈಲರ್ಸ್…
ಸುಳ್ಯ, ಮಾ. 07 : ಬೆಳ್ಳಾರೆ ಸರಕಾರಿ ಆಸ್ಪತ್ರೆಯ ಹಳೆ ಕಟ್ಟಡ ಕೆಡವುತ್ತಿರುವ ವೇಳೆ ಗೋಡೆ ಕುಸಿದು ಕಾರ್ಮಿಕ ಸಾವನ್ನಪ್ಪಿದ ಘಟನೆ ನಡೆದಿದೆ. ಮೃತರನ್ನುಕಾರ್ಮಿಕ ಮಂಜುನಾಥ(23) ಎಂದು ಗುರುತಿಸಲಾಗಿದೆ. ಹಳೆ ಕಟ್ಟಡ ಕೆಡವುವ ಕಾರ್ಯ ನಡೆಯುತ್ತಿತ್ತು. ಊಟದ ವಿರಾಮದ ನಂತರ ಗೋಡೆ ಕೆಡವುತ್ತಿದ್ದಾಗ ಗೋಡೆ ಕುಸಿದು ಕಾರ್ಮಿಕ ಮಂಜುನಾಥ ಎಂಬವರ ಮೇಲೆ ಬಿದ್ದಿದೆ. ಕಲ್ಲುಗಳ ಅಡಿಗೆ ಸಿಲುಕಿದ ಅವರನ್ನು ಇತರ ಕಾರ್ಮಿಕರು ಹೊರತೆಗೆದು ತಕ್ಷಣವೇ ಆಸ್ಪತ್ರೆಗೆ ಕೊಂಡೊಯ್ದರಾದರೂ ಅಷ್ಟರಲ್ಲಿ ಅವರು ಕೊನೆಯುಸಿರೆಳೆದಿದ್ದರು.
ಪುತ್ತೂರು, ಮಾ. 06 : ಪೊಲೀಸ್ ಜೀಪ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ, ಬೈಕ್ ಸವಾರ ಮೃತಪಟ್ಟ ಘಟನೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಮಾಣಿ- ಮೈಸೂರು ರಾಷ್ಟ್ರೀಯ ಹೆದ್ದಾರಿಯ ಸಂಪ್ಯ ಬಳಿ ಮಾ.೫, ಭಾನುವಾರ ರಾತ್ರಿ ನಡೆದಿದೆ. ಮೃತರನ್ನುಪಾಣಾಜೆ ಕೃಷಿ ಪತ್ತಿನ ಸಹಕಾರಿ ಸಂಘದ ಕಾರ್ಯನಿರ್ವಹಣಾಧಿಕಾರಿ ಲಕ್ಷ್ಮಣ ನಾಯ್ಕ ಬಿ. (50) ಎಂದು ಗುರುತಿಸಲಾಗಿದೆ. ಪೊಲೀಸ್ ಜೀಪ್ ಸುಳ್ಯ ಕಡೆಯಿಂದ ಪುತ್ತೂರಿಗೆ ಆಗಮಿಸುತ್ತಿದ್ದರೆ, ಬೈಕ್ ಪುತ್ತೂರಿನಿಂದ ಆರ್ಲಪದವು ಕಡೆಗೆ ಸಂಚರಿಸುತ್ತಿದ್ದಾಗ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾರ್ಕಳ, ಮಾ. 04 : ಅನಾರೋಗ್ಯದಿಂದ ಮನನೊಂದು ವಿದ್ಯಾರ್ಥಿನಿಯೊಬ್ಬಳು ಕಾಲೇಜು ಹಾಸ್ಟೆಲ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳದ ನಿಟ್ಟೆಯಲ್ಲಿ ನಡೆದಿದೆ. ಮೃತರನ್ನು ಕುಂದಾಪುರ ಕರಾವಳಿ ಶಿರೂರು ನಿವಾಸಿ ಶೀಲಾವತಿ ಶೆಡ್ಡಿ ಎಂಬವರ ಮಗಳು ಸೀಮಾ (22) ಎಂದು ಗುರುತಿಸಲಾಗಿದೆ.ಇವರು ಕಾರ್ಕಳದ ನಿಟ್ಟೆ ಕಾಲೇಜಿನ ಅಂತಿಮ ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿನಿಯಾಗಿದ್ದು, ನಿಟ್ಟೆ ಕಾಲೇಜಿನ ಹಾಸ್ಟೆಲ್ ನಲ್ಲಿದ್ದರು. ಸೀಮಾ ಅವರು ನರ ಹಾಗೂ ಚರ್ಮದ ಸಮಸ್ಯೆಯಿಂದ ಬಳಲುತ್ತಿದ್ದು 4-5 ತಿಂಗಳ ಹಿಂದೆ ಮಾತ್ರೆಗಳನ್ನು ಸೇವಿಸಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದರು. ಇದೀಗ ಮತ್ತೆ ಅದೇ ಕಾರಣದಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳೂರು, ಮಾ. 03 : ಕರಾವಳಿಯಲ್ಲಿ ದಿನದಿಂದ ದಿನಕ್ಕೆ ಗರಿಷ್ಠ ಉಷ್ಣಾಂಶ ಏರಿಕೆ ಕಾಣುತ್ತಿದೆ. ಭಾರತೀಯ ಹವಾಮಾನ ಇಲಾಖೆಯ ಮಾಹಿತಿ ಪ್ರಕಾರ, ಮಂಗಳೂರಿನಲ್ಲಿ ಗುರುವಾರ 36.9 ಡಿ. ಸೆ ಗರಿಷ್ಠ ಉಷ್ಣಾಂಶ ದಾಖಲಾಗಿದ್ದು,ಇದು ದೇಶದಲ್ಲಿಯೇ ಅತ್ಯಧಿಕ ಎಂದು ವರದಿಯಾಗಿದೆ. ಅಲ್ಲದೇ ಇದು ವಾಡಿಕೆಗಿಂತ 3 ಡಿ.ಸೆ ಹೆಚ್ಚಳವಾಗಿದೆ. ಇದೇ ವೇಳೆ 23.8 ಡಿ.ಸೆ ಕನಿಷ್ಠ ತಾಪಮಾನ ದಾಖಲಾಗಿದ್ದು, 1 ಡಿ.ಸೆ ಏರಿಕೆಯಾಗಿದೆ











